ಕುಂಭಮೇಳದ ವೇಳೆ ನೀರಿನ ಗುಣಮಟ್ಟ ಸ್ನಾನಕ್ಕೆ ಯೋಗ್ಯವಾಗಿತ್ತು: ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

Date:

ಮಹಾ ಕುಂಭಮೇಳದ ವೇಳೆ ನೀರಿನ ಗುಣಮಟ್ಟ ಸ್ನಾನಕ್ಕೆ ಯೋಗ್ಯವಾಗಿತ್ತು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ಸಲ್ಲಿಸಲಾದ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ವರದಿಯಲ್ಲಿ ಉಲ್ಲೇಖಿಸಲಾಗಿದೆ.

- Advertisement -

ಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗ್‌ರಾಜ್‌ನ ಹಲವು ಕಡೆಗಳಲ್ಲಿ ನದಿ ನೀರು ಸ್ನಾನ ಮಾಡಲು ಯೋಗ್ಯವಾಗಿಲ್ಲ. ಗಂಗಾ ನದಿಯಲ್ಲಿ ಫೀಕಲ್ ಕೋಲಿಫಾರ್ಮ್ (faecal coliform) ಬ್ಯಾಕ್ಟೀರಿಯಾ ಅಧಿಕವಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮೂಲಕ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಈ ಹಿಂದೆ ತಿಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಕುಂಭಮೇಳ | ಭಕ್ತರ ಆತಂಕ ತಪ್ಪಿಸಲು ಕಾಲ್ತುಳಿತದ ವಾಸ್ತವ ತಿಳಿಸಿಲ್ಲ: ಸಿಎಂ ಆದಿತ್ಯನಾಥ್ ಸಮಜಾಯಿಷಿ

ಆದರೆ ಆಗಾಗಲೇ ಕೋಟ್ಯಾಂತರ ಮಂದಿ ಗಂಗಾ ನದಿ ನೀರಿನಲ್ಲಿ ಪವಿತ್ರ ಸ್ನಾನ ಮಾಡಿದ್ದರು. ಈ ಡೇಟಾದ ಬಳಿಕ ಹಲವು ತಜ್ಞರು ಇದು ಆರೋಗ್ಯ ಸಮಸ್ಯೆಗೆ, ಚರ್ಮ ರೋಗಕ್ಕೆ ಕಾರಣವಾಗಬಹುದು ಎಂದು ಹೇಳಿದ್ದರು. ಆದರೆ ಸರ್ಕಾರ ಮಾತ್ರ ತನ್ನ ಎಂದಿನ ಚಾಳಿಯಂತೆ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿತ್ತು. ಹಾಗೆಯೇ ವರದಿಯನ್ನು ಮುಚ್ಚಿಡಲು ಯತ್ನಿಸಿತ್ತು ಎಂಬ ಆರೋಪವೂ ಕೇಳಿಬಂದಿದೆ.

ಇದಾದ ಬೆನ್ನಲ್ಲೇ ಫೆಬ್ರವರಿ 28 ಮತ್ತು ಮಾರ್ಚ್ 7ರಂದು ನ್ಯಾಯಮಂಡಳಿಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ವರದಿಯು ಜನವರಿ 12ರಿಂದ ಗಂಗಾ ನದಿಯ ಐದು ಸ್ಥಳಗಳಲ್ಲಿ ಮತ್ತು ಯಮುನಾ ನದಿಯ ಎರಡು ಸ್ಥಳಗಳಲ್ಲಿ ವಾರಕ್ಕೆ ಎರಡು ಬಾರಿ ನೀರಿನ ಪರೀಕ್ಷೆ ನಡೆಸಿದ ವರದಿ ಎಂದು ಸಿಪಿಸಿಬಿ ಹೇಳಿಕೊಂಡಿದೆ.

ಇದನ್ನು ಓದಿದ್ದೀರಾ? ಆರ್‌ಎಸ್‌ಎಸ್‌ ಮುಖ್ಯಸ್ಥರು ಕುಂಭಮೇಳಕ್ಕೆ ಹೋಗಿರುವ ಚಿತ್ರ ತೋರಿಸಿ: ಶಿಂದೆ ವಿರುದ್ಧ ರಾವತ್ ವಾಗ್ದಾಳಿ

ಹಾಗೆಯೇ ತಜ್ಞರ ಸಮಿತಿಯು ಡೇಟಾದಲ್ಲಿರುವ ವ್ಯತ್ಯಾಸದ ಸಮಸ್ಯೆಯನ್ನು ಪರಿಶೀಲಿಸಿದೆ. ಡೇಟಾವು ನಿರ್ದಿಷ್ಟ ಸ್ಥಳ ಮತ್ತು ಸಮಯದಲ್ಲಿ ನೀರಿನ ಗುಣಮಟ್ಟವನ್ನು ಉಲ್ಲೇಖಿಸಿದೆ. ಆದರೆ ಪ್ರವಾಹ, ಹರಿವು, ಇತರೆ ಅಂಶಗಳ ಕಾರಣಗಳಿಂದಾಗಿ ನೀರಿನ ಗುಣಮಟ್ಟ ಬದಲಾಗಬಹುದು ಎಂದು ವರದಿ ಹೇಳಿದೆ.

ಜನವರಿ 12ರಿಂದ ಫೆಬ್ರವರಿ 22ರವರೆಗೆ ಸಾಮೂಹಿಕ ಸ್ನಾನ ನಡೆದ 10 ಸ್ಥಳಗಳಲ್ಲಿನ ನೀರಿನ ಗುಣಮಟ್ಟದ ವಿಶ್ಲೇಷಣೆ ನಡೆಸಲಾಗಿದ್ದು, 20 ಸುತ್ತಿನ ಮೇಲ್ವಿಚಾರಣೆಯನ್ನು ಮಾಡಲಾಗಿದೆ. ಈ ವೇಳೆ ನೀರಿನ ಗುಣಮಟ್ಟ ಮಾನದಂಡದ ಮಿತಿಯೊಳಗಿತ್ತು ಎಂದು ವರದಿ ಉಲ್ಲೇಖಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...