ಬಿಹಾರದ ಹೆಚ್ಚಿನ ಸ್ಥಳಗಳಲ್ಲಿ ಗಂಗಾ ನದಿಯ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ: ಆರ್ಥಿಕ ಸಮೀಕ್ಷೆ

Date:

ಬಿಹಾರದ ಗಂಗಾ ನದಿಯ ನೀರು ಅಧಿಕ ಸ್ಥಳಗಳಲ್ಲಿ ಸ್ನಾನಕ್ಕೆ ಯೋಗ್ಯವಾಗಿಲ್ಲ, ನೀರಿನಲ್ಲಿ ಬ್ಯಾಕ್ಟೀರಿಯಾ ಅಧಿಕವಾಗಿದೆ ಎಂದು ಬಿಹಾರದ ಆರ್ಥಿಕ ಸಮೀಕ್ಷೆ 2024-25 ಹೇಳಿದೆ. ಬಿಹಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಬಿಎಸ್‌ಪಿಸಿಬಿ) 34 ಸ್ಥಳಗಳಲ್ಲಿ ಗಂಗಾ ನೀರಿನ ಗುಣಮಟ್ಟವನ್ನು ಹದಿನೈದು ದಿನಗಳಿಗೊಮ್ಮೆ ಮೇಲ್ವಿಚಾರಣೆ ಮಾಡುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಇತ್ತೀಚೆಗೆ ಬಿಹಾರ ವಿಧಾನಸಭೆಯಲ್ಲಿ ಮಂಡಿಸಲಾದ ಆರ್ಥಿಕ ಸಮೀಕ್ಷೆ, “ಗಂಗಾ ನದಿಯ ನೀರಿನ ಗುಣಮಟ್ಟವು ಕೆಟ್ಟದಾಗಿದೆ. ಅಧಿಕ ಕೋಲಿಫಾರ್ಮ್ ಬ್ಯಾಕ್ಟೀರಿಯಾಗಳಿವೆ. ಗಂಗಾ ಮತ್ತು ಉಪನದಿಗಳ ದಡದಲ್ಲಿರುವ ನಗರಗಳಿಂದ ಒಳಚರಂಡಿ/ಗೃಹ ತ್ಯಾಜ್ಯ ನೀರನ್ನು ನದಿಗೆ ಬಿಡುವುದರಿಂದ ಈ ಮಾಲಿನ್ಯ ಉಂಟಾಗಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ, ಬ್ಯಾಕ್ಟೀರಿಯಾಮಯ: ಮಾಲಿನ್ಯ ನಿಯಂತ್ರಣ ಮಂಡಳಿ

“ನೀರು ಜಲಚರಗಳು, ವನ್ಯಜೀವಿಗಳ ಪ್ರಸರಣ, ಮೀನುಗಾರಿಕೆ ಮತ್ತು ನೀರಾವರಿಗೆ ಸೂಕ್ತವಾಗಿದೆ. ಬಕ್ಸಾರ್, ಚಾಪ್ರಾ (ಸರನ್), ದಿಗ್ವಾರಾ, ಸೋನೆಪುರ್, ಮಾನೇರ್, ದಾನಾಪುರ್, ಪಾಟ್ನಾ, ಫತುಹಾ, ಭಕ್ತಿಯಾರ್‌ಪುರ, ಬರ್ಹ್, ಮೊಕಾಮಾ, ಬೇಗುಸರಾಯ್, ಖಗಾರಿಯಾ, ಲಖಿಸರೈ, ಮಣಿಹರಿ, ಮುಂಗೇರ್, ಜಮಾಲ್‌ಪುರ, ಸುಲ್ತಾನಗಂಜ್, ಭಾಗಲ್‌ಪುರ ಮತ್ತು ಕಹಲ್‌ಗಾಂವ್‌ನಲ್ಲಿ ಗಂಗಾ ನದಿ ಕಲುಷಿತವಾಗಿದೆ” ಎಂದು ವರದಿ ಹೇಳಿದೆ.

ಬಿಎಸ್‌ಪಿಸಿಬಿ ಅಧ್ಯಕ್ಷ ಡಿ ಕೆ ಶುಕ್ಲಾ, “ಗಂಗಾ ನದಿಯಲ್ಲಿ ಹೆಚ್ಚಿನ ಬ್ಯಾಕ್ಟೀರಿಯಾಗಳಿವೆ. ಅದು ಕಳವಳಕಾರಿ ವಿಷಯವಾಗಿದೆ. ಫೀಕಲ್ ಕೋಲಿಫಾರ್ಮ್ (faecal coliform) ಬ್ಯಾಕ್ಟೀರಿಯಾಗಳು ಮಲದಲ್ಲಿ ಕಂಡುಬರುತ್ತವೆ. ಆದರೆ ಗಂಗಾ ನದಿಯಲ್ಲಿಯೂ ಕಂಡುಬಂದಿದೆ. ಇದರ ಮಟ್ಟ ಸ್ವಲ್ಪ ಅದಿಕವಾದರೂ ರೋಗ ಉಂಟು ಮಾಡುವ ಸಾಧ್ಯತೆಯಿದೆ” ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ಗಂಗಾ ನದಿ ತೀರದಲ್ಲಿ ಮಲವಿಸರ್ಜನೆ ಆರೋಪ: ಯುಪಿ ಸರ್ಕಾರಕ್ಕೆ ಎನ್‌ಜಿಟಿ ನೋಟಿಸ್

ಈ ಹಿಂದೆ ಮಹಾ ಕುಂಭಮೇಳ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರಯಾಗ್‌ರಾಜ್‌ನ ಹಲವು ಕಡೆಗಳಲ್ಲಿ ನದಿ ನೀರು ಸ್ನಾನ ಮಾಡಲು ಯೋಗ್ಯವಾಗಿಲ್ಲ. ಗಂಗಾ ನದಿಯಲ್ಲಿ ಫೀಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾ ಅಧಿಕವಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮೂಲಕ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ತಿಳಿಸಿದೆ.

“ಪ್ರಯಾಗ್‌ರಾಜ್‌ನಲ್ಲಿ ಹಲವು ಸ್ಥಳಗಳಲ್ಲಿ ನದಿ ನೀರು ಸ್ನಾನ ಮಾಡಲು ಯೋಗ್ಯವಾಗಿಲ್ಲ. ಮಹಾ ಕುಂಭಮೇಳದ ಸಂದರ್ಭದಲ್ಲಿ, ಪವಿತ್ರ ಸ್ನಾನದ ಸಂದರ್ಭದಲ್ಲಿ ಹಲವು ಮಂದಿ ಪ್ರಯಾಗ್‌ರಾಜ್‌ನಲ್ಲಿ ಸ್ನಾನ ಮಾಡಿದ್ದಾರೆ. ಇದರಿಂದಾಗಿ ಫೀಕಲ್ ಕೋಲಿಫಾರ್ಮ್ ಬ್ಯಾಕ್ಟೀರಿಯಾ ಇನ್ನಷ್ಟು ಹೆಚ್ಚಾಗುತ್ತದೆ” ಎಂದು ವರದಿ ಹೇಳಿತ್ತು. ಆದಾಗ್ಯೂ ಕೋಟ್ಯಾಂತರ ಜನರು ಮಹಾ ಕುಂಭಮೇಳ ಸಂದರ್ಭದಲ್ಲಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...