ಎಎಪಿಯ ಎಲ್ಲ ನಾಯಕರು ಬಿಜೆಪಿ ಕಚೇರಿಗೆ ಬರುತ್ತೇವೆ, ತಾಕತ್ತಿದ್ದರೆ ಬಂಧಿಸಿ: ಮೋದಿಗೆ ಸವಾಲೆಸೆದ ಕೇಜ್ರಿವಾಲ್

Date:

Advertisements

“ನಾನು, ಶಾಸಕರು, ಸಂಸದರು ಸೇರಿದಂತೆ ಆಮ್ ಆದ್ಮಿ ಪಕ್ಷದ ಎಲ್ಲ ಉನ್ನತ ನಾಯಕರೊಂದಿಗೆ ನಾಳೆ ಮಧ್ಯಾಹ್ನ 12 ಗಂಟೆಗೆ ಬಿಜೆಪಿ ಕೇಂದ್ರ ಕಚೇರಿಗೆ ಬರುತ್ತೇನೆ. ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ, ಜೈಲಿಗೆ ಕಳುಹಿಸಿ”…ಹೀಗಂತ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲೆಸೆದಿದ್ದಾರೆ.

ಕೇಜ್ರಿವಾಲ್ ಅವರ ಮನೆಯೊಳಗೆ ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಬಂಧಿಸಿದ್ದರು. ಈ ಬೆನ್ನಲ್ಲೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪ್ರಧಾನಿ ಮೋದಿಯವರಿಗೆ ಈ ಸವಾಲು ಹಾಕಿದ್ದಾರೆ.

ಸಾರ್ವಜನಿಕರನ್ನು ಉದ್ದೇಶಿಸಿ ಬಿಡುಗಡೆ ಮಾಡಿರುವ ತಮ್ಮ ಹೇಳಿಕೆಯಲ್ಲಿ ಕೇಜ್ರಿವಾಲ್ ಅವರು , “ನೀವು ಎಲ್ಲ ಬೆಳವಣಿಗೆಗಳನ್ನು ನೋಡ್ತುತ್ತಿದ್ದೀರಿ ಎಂಬುದು ನನಗೆ ಗೊತ್ತು. ಬೆನ್ನುಬಿಡದ ಬೇತಾಳನಂತೆ ಬಿಜೆಪಿಯವರು ಆಮ್ ಆದ್ಮಿ ಪಕ್ಷ ಬೆನ್ನ ಹಿಂದೆ ಬಿದ್ದಿದ್ದಾರೆ. ಒಬ್ಬರ ಹಿಂದೆ ಒಬ್ಬರನ್ನು ಬಂಧಿಸುತ್ತಿದ್ದಾರೆ. ನನ್ನನ್ನೂ ಸೇರಿದಂತೆ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್, ಸಂಜಯ್ ಸಿಂಗ್ ಅವರನ್ನು ಜೈಲಿಗೆ ಕಳುಹಿಸಲಾಯಿತು. ಈಗ ನನ್ನ ಆಪ್ತ ಸಹಾಯನನ್ನು ಬಿಭವ್ ಕುಮಾರ್ ಅವರನ್ನು ಬಂಧಿಸಿದ್ದಾರೆ. ರಾಘವ್ ಚಡ್ಡಾ ಅವರನ್ನು ಜೈಲಿಗೆ ಕಳುಹಿಸಲು ಯತ್ನಿಸುತ್ತಿದ್ದಾರೆ. ಪ್ರಧಾನಿ ಮೋದಿ ಜೈಲಿನ ಆಟ ಆಡುತ್ತಿದ್ದಾರೆ. ನಾನು, ಶಾಸಕರು, ಸಂಸದರು ಸೇರಿದಂತೆ ಆಮ್ ಆದ್ಮಿ ಪಕ್ಷದ ಎಲ್ಲ ಉನ್ನತ ನಾಯಕರೊಂದಿಗೆ ನಾಳೆ ಮಧ್ಯಾಹ್ನ 12 ಗಂಟೆಗೆ ಬಿಜೆಪಿ ಕೇಂದ್ರ ಕಚೇರಿಗೆ ಬರುತ್ತೇನೆ. ನೀವು ನಮ್ಮೆಲ್ಲರನ್ನೂ ಒಟ್ಟಿಗೆ ಬೇಕಾದರೆ ಜೈಲಿಗೆ ಹಾಕಿ” ಎಂದು ತಿಳಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಸ್ವಾತಿ ಮಲಿವಾಲ್ ಪ್ರಕರಣ| ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಬಂಧನ

“ಆಮ್ ಆದ್ಮಿ ಪಕ್ಷದ ಮುಖಂಡರನ್ನು ಜೈಲಿಗೆ ಕಳುಹಿಸಿ, ಪಕ್ಷವನ್ನು ತುಳಿಯಬಹುದೆಂದು ನೀವು ಆಲೋಚಿಸುತ್ತಿದ್ದಾರಾ?” ಎಂದು ಕೇಳಿರುವ ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, “ಬೇಕಾದರೆ ಎಲ್ಲರನ್ನು ಜೈಲಿಗೆ ಕಳುಹಿಸಿದ ನಂತರ ಎಎಪಿಯನ್ನು ಹತ್ತಿಕ್ಕಲು ಸಾಧ್ಯವೇ ಎಂಬುದನ್ನು ಒಮ್ಮೆ ಪ್ರಯತ್ನಿಸಿ ನೋಡಿ. ಎಎಪಿ ಎಂಬುದು ಅದೊಂದು ಆದರ್ಶ ಕಲ್ಪನೆ. ಆದ್ದರಿಂದ ಅದು ಸಾಧ್ಯವಿಲ್ಲ” ಎಂದು ದೆಹಲಿ ಸಿಎಂ ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. So much drama! Unfortunately, many Delhi women are turning against him. He has to explain how the cc TV footage became blank and who made the doctored videos.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X