ಗುರುಗ್ರಾಮ ಹಿಂಸಾಚಾರ ಕುರಿತ ಟ್ವೀಟ್‌ ನನ್ನದಲ್ಲ; ಖಾತೆ ಹ್ಯಾಕ್‌ ಆಗಿತ್ತು ಎಂದ ಬಾಲಿವುಡ್‌ ನಟ ಗೋವಿಂದ

Date:

ಹರಿಯಾಣ ಗಲಭೆ ಕುರಿತಂತೆ ಮಾಡಿದ ಪೋಸ್ಟ್‌ ನಂತರ ನಟ ಗೋವಿಂದ ತಮ್ಮ ಟ್ವಿಟರ್‌ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ ಎನ್ನಲಾಗಿದೆ.

- Advertisement -

ಗುರುವಾರ ಇನ್‌ಸ್ಟಾಗ್ರಾಂ ಪೋಸ್ಟ್‌ ಒಂದನ್ನು ಮಾಡಿದ ಗೋವಿಂದ ತಮ್ಮ ಟ್ವಿಟರ್‌ ಖಾತೆಯನ್ನು ಹ್ಯಾಕ್‌ ಮಾಡಲಾಗಿತ್ತು ಎಂದಿದ್ದಾರೆ. ತಾನು ಯಾವುದೇ ಟ್ವೀಟ್‌ ಮಾಡಿಲ್ಲ, ತನ್ನ ತಂಡವೂ ಟ್ವೀಟ್‌ ಮಾಡಿಲ್ಲ ಎಂದು ಇನ್‌ಸ್ಟಾಗ್ರಾಂ ವಿಡಿಯೋ ಮೂಲಕ ನಟ ಹೇಳಿದ್ದಾರೆ. ಸೈಬರ್‌ ಕ್ರೈಂ ಘಟಕಕ್ಕೆ ದೂರು ಸಲ್ಲಿಸುವುದಾಗಿಯೂ ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬುಧವಾರ(ಆಗಸ್ಟ್ 2) @ಗೋವಿಂದಅಹುಜಾ21 ಎಂಬ ಖಾತೆಯಿಂದ ಗುರುಗ್ರಾಮ ಹಿಂಸಾಚಾರ ಕುರಿತು ಟ್ವೀಟ್‌ ಒಂದನ್ನು ಮಾಡಲಾಗಿತ್ತು. ಆದರೆ ತಾನು ಆ ಖಾತೆಯನ್ನು ಬಹಳ ಸಮಯದಿಂದ ಬಳಸಿಲ್ಲ ಎಂದು ಗೋವಿಂದ ಹೇಳಿದ್ದಾರಲ್ಲದೆ ಚುನಾವಣೆ ಸಮಯ ಹತ್ತಿರ ಬರುತ್ತಿರುವುದರಿಂದ ನಾನು ಒಂದು ಪಕ್ಷದ ಪರ ಕಣಕ್ಕಿಳಿಯಬಹುದೆಂದು ಕೆಲ ಜನರು ಅಂದುಕೊಂಡು ಈ ಟ್ವೀಟ್‌ ಮಾಡಿರಬಹುದು. ಆದರೆ ನಾನು ಟ್ವೀಟ್‌ ಮಾಡಿಲ್ಲ, ಇಂತಹ ವಿಷಯಗಳ ಬಗ್ಗೆ ಮಾತನಾಡುವುದೂ ಇಲ್ಲ,” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ ಜೀನ್ಸ್‌ ಘಟಕಗಳಿಗೆ ಸೌಲಭ್ಯ ಕಲ್ಪಿಸಿ: ರಾಜ್ಯ ಸರ್ಕಾರಕ್ಕೆ ರಾಹುಲ್‌ ಪತ್ರ

ಗುರುಗ್ರಾಮದಲ್ಲಿ ಮುಸ್ಲಿಮರ ಅಂಗಡಿಗಳ ಮೇಲಿನ ದಾಳಿ ಸಂಬಂಧಿತ ವಿಡಿಯೋವೊಂದಕ್ಕೆ ಉತ್ತರಿಸಿದ್ದ ಗೋವಿಂದ ಹೆಸರಿನ ಟ್ವಿಟರ್‌ ಖಾತೆಯು “ನಾವೆಷ್ಟು ಕೆಳಮಟ್ಟಕ್ಕೆ ಇಳಿದಿದ್ದೇವೆ. ತಮ್ಮನ್ನು ಹಿಂದುಗಳೆಂದು ಹೇಳಿಕೊಂಡು ನಂತರ ಇಂತಹ ಕೃತ್ಯಗಳನ್ನು ನಡೆಸುವವರಿಗೆ ನಾಚಿಕೆಯಾಗಬೇಕು. ಶಾಂತಿ ಕಾಪಾಡಿ, ನಮ್ಮದು ಡೆಮಾಕ್ರೆಸಿ, ಅಟಾಕ್ರೆಸಿ ಅಲ್ಲ,” ಎಂದು ಟ್ವೀಟ್‌ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...