ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು ಅಥವಾ ಸಂಗ್ರಹಿಸುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ ಕಾಯ್ದೆ) ಅಡಿಯಲ್ಲಿ ಅಪರಾಧ ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ.
ಮಕ್ಕಳ ಅಶ್ಲೀಲ ಚಿತ್ರಗಳನ್ನು ‘ಮಕ್ಕಳ ಲೈಂಗಿಕ ದೌರ್ಜನ್ಯ ಮತ್ತು ಶೋಷಣೆಯ ವಿಷಯ’ ಎಂದು ಉಲ್ಲೇಖಿಸಲು ಸಂಸತ್ತು ಸುಗ್ರೀವಾಜ್ಞೆಯನ್ನು ತರಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಅವರ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಈ ತೀರ್ಪನ್ನು ನೀಡಿದೆ.
ಇದನ್ನು ಓದಿದ್ದೀರಾ? ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ಸೆಪ್ಟೆಂಬರ್ 27ಕ್ಕೆ ವಿಚಾರಣೆ ಮುಂದೂಡಿಕೆ
ಈ ಮೂಲಕ ಯಾವುದೇ ಉದ್ದೇಶವಿಲ್ಲದೆ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ವೀಕ್ಷಿಸುವುದು ಅಪರಾಧವಲ್ಲ ಎಂದು ಘೋಷಿಸಿದ್ದ ಇತ್ತೀಚಿನ ಮದ್ರಾಸ್ ಹೈಕೋರ್ಟ್ ತೀರ್ಪನ್ನು ತಳ್ಳಿಹಾಕಿದೆ.
#BREAKING Supreme Court suggests parliament to bring an ordinance so that Child Pornography is now referred to as "child sexually abusive and exploitative material."
— Bar and Bench (@barandbench) September 23, 2024
SC holds that to establish offence under Section 15(3) POCSO, apart from storage of child pornographic material,… pic.twitter.com/zbpKQpMPGB
