ಹವಾಮಾನ ವರದಿ | ಬೆಂಕಿಯುಂಡೆಯಾದ ಉತ್ತರ ಭಾರತ: 45 ಡಿಗ್ರಿ ದಾಟಲಿದೆ ತಾಪಮಾನ!

Date:

ದೇಶದ ಹಲವು ರಾಜ್ಯಗಳಲ್ಲಿ ಮುಂಬರುವ ದಿನಗಳಲ್ಲಿ ತಾಪಮಾನವು ಬರೋಬ್ಬರಿ 45 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಲಿದ್ದು, ಭೀಕರ ಉಷ್ಣ ಹವೆ (Heatwave) ಆವರಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತೀವ್ರ ಮುನ್ನೆಚ್ಚರಿಕೆ ನೀಡಿದೆ. ಕನಿಷ್ಠ ಮುಂದಿನ ಒಂದು ವಾರದವರೆಗೆ ಇದೇ ರೀತಿಯ ಒಣ ಮತ್ತು ಸುಡುವ ವಾತಾವರಣ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

- Advertisement -

ಈ ಕುರಿತು ಮಾಹಿತಿ ನೀಡಿರುವ IMD ವಿಜ್ಞಾನಿ ಅಖಿಲೇಶ್ ಶ್ರೀವಾಸ್ತವ್, “ವಾಯುವ್ಯ ಮತ್ತು ಮಧ್ಯ ಭಾರತದ ಬಹುತೇಕ ಭಾಗಗಳಲ್ಲಿ ಇಂದಿನಿಂದಲೇ ಶಾಖದ ಅಲೆಯ ಪ್ರಭಾವ ಆರಂಭವಾಗಿದ್ದು, ಮುಂದಿನ 7 ದಿನಗಳ ಕಾಲ ನಾಗರಿಕರು ತೀವ್ರ ಎಚ್ಚರಿಕೆಯಿಂದ ಇರಬೇಕಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಯಾವ ರಾಜ್ಯಗಳಿಗೆ ಯಾವ ಅಲರ್ಟ್?

  • ಆರೆಂಜ್ ಅಲರ್ಟ್ (ತೀವ್ರ ಬಿಸಿ ಹವೆ): ಪಶ್ಚಿಮ ರಾಜಸ್ಥಾನ, ಪಶ್ಚಿಮ ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ವಿದರ್ಭ ಭಾಗಗಳಲ್ಲಿ ತೀವ್ರ ಸ್ವರೂಪದ ಬಿಸಿಗಾಳಿ ಇರಲಿದ್ದು, ಇಲ್ಲಿ ʼಆರೆಂಜ್ ಅಲರ್ಟ್ʼ ಘೋಷಿಸಲಾಗಿದೆ. ಈ ಭಾಗಗಳಲ್ಲಿ ರಾತ್ರಿಯ ವೇಳೆಯೂ ಅತಿಯಾದ ಉಷ್ಣಾಂಶ ಇರಲಿದ್ದು, ‘ಬೆಚ್ಚನೆಯ ರಾತ್ರಿ’ಯ (Warm night) ಮುನ್ಸೂಚನೆ ನೀಡಲಾಗಿದೆ.
  • ಹೀಟ್‌ವೇವ್ ಎಚ್ಚರಿಕೆ: ಪಂಜಾಬ್, ಹರಿಯಾಣ, ಇಡೀ ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಮಹಾರಾಷ್ಟ್ರದ ವಿದರ್ಭ, ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡ ಪ್ರದೇಶಗಳಿಗೆ ಶಾಖದ ಅಲೆಯ ಎಚ್ಚರಿಕೆ ನೀಡಲಾಗಿದೆ.
  • ಉಷ್ಣ ಹಾಗೂ ಆರ್ದ್ರತೆ (Humid): ಒಡಿಶಾದಲ್ಲಿ ಮುಂದಿನ 3-4 ದಿನಗಳ ಕಾಲ ಅತಿಯಾದ ಸೆಕೆ ಹಾಗೂ ಹಬೆಯ ವಾತಾವರಣ ಇರಲಿದ್ದು, ಕರಾವಳಿ ಆಂಧ್ರಪ್ರದೇಶದಲ್ಲೂ ಮುಂದಿನ 3-4 ದಿನಗಳಲ್ಲಿ ಶಾಖದ ಅಲೆ ಸೃಷ್ಟಿಯಾಗುವ ಸಾಧ್ಯತೆಯಿದೆ.

ರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ (Delhi-NCR) ಈಗಾಗಲೇ ತಾಪಮಾನ ಗಗನಕ್ಕೇರಿದೆ. ನಿನ್ನೆ 42 ರಿಂದ 43 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಮುಂದಿನ ಒಂದು ವಾರ ದೆಹಲಿಯಲ್ಲಿ 42-44 ಡಿಗ್ರಿ ತಾಪಮಾನ ಇರಲಿದ್ದು, ಮುಂದಿನ 3 ದಿನಗಳಲ್ಲಿ ಇದು 45 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆಯಿದೆ. ಹೀಗಾಗಿ ದೆಹಲಿಗೆ ಮುಂದಿನ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: ಅಭಿವೃದ್ಧಿ ಹೆಸರಲ್ಲಿ ಮಹಾ ವಂಚನೆ? ʼಗ್ರೇಟ್ ನಿಕೋಬಾರ್ ಯೋಜನೆʼ ವಿವಾದದ ಸುತ್ತ

ಒಂದೆಡೆ ವಾಯುವ್ಯ ಭಾರತ ಸಂಪೂರ್ಣ ಒಣ ಹವೆಯಿಂದಾಗಿ ತತ್ತರಿಸುತ್ತಿದ್ದರೆ, ಇನ್ನೊಂದೆಡೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು IMD ತಿಳಿಸಿದೆ. ಕೇರಳ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದ್ದು, ಕೇರಳಕ್ಕೆ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಇನ್ನು ಕರ್ನಾಟಕದ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆ (Hailstorm) ಸಂಭವಿಸುವ ಸಾಧ್ಯತೆಯಿದೆ. ಇದರೊಂದಿಗೆ ಈಶಾನ್ಯ ಭಾರತದ ರಾಜ್ಯಗಳಲ್ಲೂ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...

ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR)...