ಏರ್ ಇಂಡಿಯಾ ವಿಮಾನದಲ್ಲಿ ಸೋರಿದ ನೀರು: ವೈರಲ್ ಆದ ವಿಡಿಯೋ

Date:

ಪ್ರಯಾಣಿಸುವ ಸಂದರ್ಭದಲ್ಲಿ ಏರ್‌ ಇಂಡಿಯಾ ವಿಮಾನದಲ್ಲಿ ಮೇಲಿನಿಂದ ನೀರು ಸೋರುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಬಾಲ್ಡ್‌ವೈನರ್‌ ಎಂಬ ಖಾತೆದಾರರು ಟ್ವಟರ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, ದೃಶ್ಯದಲ್ಲಿರುವಂತೆ ವಿಮಾನದಲ್ಲಿ ಪ್ರಯಾಣಿಕರು ನಿದ್ರಿಸುತ್ತಿರುವಾಗ ವಸ್ತುಗಳನ್ನು ಇಡುವ ಲಗೇಜ್‌ ಸ್ಥಳದಿಂದ ಪ್ರಯಾಣಿಕರ ಸೀಟಿಗೆ ನೀರು ಸೋರುತ್ತಿತ್ತು.

“ನಮ್ಮೊಂದಿಗೆ ಪ್ರಯಾಣಿಸಿ ಎನ್ನುವ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿದರೆ ಮುಳುಗುವ ಅನುಭವವಾಗುವುದು ಖಂಡಿತಾ” ಎಂಬ ಶೀರ್ಷಿಕೆ ನೀಡಿ ಬಳಕೆದಾರರು ಪೋಸ್ಟ್ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದೃಶ್ಯ ಯಾವ ವಿಮಾನದ್ದು ಎಂಬುದು ಖಚಿತವಾಗದಿದ್ದರೂ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಬಳಕೆದಾರರು ಏರ್‌ ಇಂಡಿಯಾ ವಿಮಾನದಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಯಾವ ಕಾರಣಕ್ಕಾಗಿ ನೀರು ಸೋರಿಕೆಯಾಗಿದೆ ಎಂಬುದು ಸರಿಯಾಗಿ ತಿಳಿದಿಲ್ಲ. ಟ್ವಿಟರ್‌ನಲ್ಲಿ ಈ ಪೋಸ್ಟ್‌ಗೆ ಕೆಲವರು ತಾಂತ್ರಿಕ ದೋಷ ಎಂದು ಪ್ರತಿಕ್ರಿಯೆ ನೀಡಿದರೆ ಮತ್ತು ಹಲವರು ಏರ್‌ ಇಂಡಿಯಾದ ಕಳಪೆ ಸೇವೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರೊ. ಅರ್ನಾಲ್ಡ್ ಡಿಕ್ಸ್ : ಉತ್ತರಾಖಂಡ ಸುರಂಗ ರಕ್ಷಣಾ ಕಾರ್ಯಾಚರಣೆಯ ಹಿಂದಿನ ಶಕ್ತಿ

“ಇದು ಏರ್‌ ಇಂಡಿಯಾದ ಬೇಜವಾಬ್ದಾರಿಯಾಗಿದೆ. ನೀರು ಸೋರಿಕೆಯಿಂದ ವಿಮಾನದಲ್ಲಿ ತಾಂತ್ರಿಕ ದೋಷವುಂಟಾಗಿ ತೊಂದರೆಯುಂಟಾಗುವ ಸಾಧ್ಯತೆಯಿದೆ. ಅಪಾಯದ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ” ಎಂದು ಬಳಕೆದಾರರೊಬ್ಬರು ಉತ್ತರ ನೀಡಿದ್ದಾರೆ.

“ಇದು ನೀರು, ಇಂಧನವಲ್ಲ, ಹಾನಿಕಾರಕ ದ್ರವವಲ್ಲ. ಓವರ್‌ ಹೆಡ್‌ ಟ್ಯಾಂಕ್‌ ಅಂತೂ ಅಲ್ಲವೇ ಅಲ್ಲ” ಎಂದು ಮತ್ತೊಬ್ಬ ನೆಟ್ಟಿಗರು ಅಭಿಪ್ರಾಯ ಪಟ್ಟಿದ್ದಾರೆ.

ಘಟನೆ ಬಗ್ಗೆ ಏರ್‌ಇಂಡಿಯಾ ಸಮಸ್ಥೆ ಇಲ್ಲಿಯವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸೋಲಿನಿಂದ ಮಾತ್ರ ಹಿಂದೂ ರಾಷ್ಟ್ರ ಸಾಧ್ಯ: ಸುಬ್ರಮಣಿಯನ್ ಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ...

ಸ್ಪ್ಯಾನಿಷ್ ಪ್ರವಾಸಿ ಮೇಲೆ ಗ್ಯಾಂಗ್ ರೇಪ್- ಮೂವರಿಗೆ ನ್ಯಾಯಾಂಗ ಬಂಧನ

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಸ್ಪ್ಯಾನಿಷ್ ಪ್ರವಾಸಿ ಮಹಿಳೆಯ ಸಾಮೂಹಿಕ ಅತ್ಯಾಚಾರ (ಗ್ಯಾಂಗ್...

ವಿಡಿಯೋ ಕಾನ್ಫರೆನ್ಸ್ ಮೂಲಕ ಇ.ಡಿ ವಿಚಾರಣೆಗೆ ಸಿದ್ಧ: ಅರವಿಂದ್ ಕೇಜ್ರಿವಾಲ್

ದೆಹಲಿ ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ...

ಮೀನಾಕ್ಷಿ ಲೇಖಿಗೆ ಕೈತಪ್ಪಿದ ಬಿಜೆಪಿ ಟಿಕೆಟ್: ಮಂಗಳೂರಿನಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮ ಮುಂದೂಡಿಕೆ!

ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಬಿಜೆಪಿ ಅಳೆದು ತೂಗಿ ಅಭ್ಯರ್ಥಿಗಳ...