‘ನಮ್ಮ ಜಂತರ್ ಮಂತರ್‌ಗಳನ್ನು ನಾವೇ ಸೃಷ್ಟಿಸಿಕೊಳ್ಳುತ್ತೇವೆ’; ಬಂಧನ ಕೇಂದ್ರಗಳನ್ನೇ ಪ್ರತಿಭಟನಾ ತಾಣಗಳಾಗಿಸಿದ ಜೆನ್‌-ಝೀಗಳು

Date:

ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆ ನೀಡಿದ್ದ ‘ಜಂತರ್ ಮಂತರ್ 2.0’ ಪ್ರತಿಭಟನೆಯನ್ನು ತಡೆಯಲು ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸಿದ್ದು, 3,500ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅವರನ್ನು ನಗರದ ವಿವಿಧ ಭಾಗಗಳಲ್ಲಿರುವ ತಾತ್ಕಾಲಿಕ ಬಂಧನ ಕೇಂದ್ರಗಳಿಗೆ ಕರೆದೊಯ್ಯಲಾಗಿತ್ತು. ಆದರೆ, ಪ್ರತಿಭಟನಾಕಾರರು ಅಲ್ಲಿಯೂ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಹೋರಾಟ ಮುಂದುವರಿಸಿದ್ದರು.

- Advertisement -

ಪ್ರತಿಭಟನೆಗೆ ನಿಗದಿಪಡಿಸಿದ್ದ ಸ್ಥಳದಲ್ಲಿ ಅವಕಾಶ ಸಿಗದ ಹಿನ್ನೆಲೆಯಲ್ಲಿ, ತಮ್ಮನ್ನು ಇರಿಸಿದ್ದ ಬಂಧನ ಕೇಂದ್ರಗಳನ್ನೇ ಪ್ರತಿಭಟನಾ ತಾಣಗಳಾಗಿ ಪರಿವರ್ತಿಸಿಕೊಂಡಿದ್ದರು. ನಗರದ ವಿವಿಧೆಡೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದ ಸ್ಥಳಗಳಲ್ಲಿಯೂ ಪ್ರತಿಭಟನೆಗಳು ನಡೆದಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸಿಜೆಪಿ ಆಯೋಜಿಸಿದ್ದ ಪ್ರತಿಭಟನೆಯನ್ನು ತಡೆಯಲು ದೆಹಲಿ ಪೊಲೀಸರು ಕೈಗೊಂಡ ಕಾರ್ಯಾಚರಣೆಯಲ್ಲಿ 3,500ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದರು ಎಂದು ವರದಿಯಾಗಿದೆ. ಬವಾನಾ, ಮುಂಡ್ಕಾ, ಬುರಾರಿ, ನರೇಲಾ ಮತ್ತು ನಾಂಗ್ಲೋಯಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿರುವ ತಾತ್ಕಾಲಿಕ ಬಂಧನ ಕೇಂದ್ರಗಳಿಗೆ ಅವರನ್ನು ಕರೆದೊಯ್ಯಲಾಗಿತ್ತು. ಆದರೆ, ಬಂಧನ ಕೇಂದ್ರಗಳಿಗೆ ಸ್ಥಳಾಂತರಿಸಿದರೂ ಪ್ರತಿಭಟನಾಕಾರರು ಹೋರಾಟದಿಂದ ಹಿಂದೆ ಸರಿದಿರಲಿಲ್ಲ. ಅಲ್ಲಿಯೇ ಘೋಷಣೆಗಳನ್ನು ಕೂಗುತ್ತಾ, ರಾಷ್ಟ್ರಗೀತೆಯನ್ನು ಹಾಡುತ್ತಾ ಪ್ರತಿಭಟನೆ ಮುಂದುವರಿಸಿದ್ದರು.

“ಪ್ರತಿಭಟನೆಗೆ ನಿಗದಿಪಡಿಸಿದ ಸ್ಥಳದಲ್ಲಿ ನಮಗೆ ಅವಕಾಶ ನೀಡದಿದ್ದರೆ, ನಾವು ಇರುವ ಸ್ಥಳವನ್ನೇ ಜಂತರ್ ಮಂತರ್ ಆಗಿ ಪರಿವರ್ತಿಸಿಕೊಂಡು ಹೋರಾಟ ನಡೆಸುತ್ತೇವೆ. ಇದು ನಾಗರಿಕ ಅಸಹಕಾರ ಚಳವಳಿ” ಎಂದು ಪ್ರತಿಭಟನಾಕಾರ ಸೃಜನ್ ಹೇಳಿದ್ದರು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರನ್ನು ನಗರದ ದೂರದ ಪೊಲೀಸ್ ಠಾಣೆಗಳಿಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರಿಗೆ ಕುಡಿಯುವ ನೀರನ್ನೂ ಒದಗಿಸಿರಲಿಲ್ಲ ಎಂದು ಅವರು ಆರೋಪಿಸಿದ್ದರು. “ಪ್ರತಿಭಟನಾಕಾರರನ್ನು ರಾಜಕೀಯ ಹೋರಾಟಗಾರರಂತೆ ನೋಡದೆ ಅಪರಾಧಿಗಳಂತೆ ನಡೆಸಿಕೊಳ್ಳಲಾಗಿತ್ತು. ಅವರನ್ನು ಅತ್ಯಂತ ಕ್ರೂರವಾಗಿ ವಶಕ್ಕೆ ಪಡೆಯಲಾಗಿತ್ತು” ಎಂದು ಅವರು ದೂರಿದ್ದರು.

ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)ದ ರಾಜ್ಯಸಭಾ ಸದಸ್ಯ ಎ.ಎ. ರಹೀಂ ಹಾಗೂ ಭಾರತೀಯ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ)ನ ವಶಕ್ಕೆ ಪಡೆದ ಕಾರ್ಯಕರ್ತರು ನಾಂಗ್ಲೋಯಿ ಕ್ರೀಡಾಂಗಣವನ್ನೇ ‘ಜಂತರ್ ಮಂತರ್ 2.0’ ಎಂದು ಘೋಷಿಸಿದ್ದರು ಎಂದು ವರದಿಯಾಗಿತ್ತು.

ಪೊಲೀಸರ ದೌರ್ಜನ್ಯದ ಆರೋಪಗಳ ವಿರುದ್ಧ ಅವರು ಉಪವಾಸ ಸತ್ಯಾಗ್ರಹವನ್ನೂ ಆರಂಭಿಸಿದ್ದರು ಎನ್ನಲಾಗಿತ್ತು. ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಪೊಲೀಸರು ವಶಪಡಿಸಿಕೊಂಡಿದ್ದ ಮೊಬೈಲ್ ಫೋನ್‌ಗಳು ಹಾಗೂ ಬ್ಯಾಗ್‌ಗಳನ್ನು ಹಿಂದಿರುಗಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ರಹೀಂ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು ಎಂದು ಸೃಜನ್ ತಿಳಿಸಿದ್ದರು.

ತಮ್ಮನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಚಿತಪಡಿಸಿದ್ದ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ (ಎಐಎಸ್‌ಎ) ನಾಯಕಿ ನೇಹಾ ಬೋರಾ, ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಹೇಳಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವಿಡಿಯೊ ಸಂದೇಶದಲ್ಲಿ, “ಸಫ್ದರ್‌ಜಂಗ್ ಮೇಲ್ಸೇತುವೆ ಬಳಿ ಜನರು ಜಮಾಯಿಸುತ್ತಿದ್ದಾರೆ. ನಿಮ್ಮನ್ನು ಎಲ್ಲಿಯಾದರೂ ತಡೆದರೆ, ಅಲ್ಲಿಯೇ ಕುಳಿತು ಪ್ರತಿಭಟನೆ ಆರಂಭಿಸಿ. ಹೋರಾಟವನ್ನು ಮುಂದುವರಿಸಿ” ಎಂದು ಕರೆ ನೀಡಿದ್ದರು.

ಸಿಜೆಪಿಯ ಹಿರಿಯ ನಾಯಕರನ್ನು ಪೊಲೀಸರು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಸಂಘಟನೆಯ ಉಸ್ತುವಾರಿ ಅಜಿಂಕ್ಯ ಶಿಂಧೆ ಹೋರಾಟದ ನೇತೃತ್ವ ವಹಿಸಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಆಡಳಿತದ ಕ್ರಮಗಳನ್ನು ಅವರು ಖಂಡಿಸಿದ್ದರು. ಪ್ರತಿಭಟನೆಯನ್ನು ಹತ್ತಿಕ್ಕಲು ನಡೆಯುತ್ತಿದ್ದ ಕಾರ್ಯಾಚರಣೆಯನ್ನು ‘ಸಂಸ್ಥಾಗತ ಆತಂಕದ ಸಂಕೇತ’ ಎಂದು ಟೀಕಿಸಿದ್ದರು.

“ಸರ್ಕಾರದ ಭಯ ಮತ್ತು ಪ್ರತಿಭಟನೆಯನ್ನು ಹತ್ತಿಕ್ಕಲು ನಡೆಸುತ್ತಿರುವ ಪ್ರಯತ್ನಗಳು ಒಂದು ವಿಷಯವನ್ನು ಸ್ಪಷ್ಟಪಡಿಸುತ್ತವೆ. ನಾವು ಈಗಾಗಲೇ ಅರ್ಧ ಹೋರಾಟವನ್ನು ಗೆದ್ದಿದ್ದೇವೆ. ದೇಶದ ವಿವಿಧ ಭಾಗಗಳಿಂದ ಒಂದಾಗಿ ಬಂದಿರುವ ನಾಗರಿಕರ ಒಗ್ಗಟ್ಟು ಆಡಳಿತ ವ್ಯವಸ್ಥೆಯನ್ನೇ ನಡುಗಿಸಿದೆ” ಎಂದು ಶಿಂಧೆ ಹೇಳಿದ್ದರು. ಜಂತರ್ ಮಂತರ್ ಕಡೆಗೆ ಸಿಜೆಪಿಯ ಮೆರವಣಿಗೆ ಮುಂದುವರಿಯಲಿದೆ ಎಂದು ತಿಳಿಸಿದ್ದ ಅವರು, ರಸ್ತೆಗಳಲ್ಲಿ ಪೊಲೀಸರು ಅಥವಾ ಬ್ಯಾರಿಕೇಡ್‌ಗಳು ತಡೆದರೂ ಅಲ್ಲಿಯೇ ಪ್ರತಿಭಟನೆ ಆರಂಭಿಸುವಂತೆ ಬೆಂಬಲಿಗರಿಗೆ ಕರೆ ನೀಡಿದ್ದರು.

ಪ್ರತಿಭಟನೆಯನ್ನು ನಿಯಂತ್ರಿಸಲು ದೆಹಲಿ ಪೊಲೀಸರು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು (ಸಿಎಪಿಎಫ್) ದೊಡ್ಡ ಸಂಖ್ಯೆಯಲ್ಲಿ ನಿಯೋಜಿಸಲಾಗಿತ್ತು. ವರದಿಯ ಪ್ರಕಾರ, ದೆಹಲಿಯ 45 ಮೆಟ್ರೋ ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಮುಚ್ಚಲಾಗಿತ್ತು. ದೆಹಲಿಗೆ ಆಗಮಿಸುವ ಕೆಲವು ರೈಲುಗಳನ್ನು ರದ್ದುಗೊಳಿಸಲಾಗಿತ್ತು. ಮಧ್ಯ ದೆಹಲಿಯ ಕೆಲವು ಪ್ರದೇಶಗಳಲ್ಲಿ ಇಂಟರ್‌ನೆಟ್ ಸೇವೆಗಳನ್ನೂ ಸ್ಥಗಿತಗೊಳಿಸಲಾಗಿತ್ತು.

ಇದನ್ನೂ ಓದಿ: ಸಿಜೆಪಿ ಹೋರಾಟಕ್ಕೆ ಬೆಂಬಲ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ಪ್ರಮುಖ ಕಾನೂನು ತಜ್ಞರು, ನಾಗರಿಕ ಸಂಘಟನೆಗಳ ಸದಸ್ಯರು ಸೇರಿದಂತೆ ನೂರಾರು ಯುವ ಕಾರ್ಯಕರ್ತರು, ಬೆಂಬಲಿಗರು ಮತ್ತು ಸಾರ್ವಜನಿಕ ವ್ಯಕ್ತಿಗಳನ್ನು ಮುನ್ನೆಚ್ಚರಿಕಾ ಕ್ರಮದ ಹೆಸರಿನಲ್ಲಿ ವಶಕ್ಕೆ ಪಡೆಯಲಾಗಿತ್ತು ಎಂದು ಸಿಜೆಪಿ ಹೇಳಿತ್ತು. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಕನ್ನಾಟ್ ಪ್ಲೇಸ್ ಹಾಗೂ ಗಡಿ ತಪಾಸಣಾ ಕೇಂದ್ರಗಳು ಸೇರಿದಂತೆ ವಿವಿಧ ಪ್ರವೇಶ ಮಾರ್ಗಗಳಲ್ಲಿಯೂ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಸಂಘಟನೆ ಆರೋಪಿಸಿತ್ತು. ವಶಕ್ಕೆ ಪಡೆದವರನ್ನು ಛತ್ರಸಾಲ್ ಕ್ರೀಡಾಂಗಣ ಮತ್ತು ಯಮುನಾ ಕ್ರೀಡಾ ಸಂಕೀರ್ಣ ಸೇರಿದಂತೆ ರಾಜಧಾನಿಯ ವಿವಿಧೆಡೆ ಸ್ಥಾಪಿಸಲಾಗಿದ್ದ ತಾತ್ಕಾಲಿಕ ಬಂಧನ ಕೇಂದ್ರಗಳಿಗೆ ಕರೆದೊಯ್ಯಲಾಗಿತ್ತು ಎಂದು ಸಿಜೆಪಿ ತನ್ನ ಹೇಳಿಕೆಯಲ್ಲಿ ತಿಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಅಘೋಷಿತ ತುರ್ತು ಪರಿಸ್ಥಿತಿ: ಪ್ರತಿಭಟನಾಕಾರರ ಬಿಡುಗಡೆ ಮಾಡದಿದ್ದರೆ ಉಪವಾಸ; ವಾಂಗ್‌ಚುಕ್ ಎಚ್ಚರಿಕೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವಿವಿಧ ನಾಯಕರು...

ಮುಂಬೈ | ಸಿಜೆಪಿ ಪ್ರತಿಭಟನೆಗೆ ಬೆಂಬಲ; ಬಾಲಿವುಡ್ ನಟ ಇಮ್ರಾನ್ ಖಾನ್ ಸೇರಿ 400ಕ್ಕೂ ಹೆಚ್ಚು ಮಂದಿ ವಶಕ್ಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...