ವಯನಾಡ್ ಭೂಕುಸಿತ | ವಯನಾಡ್‌ನಲ್ಲಿ ಕಾಂಗ್ರೆಸ್‌ನಿಂದ 100 ಮನೆ ನಿರ್ಮಾಣ: ರಾಹುಲ್ ಗಾಂಧಿ

Date:

ವಯನಾಡ್‌ ಭೂಕುಸಿತದಿಂದಾಗಿ ಹಲವಾರು ಮಂದಿ ಮನೆ, ಆಸ್ತಿಪಾಸ್ತಿಯನ್ನು ಕಳೆದುಕೊಂಡು ಬೀದಿಪಾಳಾಗಿರುವಾಗ ವಯನಾಡಿನಲ್ಲಿ ಕಾಂಗ್ರೆಸ್‌ ಸುಮಾರು ನೂರು ಮನೆಗಳನ್ನು ನಿರ್ಮಿಸಲಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ, ವಯನಾಡಿನ ಮಾಜಿ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -

ಭೂಕುಸಿತದಿಂದ ತತ್ತರಿಸಿರುವ ವಯನಾಡಿಗೆ ಆಗಸ್ಟ್ 1ರಂದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭೇಟಿ ನೀಡಿದ್ದಾರೆ. ಆಗಸ್ಟ್ 2ರಂದು ಮೆಪ್ಪಾಡಿಯ ಚೂರಮಲದಲ್ಲಿರುವ ಅರಣ್ಯ ಕಛೇರಿಯಲ್ಲಿ ಜಿಲ್ಲಾಡಳಿತದಿಂದ ಮಾಹಿತಿ ಪಡೆದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುತ್ತಾ ರಾಹುಲ್ ಗಾಂಧಿ ನೂರು ಮನೆ ನಿರ್ಮಾಣದ ಬಗ್ಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನಿನ್ನೆಯಿಂದ ಇಲ್ಲೇ ಇದ್ದೇನೆ, ನಿನ್ನೆ ಹೇಳಿದಂತೆ ಇದೊಂದು ಘೋರ ದುರಂತ. ನಿನ್ನೆ ಸ್ಥಳಕ್ಕೆ ಭೇಟಿ ನೀಡಿದ್ದೆವು. ಶಿಬಿರಗಳಿಗೆ ತೆರಳಿ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದೆವು. ಇಂದು ಆಡಳಿತ ಮತ್ತು ಪಂಚಾಯತ್ ಜೊತೆ ಸಭೆ ನಡೆಸಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ವಯನಾಡ್ ಭೂಕುಸಿತ | ತಂದೆ ಹತ್ಯೆಯಾದಾಗ ಅನುಭವಿಸಿದ್ದ ನೋವಿಗಿಂತ ಈಗ ಹೆಚ್ಚು ನೋವಾಗಿದೆ: ರಾಹುಲ್

ಹಾಗೆಯೇ, “ಕಾಂಗ್ರೆಸ್‌ನಿಂದ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲು ನಾವು ಬದ್ಧರಾಗಿದ್ದೇವೆ. ಹಾನಿಗೊಳಗಾದ ಮನೆಗಳ ಸಂಖ್ಯೆ ಮತ್ತು ಅವರ ಕಾರ್ಯತಂತ್ರದ ಬಗ್ಗೆ ನಮಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದು ಒಂದೇ ಪ್ರದೇಶದಲ್ಲಿ ನಡೆದಿರುವ ಘಟನೆಯಲ್ಲ. ಆದ್ದರಿಂದ ಈ ದುರಂತವನ್ನು ವಿಭಿನ್ನವಾಗಿ ಪರಿಗಣಿಸಬೇಕಾಗುತ್ತದೆ ಎಂದು ನಾನು ಮುಖ್ಯಮಂತ್ರಿಗಳಿಗೆ ತಿಳಿಸುತ್ತೇನೆ” ಎಂದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...