ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು: ಸಚಿವ ವಿಜಯ್ ಶಾ ವಿವಾದಾತ್ಮಕ ಹೇಳಿಕೆ

Date:

“ನಮ್ಮ ಹೆಣ್ಣುಮಕ್ಕಳ ಸಿಂಧೂರ ಅಳಿಸಿದ್ದ ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು ಎಂದು ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಸಚಿವ ವಿಜಯ್ ಶಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ವಿಜಯ್ ಶಾ ಈ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

- Advertisement -

ಮಂಗಳವಾರ, ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವ ವಿಜಯ್ ಶಾ, “ಯಾರು ನಮ್ಮ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದರೊ, ಅವರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಅವರ ಹೇಳಿಕೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ವಿರೋಧಕ್ಕೆ ಗುರಿಯಾಗಿದೆ. ವಿಪಕ್ಷ ಕಾಂಗ್ರೆಸ್‌ ಸೇರಿದಂತೆ ಹಲವರು ವಿಜಯ್ ಶಾ ಹೇಳಿಕೆಯನ್ನು ಖಂಡಿಸಿದ್ದಾರೆ.

ವಿಜಯ್ ಶಾ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಬಿಜೆಪಿ-ಆರ್‌ಎಸ್‌ಎಸ್‌ನ ಮನಃಸ್ಥಿತಿ ಎಂದಿಗೂ ಮಹಿಳಾ ವಿರೋಧಿಯಾಗಿದೆ ಇದೆ. ಭಯೋತ್ಪಾದಕರ ದಾಳಿಗೆ ಬಲಿಯಾದ ನೌಕಾ ಪಡೆ ಅಧಿಕಾರಿಯ ಪತ್ನಿಯನ್ನು ಬಿಜೆಪಿ ಮೊದಲ ಟ್ರೋಲ್ ಮಾಡಿದರು. ನಂತರ, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರ ಮಗಳಿಗೆ ಮಾನಸಿಕ ಹಿಂಸೆ ನೀಡಿದರು. ಈಗ, ಕರ್ನಲ್‌ ಸೋಫಿಯಾ ಖುರೇಷಿ ಅವರ ಕುರಿತು ಬಿಜೆಪಿಗರು ತುಚ್ಛವಾಗಿ ಮಾತಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಿರುವ, ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಕುರಿತು ಅವಹೇಳನವಾಗಿ ಮಾತನಾಡಿರುವ ಸಚಿವನನ್ನು ಪ್ರಧಾನಿ ಮೋದಿ ಅವರು ತಕ್ಷಣವೇ ಅಮಾನತು ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಸಚಿವ ವಿಜಯ್ ಶಾ, “ನನ್ನ ಹೇಳಿಕೆಯನ್ನು ತಿರುಚಿ, ಹಂಚಿಕೊಳ್ಳಲಾಗಿದೆ” ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...