ರಾಹುಲ್‌ಗೆ ವಿವಾಹವಾಗಿ, ಮಕ್ಕಳಾಗಿ ಸಂತಸವಾಗಿರಲೆಂದು ಬಯಸುತ್ತೇನೆ: ಪ್ರಿಯಾಂಕಾ ಗಾಂಧಿ

Date:

ಉತ್ತರ ಪ್ರದೇಶದ ರಾಯ್‌ಬರೇಲಿ ಹಾಗೂ ಅಮೇಥಿ ಲೋಕಸಭಾ ಕ್ಷೇತ್ರಗಳಲ್ಲಿ ರಾಹುಲ್‌ ಗಾಂಧಿ ಹಾಗೂ ಕಿಶೋರಿ ಲಾಲ್‌ ಶರ್ಮಾ ಪರವಾಗಿ ವ್ಯಾಪಕ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಮ್ಮ ಸಹೋದರನ ಖಾಸಗಿ ಬದುಕಿನ ಬಗ್ಗೆ ಮಾತನಾಡಿದ್ದಾರೆ.

- Advertisement -

ಪ್ರಚಾರದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಹೋದರಿಯಾಗಿ, ನನ್ನ ಸಹೋದರ ಸಂತೋಷವಾಗಿರಲೆಂದು ಬಯಸುತ್ತೇನೆ. ಆತ ಮದುವೆಯಾಗಿ, ತಂದೆಯಾಗಿ ಮಕ್ಕಳನ್ನು ಹೊಂದಿ ಸಂತಸವಾಗಿರಲೆಂದು ಬಯಸುತ್ತೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದೇ ಸಂದರ್ಭದಲ್ಲಿ ರಾಹುಲ್‌ ಅವರು ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾದರೆ ನಿಮಗೆ ಸಂತೋಷವೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕಾ, ಇಲ್ಲಿಯವರೆಗೂ ವಿಪಕ್ಷಗಳ ಒಕ್ಕೂಟ ಇಂಡಿಯಾ ಬಿಜೆಪಿಯ ಪ್ರಧಾನಿ ಮೋದಿ ವಿರುದ್ಧವಾಗಿ ಪ್ರಧಾನಮಂತ್ರಿ ಅಭ್ಯರ್ಥಿಯನ್ನಾಗಿ ಘೊಷಿಸಿಲ್ಲ. ಲೋಕಸಭಾ ಚುನಾವಣೆಯ ನಂತರ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರು, ಮಾಧ್ಯಮಗಳು ಮತ್ತು ಮೂರು ಕೊಲೆಗಳು

ಈ ಮೊದಲು ಅಮೇಥಿ ಅಥವಾ ರಾಯಬರೇಲಿ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಹರಡಿದ್ದವು. ಆದರೆ ಅಂತಿಮವಾಗಿ ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿದ್ದ ರಾಯ್‌ಬರೇಲಿಯಲ್ಲಿ ರಾಹುಲ್‌ ಗಾಂಧಿ ಹಾಗೂ ರಾಹುಲ್‌ ಪ್ರತಿನಿಧಿಸಿದ್ದ ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಕಣಕ್ಕಿಳಿದಿದ್ದಾರೆ. ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ರಾಯ್‌ಬರೇಲಿ ಹಾಗೂ ಅಮೇಥಿ ಲೋಕಸಭಾ ಕ್ಷೇತ್ರಗಳಲ್ಲಿ ಪ್ರಿಯಾಂಕಾ ಗಾಂಧಿ ಬಿರುಸಿನ ಪ್ರಚಾರ ನಡೆಸುತ್ತಿದ್ದು, ಸೋನಿಯಾ ಗಾಂಧಿ ಕೂಡ ಇಂದು ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ.

ದೇಶದ ಒಟ್ಟು 49 ಕ್ಷೇತ್ರಗಳನ್ನು ಒಳಗೊಂಡು ಇವೆರೆಡು ಕ್ಷೇತ್ರಗಳಲ್ಲಿ ಮೇ.20 ರಂದು ಐದನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...