ಭ್ರಷ್ಟಾಚಾರ ತಡೆಯುವ ಬದಲು ಯುವಕರ ಮೇಲೆ ಲಾಠಿ ಚಾರ್ಜ್‌: ಪ್ರಿಯಾಂಕಾ ಗಾಂಧಿ ಆಕ್ರೋಶ

Date:

ಬಿಪಿಎಸ್‌ಸಿ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಮರು ಪರೀಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸುತ್ತಿದ್ದ ಬಿಹಾರ ಲೋಕಸೇವಾ ಆಯೋಗದ ಪರೀಕ್ಷಾ ಆಂಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿರುವುದಕ್ಕೆ ಬಿಹಾರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕಿ ಹಾಗೂ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಪ್ರಿಯಾಂಕಾ ಗಾಂಧಿ, “ಬಿಹಾರದಲ್ಲಿ ಕಳೆದ ಮೂರು ದಿನದಲ್ಲಿ ಎರಡನೇ ಬಾರಿ ಹಲ್ಲೆ ನಡೆಸಲಾಗುತ್ತಿದೆ. ಪರೀಕ್ಷೆಗಳಲ್ಲಿ ಭ್ರಷ್ಟಾಚಾರ ತಡೆಯುವುದು, ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಡಿವಾಣ ಹಾಕುವುದು ಸರ್ಕಾರದ ಕೆಲಸ. ಆದರೆ ಭ್ರಷ್ಟಾಚಾರ ತಡೆಯುವ ಬದಲು ಅದರ ವಿರುದ್ಧ ಧ್ವನಿ ಎತ್ತುತ್ತಿರುವ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಚಳಿಯಲ್ಲೂ ವಿದ್ಯಾರ್ಥಿಗಳ ಮೇಲೆ ಜಲಪಿರಂಗಿ ಹಾಗೂ ಲಾಠಿ ಚಾರ್ಜ್‌ ಮಾಡುತ್ತಿರುವುದು ಅಮಾನವೀಯ. ಬಿಜೆಪಿಯ ಡಬಲ್‌ ಇಂಜಿನ್‌ ಸರ್ಕಾರ ವಿದ್ಯಾರ್ಥಿಗಳ ಮೇಲಿನ ಡಬಲ್‌ ದೌರ್ಜನ್ಯದ ಸಂಕೇತವಾಗಿದೆ” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಬಿಹಾರ ಸರ್ಕಾರ ಪರೀಕ್ಷೆಗಳಲ್ಲಿ ನಡೆಸುತ್ತಿರುವ ಭ್ರಷ್ಟಾಚಾರದ ನಡೆಯನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಕೂಡ ಕಳೆದ ವಾರ ಕಿಡಿಕಾರಿದ್ದರು. ಪರೀಕ್ಷಾ ಅಕ್ರಮವನ್ನು ಏಕಲವ್ಯ ಹೆಬ್ಬೆರಳು ದಾನ ಮಾಡಿದ ಘಟನೆಗೆ ಹೋಲಿಸಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆಯ ಮೂಲಕ ಬಿಹಾರ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯವನ್ನು ತುಂಡರಿಸುತ್ತಿದೆ ಎಂದು ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಗೆ ಸಂಸದೀಯ ವ್ಯವಸ್ಥೆಯ ಇತಿಹಾಸ ತಿಳಿಸುವ ತುರ್ತು ಅಗತ್ಯವಿದೆ

ಅಕ್ರಮ ನಡೆದಿರುವ ಹಿನ್ನೆಲೆಯಲ್ಲಿ ಬಿಹಾರ ಲೋಕಸೇವಾ ಆಯೋಗದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಡಿಸೆಂಬರ್‌ 13 ರಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಜಲಪಿರಂಗಿ ಹಾಗೂ ಲಾಠಿ ಚಾರ್ಜ್‌ ನಡೆಸಿದ್ದರು.

ಪೊಲೀಸರ ದಬ್ಬಾಳಿಕೆಯನ್ನು ಆರ್‌ಜೆಡಿಯ ನಾಯಕ ತೇಜಸ್ವಿ ಯಾದವ್‌ ಕೂಡ ಖಂಡಿಸಿದ್ದಾರೆ. “ಪೊಲೀಸರು ಬಿಪಿಎಸ್‌ಸಿ ಆಕಾಂಕ್ಷಿಗಳ ಮೇಲೆ ಹಲ್ಲೆ ನಡೆಸಿರುವುದು ತುಂಬ ಆಘಾತಕಾರಿ ಸಂಗತಿ. ಹಲ್ಲೆ ನಡೆಸುತ್ತಿರುವ ದೃಶ್ಯಗಳನ್ನು ನೋಡಿದರೆ ನೋವುಂಟಾಗುತ್ತದೆ. ನಾನು ಯುವಕನಾಗಿದ್ದು, ವಿದ್ಯಾರ್ಥಿಗಳ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತೇನೆ” ಎಂದು ತಿಳಿಸಿದ್ದಾರೆ.

ಬಿಹಾರದ ಘಟನೆಯನ್ನು ಎಎಪಿ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

https://twitter.com/priyankagandhi/status/1873573195124535741?ref_src=twsrc%5Etfw%7Ctwcamp%5Etweetembed%7Ctwterm%5E1873573195124535741%7Ctwgr%5Ede16c350b0477601b784f43d118d1c861e229391%7Ctwcon%5Es1_&ref_url=https%3A%2F%2Ftimesofindia.indiatimes.com%2Findia%2Fwater-cannon-lathi-charge-in-this-harsh-cold-inhuman-priyanka-gandhi-vadra-slams-bihar-govt-over-bpsc-protests%2Farticleshow%2F116784506.cms

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...