ಮಾತುಕತೆಗೆ ಮಂತ್ರಿಗಳ ಮನೆಗೆ ಅಲೆಯುವುದಿಲ್ಲ, ಸರ್ಕಾರವೇ ಜಂತರ್ ಮಂತರ್‌ಗೆ ಬರಲಿ: ದೀಪ್ಕೆ ಗುಡುಗು

Date:

ಕೇಂದ್ರ ಸರ್ಕಾರದ ದ್ವಂದ್ವ ನೀತಿ ಹಾಗೂ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, “ನಾವಿನ್ನು ಮಾತುಕತೆಗಾಗಿ ಮಂತ್ರಿಗಳ ಮನೆ ಬಾಗಿಲಿಗೆ ಅಲೆಯುವುದಿಲ್ಲ. ಸರ್ಕಾರಕ್ಕೆ ನಮ್ಮೊಡನೆ ಪ್ರಾಮಾಣಿಕವಾಗಿ ಮಾತುಕತೆ ನಡೆಸುವ ಇಚ್ಛೆಯಿದ್ದರೆ, ನಾವು ಪ್ರತಿಭಟನೆಗೆ ಕೂಳಿತಿರುವ ಜಂತರ್ ಮಂತರ್‌ಗೇ ಬರಲಿ” ಎಂದು ಸರ್ಕಾರಕ್ಕೆ ನೇರ ಸವಾಲು ಹಾಕಿದ್ದಾರೆ.

- Advertisement -

ನವದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್‌ ಅಕ್ರಮ ಖಂಡಿಸಿ ಸತತ 32 ದಿನಗಳಿಂದ ನಡೆಯುತ್ತಿರುವ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ಕಪಟ ಉದ್ದೇಶವನ್ನು ಬಿಚ್ಚಿಟ್ಟರು. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಮಾತುಕತೆಯ ನೆಪದಲ್ಲಿ ಸಿಜೆಪಿ ನಾಯಕರಾದ ಆಶುತೋಷ್ ರಂಕಾ ಹಾಗೂ ಸೌರವ್ ದಾಸ್ ಅವರನ್ನು ತಮ್ಮ ನಿವಾಸದಲ್ಲಿಯೇ ಗೃಹಬಂಧನದಲ್ಲಿ ಇರಿಸಿದ್ದರು. ಅಲ್ಲದೆ, ಅವರ ಮೊಬೈಲ್‌ಗಳನ್ನು ಕಸಿದುಕೊಂಡು ನಮ್ಮ ಸಮಯವನ್ನು ಉದ್ದೇಶಪೂರ್ವಕವಾಗಿ ವ್ಯರ್ಥ ಮಾಡಿದರು ಎಂದು ಗಂಭೀರ ಆರೋಪ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಒಂದೆಡೆ ನಮ್ಮ ಪ್ರಮುಖ ನಾಯಕರನ್ನು ಮಾತುಕತೆಗೆಂದು ಕರೆದು ದಿಗ್ಬಂಧನದಲ್ಲಿ ಇಡುವುದು, ಮತ್ತೊಂದೆಡೆ ಬೀದಿಯಲ್ಲಿ ಶಾಂತಿಯುತವಾಗಿ ಹೋರಾಟ ಮಾಡುತ್ತಿರುವ ಮುಗ್ಧ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸುವುದು ಸರ್ಕಾರದ ಪೂರ್ವನಿಯೋಜಿತ ಕುತಂತ್ರವಾಗಿದೆ. ನಾಯಕರೇ ಇಲ್ಲದ ವೇಳೆ ಗೊಂದಲ ಸೃಷ್ಟಿಸಿ ಇಡೀ ಹೋರಾಟವನ್ನು ಹತ್ತಿಕ್ಕುವ ಸರ್ಕಾರದ ಈ ದಮನಕಾರಿ ನೀತಿಗೆ ನಾವು ಯಾವುದೇ ಕಾರಣಕ್ಕೂ ಜಗ್ಗುವುದಿಲ್ಲ ಎಂದು ದೀಪ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಪರಿಸರವಾದಿ ಸೋನಂ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಅವರು, “ವಾಂಗ್‌ಚುಕ್ ಉಪವಾಸ ಕೈಬಿಡಲು ನಮ್ಮ ಮನವಿಗೆ ಒಪ್ಪಿದ್ದರು. ಆದರೆ ‘ಸಂಸತ್ ಚಲೋ’ ಮೆರವಣಿಗೆಯ ವೇಳೆ ಪೊಲೀಸರು ತೋರಿದ ಕ್ರೌರ್ಯವನ್ನು ಕಣ್ಣಾರೆ ಕಂಡು ಅವರು ತಮ್ಮ ನಿರ್ಧಾರ ಬದಲಿಸಿದ್ದಾರೆ. ಇದು ಅತ್ಯಂತ ಗಂಭೀರ ವಿಚಾರವಾಗಿದೆ. ಅವರ ಜೀವ ಈ ದೇಶಕ್ಕೆ ಬಹಳ ಅಮೂಲ್ಯವಾಗಿದೆ” ಎಂದರು.

ಪೊಲೀಸರು ದೌರ್ಜನ್ಯ ನಡೆಸಿ ಪ್ರತಿಭಟನಾಕಾರರ ಟೆಂಟ್‌ಗಳನ್ನು ಕಿತ್ತುಹಾಕಿದರೂ, ಜಂತರ್ ಮಂತರ್‌ನಲ್ಲಿ ಯುವಸಮೂಹದ ಹೋರಾಟ ಕಿಂಚಿತ್ತೂ ಕಡಿಮೆಯಾಗಿಲ್ಲ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಲೇಬೇಕು ಎಂದು ಪಟ್ಟುಹಿಡಿದಿರುವ ಸಿಜೆಪಿ ಕಾರ್ಯಕರ್ತರು, ಆವರಣವನ್ನು ಸ್ವಚ್ಛಗೊಳಿಸಿ ಪ್ರತಿಭಟನೆ ಮುಂದುವರಿಸಿದ್ದಾರೆ. ಅಲ್ಲದೆ, ಗಾಯಾಳು ಪ್ರತಿಭಟನಾಕಾರರಿಗೆ ಅಗತ್ಯ ವೈದ್ಯಕೀಯ ಮತ್ತು ಕಾನೂನು ನೆರವು ಒದಗಿಸುತ್ತಾ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶೇರುಪೇಟೆ- ಈ ವಾರದ ನಷ್ಟ 20 ಲಕ್ಷ ಕೋಟಿ! ತೈಲ ಬೆಲೆಗಳ ‘ಕರಡಿ ಕುಣಿತ’ವೇ ಕಾರಣ

ಹಬ್ಬದ ಸಂಭ್ರಮದ ಸಮಯದಲ್ಲಿ ಶೇರುಪೇಟೆಯಲ್ಲಿ ಬಂಡವಾಳ ಹೂಡಿಕೆ ಮಾಡಿದವರು ತೀವ್ರ ನಿರಾಸೆಯನ್ನು...

ಅಮೆರಿಕದ ನಿರ್ಬಂಧ ಭೀತಿ: ಇರಾನ್‌ಗೆ ಔಷಧ ಸಾಗಿಸುವ ನೇರ ವಿಮಾನ ಹಾರಾಟಕ್ಕೆ ಭಾರತ ತಡೆ

ಅಮೆರಿಕ ವಿಧಿಸಬಹುದಾದ ಆರ್ಥಿಕ ನಿರ್ಬಂಧಗಳ ಭೀತಿಯಿಂದಾಗಿ, ಇರಾನ್ ಜತೆಗಿನ ನೇರ ವಿಮಾನಗಳ...

ಸೊರಬ | ಮಾದಕ ದ್ರವ್ಯ, ಡಿಜಿಟಲ್ ವಂಚನೆ ವಿರೋಧಿ ಜನಜಾಗೃತಿ ಜಾಥಾ ಮತ್ತು ಯುವ ಸಮಾವೇಶ

ಮಾದಕ ದ್ರವ್ಯಗಳ ದುಷ್ಪರಿಣಾಮ ಮತ್ತು ಹೆಚ್ಚುತ್ತಿರುವ ಡಿಜಿಟಲ್ ವಂಚನೆಗಳ ಬಗ್ಗೆ ಯುವಜನರಲ್ಲಿ...

ಜ.1ರಿಂದ ವಾಟ್ಸಾಪ್‌, ಟೆಲಿಗ್ರಾಂ ಬಳಕೆಗೆ ಹೊಸ ರೂಲ್ಸ್; ಸಿಮ್‌ ತೆಗೆದರೆ ಖಾತೆ ಬಂದ್‌!

ವಾಟ್ಸಾಪ್‌, ಟೆಲಿಗ್ರಾಂ ಸೇರಿದಂತೆ ಮೊಬೈಲ್‌ ಸಂಖ್ಯೆಯ ಆಧಾರದಲ್ಲಿ ಕಾರ್ಯನಿರ್ವಹಿಸುವ ಮೆಸೇಜಿಂಗ್‌ ಆ್ಯಪ್‌ಗಳ...