ಓಲಾ ಎಲೆಕ್ಟ್ರಿಕ್ ಸಂಸ್ಥಾಪಕ ಭವಿಷ್ ಅಗರ್ವಾಲ್ ವಿರುದ್ಧ ಬಂಧನ ವಾರೆಂಟ್‌

Date:

ರಿಪೇರಿಗಾಗಿ ಓಲಾ ಎಲೆಕ್ಟ್ರಿಕ್‌ ಕಂಪನಿಯ ಸರ್ವೀಸ್‌ ಕೇಂದ್ರಕ್ಕೆ ನೀಡಿದ್ದ ಸ್ಕೂಟರ್‌ಅನ್ನು ಗ್ರಾಹಕರಿಗೆ ಮರಳಿಸದ ಮತ್ತು ಗ್ರಾಹಕರ ದೂರಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ, ಓಲಾ ಎಲೆಕ್ಟ್ರಿಕ್ ಸಂಸ್ಥಾಪಕ ಭವಿಷ್ ಅಗರ್ವಾಲ್ ವಿರುದ್ಧ ಬಂಧನ ವಾರೆಂಟ್‌ ಹೊರಡಿಸಲಾಗಿದೆ. ದಕ್ಷಿಣ ಗೋವಾದ ಜಿಲ್ಲಾ ‘ಗ್ರಾಹಕ ವಿವಾದಗಳ ಪರಿಹಾರ ಆಯೋಗ’ವು ಜಾಮೀನು ಸಹಿತ ವಾರಂಟ್ ಜಾರಿ ಮಾಡಿದೆ.

- Advertisement -

ಪ್ರಿತೇಶ್ ಚಂದ್ರಕಾಂತ್ ಘಾಡಿ ಎಂಬವರು ಸಲ್ಲಿಸಿದ್ದ ದೂರನ್ನು ಗ್ರಾಹಕ ಅಯೋಗವು ವಿಚಾರಣೆ ನಡೆಸಿದೆ. ಚಂದ್ರಕಾಂತ್ ಅವರು ದೂರಿನಲ್ಲಿ; “ತಮ್ಮ ವಾಹನವನ್ನು ರಿಪೇರಿಗಾಗಿ ವಾಸ್ಕೋದಲ್ಲಿರುವ ಓಲಾ ಎಲೆಕ್ಟ್ರಿಕ್ ಡೀಲರ್‌ಗೆ 2025ರ ನವೆಂಬರ್‌ನಲ್ಲಿ ಹಸ್ತಾಂತರಿಸಲಾಗಿತ್ತು. ಆದರೆ, ಪ್ರಸ್ತುತ ಆ ವಾಹನ ಎಲ್ಲಿದೆ ಎಂಬ ಮಾಹಿತಿ ಇಲ್ಲ. ತಮ್ಮ ಓಲಾ ದ್ವಿಚಕ್ರ ವಾಹನದ ಬಗ್ಗೆ ಕಂಪನಿಯು ಮಾಹಿತಿ ನೀಡುತ್ತಿಲ್ಲ. ತಮ್ಮ ಸ್ಕೂಟರ್‌ಅನ್ನು ಮರಳಿ ಕೊಡಿಸಬೇಕು” ಎಂದು ಮನವಿ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಹಿಂದೆ, ವಿಚಾರಣೆ ನಡೆಸಿದ್ದ ಆಯೋಗವು, “ದ್ವಿಚಕ್ರ ವಾಹನದ ಕುರಿತು ದೂರುದಾರರಿಗೆ ಯಾಕೆ ಮಾಹಿತಿ ನೀಡಿಲ್ಲ ಮತ್ತು ವಾಹನವನ್ನು ಈವರೆಗೆ ಯಾಕೆ ಹಿಂದಿರುಗಿಸಿಲ್ಲ ಎಂಬುದರ ಕುರಿತು ವಿವರಣೆ ನೀಡಲು ಓಲಾ ಎಲೆಕ್ಟ್ರಿಕ್ ಲಿಮಿಟೆಡ್‌ನ ಸಿಇಒ, ಸಂಸ್ಥಾಪಕ ಭವಿಷ್ ಅಗರ್ವಾಲ್ ಅವರು ಫೆಬ್ರವರಿ 4ರಂದು ಖುದ್ದಾಗಿ ಹಾಜರಾಗಬೇಕು” ಎಂದು ಆದೇಶಿಸಿತ್ತು.

ಆದರೆ, ಫೆಬ್ರವರಿ 4 ರಂದು ನಡೆದ ವಿಚಾರಣೆಯಲ್ಲಿ ಅಗರ್ವಾಲ್ ಹಾಜರಾಗಲಿಲ್ಲ. ಈ ಹಿನ್ನೆಲೆಯಲ್ಲಿ, ಇದೀಗ ಆಯೋಗವು ಅವರ ವಿರುದ್ಧ ಜಾಮೀನು ಸಹಿತ ವಾರಂಟ್ ಹೊರಡಿಸಿದೆ. ಆದೇಶದ ಪ್ರಕಾರ, “ಓಲಾ ಎಲೆಕ್ಟ್ರಿಕ್ ಲಿಮಿಟೆಡ್‌ನ ಸಿಇಒ, ಸಂಸ್ಥಾಪಕ ಭವಿಷ್ ಅಗರ್ವಾಲ್ ವಿರುದ್ಧ 1,47,499 ರೂ. ಮೊತ್ತದ ಜಾಮೀನು ಸಹಿತ ವಾರಂಟ್ ಅನ್ನು ಬೆಂಗಳೂರಿನ ಸಂಬಂಧಪಟ್ಟ ಪೊಲೀಸ್ ಠಾಣೆಯ ಮೂಲಕ ಜಾರಿಗೊಳಿಸಬೇಕು” ಎಂದು ಹೇಳಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 23ಕ್ಕೆ ನಿಗದಿ ಮಾಡಿದೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...