ನ್ಯಾಯಾಂಗದಲ್ಲಿ ಮಹಿಳಾ ನೇಮಕಾತಿ | ಕರ್ನಾಟಕದಿಂದ ಸಾಮಾಜಿಕ ಪರಿವರ್ತನೆ: ಸಿಜೆಐ ಚಂದ್ರಚೂಡ್‌

Date:

Advertisements

“ದೇಶದಲ್ಲಿಯೇ ಜಿಲ್ಲಾ ನ್ಯಾಯಾಂಗಕ್ಕೆ ಸಂಬಂಧಿಸಿದಂತೆ ಮಹಿಳಾ ನೇಮಕಾತಿ ವಿಚಾರದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದ್ದು, ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುತ್ತಿದೆ” ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಚಂದ್ರಚೂಡ್‌ ಶ್ಲಾಘಿಸಿದ್ದಾರೆ.

ಬೆಂಗಳೂರಿನ ಜಿಕೆವಿಕೆಯಲ್ಲಿನ ಬಾಬು ರಾಜೇಂದ್ರ ಪ್ರಸಾದ್ ಇಂಟರ್‌ನ್ಯಾಷನಲ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಶನಿವಾರ ಆಯೋಜಿಸಲಾಗಿದ್ದ 21ನೇ ದ್ವೈವಾರ್ಷಿಕ ರಾಜ್ಯಮಟ್ಟದ ನ್ಯಾಯಾಂಗ ಅಧಿಕಾರಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು.

“ದೇಶಾದ್ಯಂತ ಜಿಲ್ಲಾ ನ್ಯಾಯಾಂಗದಲ್ಲಿ ಮಹಿಳೆಯರ ಬಲವು ಶೇ 37ರಷ್ಟಿದೆ. ಕರ್ನಾಟಕದಲ್ಲಿ ಜಿಲ್ಲಾ ನ್ಯಾಯಾಂಗದಲ್ಲಿನ ನೇಮಕಾತಿಯು ಭರವಸೆ ಮೂಡಿಸುವಂತಿದೆ. ಇಲ್ಲಿ ಒಟ್ಟಾರೆ ಕರ್ತವ್ಯನಿರತ ಸಿವಿಲ್‌ ನ್ಯಾಯಾಧೀಶರು 447 ಮಂದಿ ಇದ್ದು, 200 ಮಂದಿ ನ್ಯಾಯಾಧೀಶರು ಮಹಿಳೆಯರೇ ಇದ್ದಾರೆ. ಇದು ಸುಮಾರು ಶೇ. 44ರಷ್ಟಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕವು ಭಾರತದಾದ್ಯಂತ ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುತ್ತಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisements

ಜಿಲ್ಲಾ ನ್ಯಾಯಾಂಗದಲ್ಲಿನ ಸೌಲಭ್ಯ ಕುರಿತು ಮಾತನಾಡಿದ ಡಿವೈ ಚಂದ್ರಚೂಡ್, “ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯವಿದ್ದರೆ ಸಾಲದು, ಸ್ವಚ್ಛವಾದ ನ್ಯಾಪ್ಕಿನ್‌ ಒದಗಿಸುವ ಯಂತ್ರಗಳನ್ನೂ ಅಳವಡಿಸಬೇಕು. ಇದು ದೇಶಾದ್ಯಂತ ಇರುವ ಎಲ್ಲ ಜಿಲ್ಲಾ ನ್ಯಾಯಾಲಯಗಳಲ್ಲಿಯೂ ಆಗಬೇಕು. ಭಾರತೀಯ ನ್ಯಾಯಾಂಗದಲ್ಲಿ ಮಹಿಳಾ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿರುವುದನ್ನು ಮರೆಯಬಾರದು. ವಕೀಲರು ಮತ್ತು ನ್ಯಾಯಮೂರ್ತಿಗಳಂತೆ ಅವರಿಗೂ ಈ ಸೌಲಭ್ಯ ಅಗತ್ಯವಾಗಿದೆ” ಇದೇ ವೇಳೆ ತಿಳಿಸಿದರು.

“ವಿಡಿಯೋವನ್ನು ತಿರುಚುವ ಮೂಲಕ ನನ್ನನ್ನು ದುರಹಂಕಾರಿ ಎಂದು ಟ್ರೋಲ್ ಮಾಡಿದ್ದಾರೆ” ಎಂದ ಸಿಜೆಐ!

“ಇತ್ತೀಚೆಗೆ ನನ್ನ ಕೋರ್ಟ್‌ ಕಲಾಪದಲ್ಲಿನ ವಿಡಿಯೋ ಒಂದನ್ನು ತಿರುಚುವ ಮೂಲಕ ನನ್ನನ್ನು ದುರಹಂಕಾರಿ ಎಂದು ಜರೆಯಲಾಗಿದೆ. ಸೋಷಿಯಲ್ ಮೀಡಿಯಾಗಳಲ್ಲಿ ನನ್ನನ್ನೂ ಕೂಡ ಟ್ರೋಲ್ ಮಾಡಲಾಗುತ್ತಿದೆ” ಎಂದು ಸಿಜೆಐ ಅವರು ಆನ್‌ಲೈನ್‌ನಲ್ಲಿ ನಡೆಯುವ ಚಾರಿತ್ರ್ಯವಧೆಯ ಬಗ್ಗೆ ಗಮನಸೆಳೆದರು.

“ಬೆನ್ನು ನೋವಿನ ಹಿನ್ನೆಲೆಯಲ್ಲಿ ಕುರ್ಚಿಯನ್ನು ಸರಿ ಹೊಂದಿಸಲು ಪ್ರಯತ್ನಿಸಿದ್ದೆ. ಲೈವ್‌ ಸ್ಟ್ರೀಮಿಂಗ್‌ ವಿಡಿಯೋವನ್ನು ತಿರುಚಿ ನಾನು ವಿಚಾರಣೆ ನಡೆಯುತ್ತಿರುವಾಗ ಪೀಠ ತೊರೆದೆ ಎನ್ನುವ ರೀತಿಯಲ್ಲಿ ಬಿಂಬಿಸಲಾಗಿದೆ. ಈ ತಿರುಚಿದ ವಿಡಿಯೊ ಆನ್‌ಲೈನ್‌ನಲ್ಲಿ ಬರುತ್ತಿದ್ದಂತೆ ನನ್ನ ಮೇಲೆ ವ್ಯಾಪಕ ಟೀಕಾತ್ಮಕ ದಾಳಿ ಮಾಡಿ, ಟ್ರೋಲ್‌ ಮಾಡಲಾಯಿತು” ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ತಿಳಿಸಿದರು.

(ಡಿವೈ ಚಂದ್ರಚೂಡ್ ಅವರು ತಮ್ಮ ಕುರ್ಚಿಯನ್ನು ಸರಿಪಡಿಸುತ್ತಿರುವುದು 27:06 ನಿಮಿಷದ ವೇಳೆ ಕಾಣಬಹುದು)

“ಯಾವುದೇ ಭಯ ಅಥವಾ ಪಕ್ಷಪಾತವಿಲ್ಲದೇ ಕರ್ತವ್ಯ ನಿಭಾಯಿಸುವ ಪ್ರಮುಖ ಜವಾಬ್ದಾರಿಯನ್ನು ನ್ಯಾಯಾಂಗ ಅಧಿಕಾರಿಗಳಿಗೆ ನೀಡಲಾಗಿದೆ. ಜಾಮೀನು ಅರ್ಜಿಯನ್ನು ನಿರ್ಧರಿಸುವಾಗ ಯಾವುದೇ ಭಯ ಅಥವಾ ಪಕ್ಷಪಾತ ಇಲ್ಲ ಎಂಬುದನ್ನು ನೆನಪಿನಲ್ಲಿಡಬೇಕು. ನಿಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇಡಿ, ಪ್ರಕರಣ ನಿರ್ಧರಿಸುವಾಗ ಹೆದರಬೇಡಿ. ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ನಿಮ್ಮ ಬೆಂಬಲಕ್ಕೆ ನಿಲ್ಲಲಿವೆ. ಆದರೆ, ನೀವು ನಿಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇಡಬೇಕು” ಎಂದು ಇದೇ ವೇಳೆ ವಿಶ್ವಾಸ ತುಂಬಿದರು.

ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಆಧುನಿಕ ಭಾರತದ ನ್ಯಾಯಾಂಗ ವ್ಯವಸ್ಥೆಯು ಬುದ್ದ, ಬಸವಣ್ಣ ಮತ್ತು ನಾರಾಯಣ ಗುರು ಅವರ ಬೋಧನೆಯ ಮೌಲ್ಯಗಳನ್ನು ಒಳಗೊಂಡಿದೆ. ವಚನಗಳು ಮತ್ತು ಪ್ರಗತಿಪರ ಚಿಂತಕರು ಸಮಗ್ರ ಸಹಾನುಭೂತಿ ಮತ್ತು ಸಾಮಾಜಿಕ ಪರಿವರ್ತನೆ ಪ್ರತಿಪಾದಿಸಿದ್ದಾರೆ. ಜನರ ಹಕ್ಕುಗಳನ್ನು ಎತ್ತಿ ಹಿಡಿಯುವ ಐತಿಹಾಸಿಕ ತೀರ್ಪುಗಳನ್ನು ನೀಡುವ ಮೂಲಕ ಭಾರತದ ನ್ಯಾಯಾಂಗವು ದೇಶ ಹೆಮ್ಮೆಪಡುವಂತೆ ಮಾಡಿದೆ. ಸಂವಿಧಾನದ 32ನೇ ವಿಧಿಯು ಸಂವಿಧಾನದ ಹೃದಯ ಮತ್ತು ಆತ್ಮ ಎಂದಿದ್ದ ಭಾರತದ ಸಂವಿಧಾನದ ಕರ್ತೃ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ನಿರೀಕ್ಷೆಯನ್ನು ಸುಪ್ರೀಂ ಕೋರ್ಟ್‌ ನಿಜಗೊಳಿಸಿದೆ” ಎಂದು ಹೇಳಿದರು.

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಎ ಎಸ್‌ ಬೋಪಣ್ಣ, ಬಿ ವಿ ನಾಗರತ್ನ ಮತ್ತು ಅರವಿಂದ್‌ ಕುಮಾರ್‌, ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಸಮಾರಂಭದಲ್ಲಿ ಮಾತನಾಡಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X