2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

Date:

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ ಮತಗಳನ್ನು ಚುನಾವಣಾ ಆಯೋಗ (ಇಸಿ) ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಅಳಿಸಿಹಾಕಿದ್ದಾರೆ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

- Advertisement -

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್) ಕುರಿತು ರಾಜಕೀಯ ವಾದ-ವಿವಾದಗಳು ನಡೆಯುತ್ತಿರುವ ಬೆನ್ನಲ್ಲೇ ಅಖಿಲೇಶ್ ಅವರ ಈ ಹೇಳಿಕೆ ಹೊರಬಿದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನೂ ಓದಿ: SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್ ಶಾ ಏನು?

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್ ಯಾದವ್, “2017ರ ಚುನಾವಣೆಯ ಸಮಯದಲ್ಲಿ ನಾವು ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ತನ್ನ ನಿಷ್ಠೆಯನ್ನು ಕಾಯ್ದುಕೊಳ್ಳುತ್ತದೆ ಎಂದು ನಂಬಿದ್ದೆವು. ಹಾಗಾಗಿ ನಾವು ಆ ಸಮಯದಲ್ಲಿ ಹೆಚ್ಚು ಗಮನ ಹರಿಸಿರಲಿಲ್ಲ. ಆದರೆ 2022ರ ವಿಧಾನಸಭಾ ಫಲಿತಾಂಶ ಬಂದಾಗ, ಚುನಾವಣಾ ಆಯೋಗ ಮತ್ತು ಕೆಲವು ಅಧಿಕಾರಿಗಳು ಶಾಮೀಲಾಗಿ ಎಸ್‌ಪಿ ಸಾಂಪ್ರದಾಯಿಕ ಮತಗಳನ್ನು ಉದ್ದೇಶಪೂರ್ವಕವಾಗಿ ಡಿಲೀಟ್ ಮಾಡಿದ್ದಾರೆ ಎಂಬುದು ಸ್ಪಷ್ಟವಾಯಿತು” ಎಂದು ಹೇಳಿದ್ದಾರೆ.

“2019ರ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ್ದ ಅನೇಕ ಮತದಾರರಿಗೆ 2022ರ ವೇಳೆಗೆ ಯಾವುದೇ ನೋಟಿಸ್ ನೀಡದೆ, ಯಾವುದೇ ಕಾನೂನು ಅಥವಾ ನಿಯಮಗಳನ್ನು ಪಾಲಿಸದೆ ಮತದಾನದ ಹಕ್ಕನ್ನು ನಿರಾಕರಿಸಲಾಯಿತು. ಈ ಅಕ್ರಮಗಳ ಕಾರಣದಿಂದಾಗಿಯೇ 2022ರಲ್ಲಿ ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಗಲಿಲ್ಲ” ಎಂದು ದೂರಿದ್ದಾರೆ.

ಈ ರೀತಿಯ ಅಕ್ರಮಗಳು ಇಂದು ನಿನ್ನೆಯದಲ್ಲ, ಹಲವು ವರ್ಷಗಳಿಂದ ನಡೆಯುತ್ತಿವೆ; ಆದರೆ ಈಗಷ್ಟೇ ಇವು ಹೊರಬರುತ್ತಿವೆ ಎಂದು ಅಖಿಲೇಶ್ ಅಭಿಪ್ರಾಯಪಟ್ಟಿದ್ದಾರೆ. ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಖಿಲೇಶ್ ಅವರ ಈ ಹೇಳಿಕೆಗಳು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ಉತ್ತರ ಪ್ರದೇಶದಲ್ಲಿ ಜಲಪ್ರಳಯ: ಪ್ರವಾಹಕ್ಕೆ 56 ಮಂದಿ ಬಲಿ, ಸಾವಿರಕ್ಕೂ ಹೆಚ್ಚು ಮನೆಗಳು ಧ್ವಂಸ

ಉತ್ತರ ಪ್ರದೇಶದಲ್ಲಿ ಕಳೆದ 60 ಗಂಟೆಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ...