ಸಂವಿಧಾನದ ತತ್ವಗಳನ್ನು ಗೌರವಿಸುವವರು ಇಂಡಿಯಾ ಒಕ್ಕೂಟ ಸೇರಬಹುದು: ಮಲ್ಲಿಕಾರ್ಜುನ ಖರ್ಗೆ

Date:

ಇಂಡಿಯಾ ಒಕ್ಕೂಟದ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ, ದೃಢವಾಗಿ ಹೋರಾಟ ನಡೆಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಂವಿಧಾನದ ತತ್ವಗಳನ್ನು ಗೌರವಿಸುವವರು  ನಮ್ಮ ಒಕ್ಕೂಟವನ್ನು ಸೇರಬಹುದು ಎಂದು ಬೇರೆ ಪಕ್ಷಗಳನ್ನು ಆಹ್ವಾನಿಸಿದ್ದಾರೆ.

ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳೊಂದಿಗೆ ನವದೆಹಲಿಯ ತಮ್ಮ ನಿವಾಸದಲ್ಲಿ ನಡೆದ ಸಭೆಯಲ್ಲಿ ಖರ್ಗೆ ಮಾತನಾಡಿದ ವೇಳೆ, “ನಾವು ಚುನಾವಣೆಯಲ್ಲಿ ಒಗ್ಗಟ್ಟಿನಿಂದ ದೃಢವಾಗಿ ಹೋರಾಟ ನಡೆಸಿದ್ದೇವೆ” ಎಂದು ಹೇಳಿದರು.

“ಈ ಜನಾದೇಶವು ಮೋದಿಯ ವಿರುದ್ಧ ನಿರ್ಣಾಯಕವಾಗಿದೆ. ಅವರ ಆಡಳಿತ, ಅವರ ರಾಜಕೀಯ ನಡೆಗಳ ವಿರುದ್ಧವಾಗಿದೆ. ಇದು ಅವರಿಗಾದ ನೈತಿಕವಾಗಿ ಸೋಲಿನ ಹೊರತಾಗಿ ವೈಯಕ್ತಿಕವಾಗಿ, ರಾಜಕೀಯವಾಗಿ ದೊಡ್ಡ ನಷ್ಟ ಅನುಭವಿಸಿದ್ದಾರೆ. ಆದರೂ ಅವರು ಜನರ ಇಚ್ಛೆಯನ್ನು ಬುಡಮೇಲು ಮಾಡಲು ನಿರ್ಧರಿಸಿದ್ದಾರೆ” ಎಂದು ಖರ್ಗೆ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಿತ್ರಪಕ್ಷಗಳಿಗೆ ಮಣಿಯುವರೇ ಅಥವಾ ‘ಆಪರೇಷನ್ ಕಮಲ’ಕ್ಕೆ ಶರಣಾಗುವರೇ?

“ಭಾರತದ ಸಂವಿಧಾನದ ಪ್ರಸ್ತಾವನೆಯಲ್ಲಿ ಅಚಲವಾದ ನಂಬಿಕೆ ಹೊಂದಿರುವ ಮತ್ತು ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ನ್ಯಾಯದ ಉದ್ದೇಶಗಳಿಗೆ ಬದ್ಧವಾಗಿರುವ ಎಲ್ಲ ರಾಜಕೀಯ ಪಕ್ಷಗಳನ್ನು ‘ಇಂಡಿಯಾ’ ಮೈತ್ರಿಕೂಟ ಸ್ವಾಗತಿಸುತ್ತದೆ” ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್‌, ಜಾರ್ಖಂಡ್‌ ಮುಖ್ಯಮಂತ್ರಿ ಚಂಪೈ ಸೊರೇನ್‌, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್‌, ಎನ್‌ಸಿಪಿ(ಎಸ್‌ಸಿಪಿ) ಅಧ್ಯಕ್ಷ ಶರದ್‌ ಪವಾರ್‌, ಆರ್‌ಜೆಡಿಯ ತೇಜಸ್ವಿ ಯಾದವ್‌, ಸಿಪಿಎಂ ನಾಯಕರಾದ ಸೀತಾರಾಂ ಯಚೂರಿ, ಡಿ ರಾಜ, ಕಲ್ಪನಾ ಸೊರೇನ್, ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.

2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 99, ಎಸ್‌ಪಿ 37,ಟಿಎಂಸಿ 29, ಡಿಎಂಕೆ 22, ಶಿವಸೇನೆ 9, ಎನ್‌ಸಿಪಿ 8 ಸ್ಥಾನಗಳು ಒಳಗೊಂಡು ಇಂಡಿಯಾ ಮೈತ್ರಿಕೂಟವು 234 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರ ಬಜೆಟ್ | ಇನ್ಮುಂದೆ ಯಾವುದು ಅಗ್ಗ? ಯಾವುದು ದುಬಾರಿ?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23ರಂದು ಕೇಂದ್ರ ಬಜೆಟ್...

ಕೇಂದ್ರ ಬಜೆಟ್ | ಬಿಹಾರ, ಆಂಧ್ರ ಪ್ರದೇಶಕ್ಕೆ ಬಂಪರ್; ಸೋಶಿಯಲ್ ಮೀಡಿಯಾದಲ್ಲಿ ಮೀಮ್ಸ್‌ಗಳು ವೈರಲ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದು ಬಿಹಾರ...

ಆದಾಯ ತೆರಿಗೆ ಸ್ಲ್ಯಾಬ್‌ನಲ್ಲಿ ಪರಿಷ್ಕರಣೆ; ಯಾರ್ಯಾರು ಎಷ್ಟು ತೆರಿಗೆ ಪಾವತಿಸಬೇಕು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ 2024-25ನೇ ಸಾಲಿನ ಬಜೆಟ್‌ ಮಂಡಿಸುತ್ತಿದ್ದು,...

ಕೇಂದ್ರ ಬಜೆಟ್‌ | ಕರ್ನಾಟಕಕ್ಕಿಲ್ಲ ವಿಶೇಷ ಯೋಜನೆ; ಆಯವ್ಯಯದ ಮುಖ್ಯಾಂಶಗಳು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ (ಜುಲೈ 23)ರಂದು...