ರಾಷ್ಟ್ರ ರಾಜಧಾನಿ ದೆಹಲಿಯಿಂದ ಸುಮಾರು 250 ಕಿ.ಮೀ ದೂರದಲ್ಲಿರುವ ಆಗ್ರಾದಲ್ಲಿ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಭಾರೀ ಮಳೆಯಿಂದಾಗಿ ತಾಜ್‌ಮಹಲ್‌ನಲ್ಲಿ ನೀರು ಸೋರಿಕೆಯಾಗುತ್ತಿದೆ ಎಂದು ವರದಿಯಾಗಿದೆ.
ತಾಜ್‌ಮಹಲ್‌ನ ಮುಖ್ಯ ಗುಮ್ಮಟದ ಛಾವಣಿಯಲ್ಲಿ ತೇವಾಂಶ ಕಂಡುಬಂದಿದ್ದು, ಕೂದಲೆಳೆಯ ಬಿರುಕು ಬಿಟ್ಟಿದೆ ಎಂದು ಅಧಿಕಾರಿಯೊಬ್ಬರು ಮೊದಲೇ ಶಂಕೆ ವ್ಯಕ್ತಪಡಿಸಿದ್ದರು. ಇದೀಗ, ನೀರು ಸೋರಿಕೆಯಾಗಿದೆ.
17ನೇ ಶತಮಾನದಲ್ಲಿ ನಿರ್ಮಿಸಲಾದ ತಾಜ್‌ಮಹಲ್ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿದೆ. ವಿಶ್ವದ ಏಳು ಅದ್ಭುತಗಳಲ್ಲಿ ತಾಜ್‌ಮಹಲ್ ಕೂಡ ಒಂದಾಗಿದೆ. ಅದರಲ್ಲಿ ನೀರು ಸೋರಿಕೆಯಾಗಿರುವ ವರದಿ ಬಂದ ಕೂಡಲೇ ದೇಶದಲ್ಲಿನ ಐತಿಹಾಸಿಕ ಸ್ಮಾರಕಗಳನ್ನು ನೋಡಿಕೊಳ್ಳುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ತನ್ನ ಸಿಬ್ಬಂದಿಯನ್ನು ಕಣ್ಗಾವಲಿಗಾಗಿ ನಿಯೋಜಿಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಆಶಯವೋ, ಅಣಕವೋ?
ಇನ್ನು ಆಗ್ರಾದ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ರಾಜ್‌ಕುಮಾರ್ ಪಟೇಲ್ ಅವರು ಡ್ರೋನ್ ಕ್ಯಾಮೆರಾಗಳನ್ನು ಬಳಸಿ ತಪಾಸಣೆ ನಡೆಸಿದ್ದಾರೆ. “ನಾವು ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ಸೋರಿಕೆಯಾಗುವುದನ್ನು ಕಂಡಿದ್ದೇವೆ. ಮುಖ್ಯ ಗುಮ್ಮಟಕ್ಕೆ ಯಾವುದೇ ಹಾನಿಯಾಗಿಲ್ಲ” ಎಂದು ಹೇಳಿದ್ದಾರೆ.