ನಿಮ್ಮ ನೋವು ತಿಳಿದಿದೆ, ಶಾಂತಿಯನ್ನು ಮರಳಿಸುತ್ತೇವೆ: ಮಣಿಪುರದ ಜನರಿಗೆ ರಾಹುಲ್ ಭರವಸೆ

Date:

ನರೇಂದ್ರ ಮೋದಿ, ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನವರು ಮಣಿಪುರವನ್ನು ಈ ದೇಶದ ಭಾಗವೆಂದು ತಿಳಿದಿಲ್ಲ. ನಿಮ್ಮ ನೋವು ಅವರ ನೋವಾಗಿಲ್ಲ. ನಾವು ಮಣಿಪುರದ ಜನರು ಅನುಭವಿಸುತ್ತಿರುವ ನೋವನ್ನು ಅರ್ಥಮಾಡಿಕೊಂಡಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

- Advertisement -

ಮಣಿಪುರದ ತೌಂಬಲ್‌ನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಅಭಿಯಾನ ಉದ್ಘಾಟಿಸಿ  ಮಾತನಾಡಿದರು. ನಿಮ್ಮ ದುಃಖ,ದುಮ್ಮಾನ ತಿಳಿದಿದೆ. ನಾವು ಶಾಂತಿ ಸಾಮರಸ್ಯವನ್ನು ಮರಳಿಸುತ್ತೇವೆ. ಇಲ್ಲಿನ ಲಕ್ಷಾಂತರ ಜನರು ತುಂಬ ನಷ್ಟವನ್ನು ಅನುಭವಿಸಿದ್ದಾರೆ. ನಿಮ್ಮ ಕಣ್ಣೀರನ್ನು ಒರೆಸಲು ಪ್ರಧಾನಿಯವರು ಇಲ್ಲಿಗೆ ಬರಲಿಲ್ಲ. ನಿಮ್ಮ ಕೈಯನ್ನು ಹಿಡಿದು ಅಪ್ಪಿಕೊಳ್ಳಲಿಲ್ಲ. ಅವರೆಲ್ಲ ಮಣಿಪುರ ಈ ದೇಶದ ಭಾಗವಲ್ಲ ಎಂದು ತಿಳಿದಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿಯವರಿಗೆ ಸಮುದ್ರದ ಆಳದಲ್ಲಿ ಈಜಾಡಲು ಸಮಯವಿದೆ, ಆದರೆ ಮಣಿಪುರಕ್ಕೆ ಬರಲು ಸಮಯವಿಲ್ಲ. ಮೋದಿ ರಾಮ, ರಾಮ ಎಂಬ ಭಜನೆ ಮಾಡುತ್ತಾರೆ. ಆದರೆ ತಮ್ಮ ಭಜನೆಯನ್ನು ಮತ ಕೇಳಲು ಮಾತ್ರ ಬಳಸುತ್ತಾರೆ. ಬಿಜೆಪಿಯು ಧರ್ಮ ಹಾಗೂ ರಾಜಕಾರಣ ಬೆರಸಿ ಜನರನ್ನು ಪ್ರಚೋದಿಸುತ್ತಿದೆ. ಬಿಜೆಪಿಯವರು ಬಾಯಲಿ ರಾಮ ಎಂದು ಹೇಳಿ, ಕೈನಲ್ಲಿ ಚಾಕು ಇಟ್ಟುಕೊಂಡಿರುತ್ತಾರೆ. ರಾಜಕೀಯಕ್ಕಾಗಿ ಇಂತಹ ಕೆಲಸವನ್ನು ಮಾಡಬಾರದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂದು ಪಕೋಡ, ಇಂದು ಶ್ರೀರಾಮ ಭಜನೆ; ನಿರುದ್ಯೋಗ ನಿವಾರಣೆಯಾಯಿತೇ?

“ಕಾಂಗ್ರೆಸ್ ಸಾಮಾಜಿಕ ನ್ಯಾಯ, ಜಾತ್ಯತೀತತೆ ಹಾಗೂ ಸಮಾನತೆ ಪರವಾಗಿ ನಿಂತಿದೆ. ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿವ ಅಭಿಯಾನವಾಗಿದ್ದು, ಪ್ಯಾಸಿಸ್ಟ್ ಪಡೆಗಳ ವಿರುದ್ಧದ ಹೋರಾಟವಾಗಿದೆ. ನಮ್ಮ ಪಕ್ಷದ ನಾಯಕರು ಮನೆಮನೆಗೆ ತೆರಳಿ ಶಾಂತಿ ಸಂದೇಶ ಸಾರುತ್ತಿದ್ದಾರೆ” ಎಂದು ಖರ್ಗೆ ಹೇಳಿದರು.

ಇದೇ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಮಣಿಪುರದಿಂದ ಮುಂಬೈವರೆಗೂ ತೆರಳುವ ಭಾರತ್‌ ಜೋಡೋ ನ್ಯಾಯ ಯಾತ್ರೆ ಅಭಿಯಾನದ ಬಸ್‌ಅನ್ನು ಉದ್ಘಾಟಿಸಿದರು.

ಯಾತ್ರೆಯು 100 ಲೋಕಸಭಾ ಕ್ಷೇತ್ರಗಳು ಮತ್ತು 337 ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತು 110 ಜಿಲ್ಲೆಗಳಲ್ಲಿ 6,713 ಕಿಮೀ ದೂರವನ್ನು ಕ್ರಮಿಸಲಿದೆ. ಇದು 66 ದಿನಗಳ ನಂತರ ಮಾರ್ಚ್ 20 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...