ಸಿಜೆಪಿ ಧರಣಿ | ವಾಂಗ್‌ಚುಕ್ ಉಪವಾಸ ಸತ್ಯಾಗ್ರಹಕ್ಕೆ 15 ದಿನ; ಹದಗೆಟ್ಟ ಆರೋಗ್ಯ

Date:

ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಧರಣಿಯ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಸ್ಥಿತಿ ಭಾನುವಾರ ಮತ್ತಷ್ಟು ಹದಗೆಟ್ಟಿದೆ.

- Advertisement -

ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವು 15ನೇ ದಿನಕ್ಕೆ ಕಾಲಿಟ್ಟಿದ್ದು, ರಕ್ತದೊತ್ತಡದಲ್ಲಿ ತೀವ್ರ ಕುಸಿತ ಕಂಡುಬಂದಿದೆ. ಉಪವಾಸ ಆರಂಭವಾದಾಗಿನಿಂದ ಅವರು ಒಟ್ಟು 7.8 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ವಾಂಗ್‌ಚುಕ್ ಅವರ ರಕ್ತದೊತ್ತಡವು 104/66 mm Hg ಗೆ ಕುಸಿದಿದೆ ಎಂದು ಸಂಘಟನೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಇದನ್ನೂ ಓದಿ: ಸಿಜೆಪಿ ಧರಣಿಯಲ್ಲಿ ಭಾಗಿ: ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದ ಸೋನಮ್ ವಾಂಗ್‌ಚುಕ್

ಪರೀಕ್ಷಾ ಅಕ್ರಮಗಳ ವಿರುದ್ಧ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಯು ಇಂದು 23ನೇ ದಿನಕ್ಕೆ ತಲುಪಿದೆ. ಇಲ್ಲೇ ಸೋನಮ್ ವಾಂಗ್‌ಚುಕ್ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದ್ದಾರೆ.

ಇನ್ನು ಜುಲೈ 20ರಂದು ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಅಂದು ಹಮ್ಮಿಕೊಳ್ಳಲಾಗಿರುವ ಶಾಂತಿಯುತ ಸಂಸತ್ ಮಾರ್ಚ್‌ನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ವಾಂಗ್‌ಚುಕ್ ಕರೆ ನೀಡಿದ್ದಾರೆ. ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಸದರ ಮೇಲೆ ಒತ್ತಡ ಹೇರಲು ನಾಗರಿಕರು ಒಟ್ಟಾಗಿ ಬರಬೇಕು ಎಂದು ತಿಳಿಸಿದ್ದಾರೆ.

ಪ್ರತಿಭಟನೆಗೆ ಬೆಂಬಲ ಸೂಚಿಸಲು ಇಂದು ಹಲವು ರಾಜಕೀಯ ನಾಯಕರು ಮತ್ತು ಹೋರಾಟಗಾರರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಇನ್ನೂ ಹಲವು ಮಂದಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಕೇರಳದ ಮಾಜಿ ಸಚಿವರುಗಳಾದ ಕೆ.ಕೆ. ಶೈಲಜಾ, ಕೆ.ಎನ್. ಬಾಲಗೋಪಾಲ್ ಮತ್ತು ಪಿ. ರಾಜೀವ್ ಅವರು ಪ್ರತಿಭಟನಾಕಾರರೊಂದಿಗೆ ಸಂವಾದ ನಡೆಸಲಿದ್ದಾರೆ. ಸಮಾಜವಾದಿ ಪಕ್ಷದ ಸಂಸದ ಪುಷ್ಪೇಂದ್ರ ಸರೋಜ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಇಂದಿನ ಕಾರ್ಯಕ್ರಮವು ಅರ್ಥಶಾಸ್ತ್ರಜ್ಞೆ ಜಯತಿ ಘೋಷ್ ಅವರ “ದಿ ಎಕನಾಮಿಕ್ಸ್ ಆಫ್ ಅನ್‌ಎಂಪ್ಲಾಯ್‌ಮೆಂಟ್” (ನಿರುದ್ಯೋಗದ ಅರ್ಥಶಾಸ್ತ್ರ) ಎಂಬ ಸಾರ್ವಜನಿಕ ಉಪನ್ಯಾಸದೊಂದಿಗೆ ಮುಕ್ತಾಯಗೊಳ್ಳಲಿದೆ. ಇದು ಉದ್ಯೋಗ ಬಿಕ್ಕಟ್ಟು ಮತ್ತು ಯುವಜನರ ಮೇಲಿನ ಅದರ ಪ್ರಭಾವದ ಕುರಿತು ಬೆಳಕು ಚೆಲ್ಲಲಿದೆ ಎಂದು ಸಿಜೆಪಿ ತಿಳಿಸಿದೆ.

ಮತ್ತೊಂದೆಡೆ, CPI(ML) ಲಿಬರೇಶನ್ ಸಂಯೋಜಿತ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ಸದಸ್ಯರಾದ ನೇಹಾ, ಮನೀಶ್, ದೀಪಕ್ ಕುಮಾರ್ ವರ್ಮಾ ಮತ್ತು ಆಮೀನ್ ಅವರೂ ಪ್ರತಿಭಟನಾ ಸ್ಥಳದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಎಸ್‌ಸಿ ಮೀಸಲಾತಿ ಕೈಬಿಟ್ಟಿದ್ದಕ್ಕೆ ಆಕ್ರೋಶ: ಅ.16ರಂದು ಹೋರಾಟದ ಎಚ್ಚರ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ...

‘ನಮ್ಮನ್ನು ದಮನಿಸುವ ಪೊಲೀಸ್ ಆದೇಶ ಕೂಡಲೇ ರದ್ದಾಗಲಿ’: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಲಿಂಗತ್ವ ಅಲ್ಪಸಂಖ್ಯಾತರು

ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇತ್ತೀಚೆಗೆ ಹೊರಡಿಸಿರುವ...

ಎಸ್‌ಸಿ, ಎಸ್‌ಟಿ ಮೀಸಲಾತಿ ಶೇ.56ಕ್ಕೆ ಏರಿಕೆ ಮಾಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್!

ರಾಜ್ಯದ ಹಿಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ)...

ದೆಹಲಿಯಲ್ಲಿ ಹೆಚ್ಚಿದ ಕಟ್ಟೆಚ್ಚರ: ಒಂದು ತಿಂಗಳು 20,000 ಅರೆಸೇನಾ ಸಿಬ್ಬಂದಿ ನಿಯೋಜನೆ

ಪ್ರತಿಪಕ್ಷ 'ಇಂಡಿಯಾ' ಒಕ್ಕೂಟದ ಪ್ರತಿಭಟನೆ ಹಾಗೂ ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ...