ರಾಮಮಂದಿರ ಲೂಟಿ | ನಮಗೆ ಅವಮಾನ, ನಿರಾಶೆಯಾಗಿದೆ: ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ

Date:

ಅಯೋಧ್ಯೆ ರಾಮಮಂದಿರನ ಲೂಟಿಯು ನಮಗೆ ಅವಮಾನ ಉಂಟು ಮಾಡಿದೆ, ನಿರಾಶೆಯಾಗಿದೆ. ಈ ಘಟನೆಯಿಂದ ಯೋಜನೆಗೆ ಸಂಬಂಧಿಸಿದ ಪ್ರತಿಯೊಬ್ಬರೂ ಅವಮಾನಿತರಾಗಿದ್ದಾರೆ ಎಂದು ರಾಮಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಶನಿವಾರ ಹೇಳಿದ್ದಾರೆ.

- Advertisement -

ರಾಮಮಂದಿರ ನಿರ್ಮಾಣ ಸಮಿತಿಯ ಎರಡನೇ ದಿನದ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಿಶ್ರಾ, “ಈ ಆಪಾದಿತ ಕಳ್ಳತನ ಪ್ರಕರಣವು ರಾಮಮಂದಿರದ ಖ್ಯಾತಿಗೆ ಕಳಂಕ ತಂದಿದೆ. ಆದರೆ ಇದೇ ರೀತಿಯ ಘಟನೆಗಳು ನಡೆಯದಂತೆ ತಡೆಗಟ್ಟಲು ನಿರ್ವಹಣಾ ವ್ಯವಸ್ಥೆಯನ್ನು ಬಲಪಡಿಸಲಾಗುವುದು” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಇದನ್ನೂ ಓದಿ: ರಾಮಮಂದಿರ ಲೂಟಿ: ಮೋದಿ ಸರ್ಕಾರದಿಂದ ‘ಮಹಾ-ಪಾಪ’ ಮಾಡಿದವರ ರಕ್ಷಣೆ; ಎಎಪಿ ಸಹಿ ಸಂಗ್ರಹ

ಹಾಗೆಯೇ, “ಇದು ನಾಚಿಕೆಗೇಡಿನ ಸಂಗತಿ. ನಾವು ಕ್ಷಮೆಯಾಚಿಸುವುದು ಮಾತ್ರವಲ್ಲದೆ, ಈ ಘಟನೆಯಿಂದ ನಾವು ಅವಮಾನಿತರಾಗಿದ್ದೇವೆ. ನಿರಾಶೆಗೆ ಒಳಗಾಗಿದ್ದೇವೆ. ಈ ವಿಷಯವು ಈಗ ದೇವಾಲಯದ ಆಡಳಿತ ಮಂಡಳಿಯ ವ್ಯಾಪ್ತಿಗೆ ಬಂದಿದೆ. ನಾವು ಮತ್ತೆ ಹೀಗಾಗದಂತೆ ನೋಡಿಕೊಳ್ಳುತ್ತೇವೆ” ಎಂದು ಭರವಸೆ ನೀಡಿದರು.

ಇನ್ನು ಈ ಸಂದರ್ಭದಲ್ಲೇ ದೇವಾಲಯ ಟ್ರಸ್ಟ್‌ಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು ನೇಮಿಸುವುದಕ್ಕೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದರು. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ಸೂಕ್ತ ಅಭ್ಯರ್ಥಿಯನ್ನು ಶಿಫಾರಸು ಮಾಡಲು ರಚಿಸಲಾಗಿದೆ ಎಂದು ಹೇಳಿದರು. ಟ್ರಸ್ಟ್ ಮಹಿಳೆಯನ್ನು ಸಿಇಒ ಆಗಿ ನೇಮಿಸಬಹುದೆಂಬ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ ಮಿಶ್ರಾ, “ಟ್ರಸ್ಟ್ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಿತಿಯು ತನ್ನ ಶಿಫಾರಸುಗಳನ್ನು ಸಲ್ಲಿಸುತ್ತದೆ” ಎಂದರು.

ಇನ್ನು ದೇಣಿಗೆ ಕಳ್ಳತನದ ವಿವಾದದ ನಡುವೆ ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಇದೀಗ ದೇವಾಲಯದ ನಿರ್ವಹಣಾ ವ್ಯವಸ್ಥೆಯನ್ನು ಬಲಪಡಿಸುವ ಕ್ರಮಗಳನ್ನು ಚರ್ಚಿಸಲು ಟ್ರಸ್ಟ್ ಜುಲೈ 22ರಂದು ಮತ್ತೆ ಸಭೆ ಸೇರಲಿದೆ. ಆದರೆ “ಈ ಸಭೆಯ ಕಾರ್ಯಸೂಚಿಯ ಬಗ್ಗೆ ತನಗೆ ತಿಳಿದಿಲ್ಲ” ಎಂದು ನಿರ್ಮಾಣ ಸಮಿತಿ ಮುಖ್ಯಸ್ಥರಾಗಿರುವ ನೃಪೇಂದ್ರ ಮಿಶ್ರಾ ಹೇಳಿಕೊಂಡಿದ್ದಾರೆ.

ಇನ್ನು ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ದುರುಪಯೋಗ ಮತ್ತು ಕಳ್ಳತನದ ಆರೋಪಗಳು ಮುನ್ನೆಲೆಗೆ ಬಂದಾಗಲೇ ನೃಪೇಂದ್ರ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ನೃಪೇಂದ್ರ ಮಿಶ್ರಾ ರಾಮಮಂದಿರ ನಿರ್ಮಾಣ ಕಾರ್ಯದ ಉಸ್ತುವಾರಿ ಹೊತ್ತವರಾಗಿ ಈ ಹಗರಣವನ್ನು ತಡೆಯಲು ವಿಫಲರಾಗಿದ್ದಾರೆ. ಮೇಲ್ವಿಚಾರಣೆಯಲ್ಲಿ ಲೋಪವಾಗಿದೆ ಎಂದು ವಿಪಕ್ಷ ನಾಯಕರು ಟೀಕಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಸಿಪಿಐಎಂ, ಎಸ್‌ಎಫ್‌ಐ ನಾಯಕರು ಮತ್ತು ವಕೀಲರ ಬಂಧನ

ಸಿಜೆಪಿ ಕರೆಕೊಟ್ಟಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಯ ಜಂತರ್‌ ಮಂತರ್‌ಗೆ ತೆರಳುತ್ತಿದ್ದ...

ಚಿಕ್ಕಮಗಳೂರು | ಫಾರಂ-7 ದುರುಪಯೋಗ; ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಯತ್ನಕ್ಕೆ ತೀವ್ರ ವಿರೋಧ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಬಂಧನ

ದೆಹಲಿಯ ಜಂತರ್ ಮಂತರ್ ರಸ್ತೆಯಲ್ಲಿರುವ ಕೇರಳ ಭವನದ ಸಮೀಪ ಕೇರಳದ ಮಾಜಿ...