ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಲ್ಲ ಎಂದ ಸುಪ್ರೀಂ ಕೋರ್ಟ್

Date:

ಅಬಕಾರಿ ನೀತಿ ಹಗರಣದಲ್ಲಿ ತಮ್ಮ ಬಂಧನ ಪ್ರಶ್ನಿಸಿ ಮತ್ತು ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, “ಮಧ್ಯಂತರ ಜಾಮೀನು ನೀಡಲ್ಲ” ಎಂದು ತಿಳಿಸಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, “ನಾವು ಯಾವುದೇ ಮಧ್ಯಂತರ ಜಾಮೀನು ನೀಡುತ್ತಿಲ್ಲ” ಎಂದು ಹೇಳಿದ್ದಾರೆ. ಜೊತೆಗೆ ಬಂಧನ ಪ್ರಶ್ನಿಸಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಅರ್ಜಿ ವಿಚಾರದಲ್ಲಿ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ಬಳಿಕ ಈ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 23ಕ್ಕೆ ಮುಂದೂಡಲಾಗುವುದು ಎಂದು ಕೋರ್ಟ್ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ? ಅಬಕಾರಿ ನೀತಿ ಹಗರಣ | ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಆ. 20ರವರೆಗೆ ವಿಸ್ತರಣೆ

ಇತ್ತೀಚೆಗೆ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನವನ್ನು ದಿ ರೋಸ್ ಅವೆನ್ಯೂ ನ್ಯಾಯಾಲಯ ಆಗಸ್ಟ್ 20ರವರೆಗೆ ವಿಸ್ತರಿಸಿದೆ.

ಆಗಸ್ಟ್‌ 5ರಂದು ಅಬಕಾರಿ ನೀತಿ ಹಗರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹರಿಯಾಣ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ಗೆ ಸೇರಿದ ದಿನವೇ ವಿನೇಶ್ ಫೋಗಟ್‌ಗೆ ಟಿಕೆಟ್

ಹರಿಯಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಶುಕ್ರವಾರ ರಾತ್ರಿ ತನ್ನ...

ಮಧ್ಯಪ್ರದೇಶ । ಹಾಡಹಗಲೇ ಮಹಿಳೆ ಮೇಲೆ ಅತ್ಯಾಚಾರ; ಕಾಮುಕನ ಕೃತ್ಯ ನೋಡುತ್ತ ನಿಂತ ಜನ

ಕಾಮುಕನೊಬ್ಬ ಮಹಿಳೆಯ ಮೇಲೆ ಹಾಡಹಗಲೆ ಸಾರ್ವಜನಿಕ ಸ್ಥಳದಲ್ಲಿ ಅತ್ಯಾಚಾರ ಎಸಗಿರುವ ಆಘಾತಕಾರಿ...

ಕ್ರಿಸ್ಟಿಯಾನೊ ರೊನಾಲ್ಡೊ ಎಂಬ ದಾಖಲೆಗಳ ದಿಗ್ಗಜ; 900 ಗೋಲುಗಳ ಸರದಾರ

900 ಗೋಲುಗಳನ್ನು ಹೊಡೆದಿರುವ ಕ್ರಿಸ್ಟಿಯಾನೊ ರೊನಾಲ್ಡೊ, ಫುಟ್‌ಬಾಲ್‌ ಲೋಕದ ಜನಪ್ರಿಯ ಆಟಗಾರ....

ಮಾಧವಿ ಬುಚ್ ವಿರುದ್ಧ ತಿರುಗಿಬಿದ್ದ ಸೆಬಿ ಉನ್ನತಾಧಿಕಾರಿಗಳು

ಸೆಬಿ ಮುಖ್ಯಸ್ಥೆ ಮಾಧವಿ ಬುಚ್ ವಿರುದ್ಧ ಸಂಸ್ಥೆಯ ಉನ್ನತಾಧಿಕಾರಿಗಳು ತಮ್ಮ ಸಂಸ್ಥೆಯ...