ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಮದುವೆ: ಸಮಾರಂಭಕ್ಕೆ ದ್ರೌಪದಿ ಮುರ್ಮು ಅನುಮತಿ

Date:

Advertisements

ರಾಷ್ಟ್ರಪತಿ ಭವನ ಇದೇ ಮೊದಲ ಬಾರಿ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ. ರಾಷ್ಟ್ರಪತಿ ಭವನದ ಪಿಎಸ್‌ಓ ಅಧಿಕಾರಿಯಾಗಿರುವ ಸಿಆರ್‌ಪಿಎಫ್ ಅಸಿಸ್ಟಂಟ್ ಕಮಾಂಡೆಂಟ್ ಪೂನಂ ಗುಪ್ತಾ ತಾವು ನಿರ್ವಹಿಸುವ ಕಚೇರಿಯ ಸಭಾಂಗಣದಲ್ಲಿ ವಿವಾಹವಾಗುತ್ತಿದ್ದಾರೆ.

ಇಲ್ಲಿನ ಮದರ್ ಥೆರೆಸಾ ಕ್ರೌನ್ ಕಾಂಪ್ಲೆಕ್ಸ್‌ನಲ್ಲಿ ಫೆಬ್ರವರಿ 12ರಂದು ನಡೆಯುವ ಮದುವೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ವಿಶೇಷ ಅನುಮತಿ ನೀಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಅಸಿಸ್ಟೆಂಟ್ ಕಮಾಂಡೆಂಟ್ ಅವನೀಶ್ ಜೊತೆ ಪೂನಂ ಗುಪ್ತಾ ಮದುವೆ ನಿಗದಿ ಆಗಿದೆ. ಮದುವೆಯಲ್ಲಿ ಸಂಬಂಧಿಕರು, ಸ್ನೇಹಿತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಪ್ರಸ್ತುತ ರಾಷ್ಟ್ರಪತಿ ಭವನದಲ್ಲಿ ವೈಯಕ್ತಿಕ ಭದ್ರತಾ ಅಧಿಕಾರಿಯಾಗಿ (ಪಿಎಸ್‌ಒ) ಸೇವೆ ಸಲ್ಲಿಸುತ್ತಿರುವ ಪೂನಂ ಗುಪ್ತಾ 74ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಂಪೂರ್ಣ ಮಹಿಳಾ ತುಕಡಿಯನ್ನು ನಿರ್ವಹಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಅರಮನೆ ಸ್ವಾಧೀನ ಸುಗ್ರೀವಾಜ್ಞೆ: ರಾಜ ಪ್ರಭುತ್ವ – ಪಟ್ಟಭದ್ರರ ವಿರುದ್ಧ ಸೆಡ್ಡು ಹೊಡೆದ ಸರ್ಕಾರ

ಗಣಿತಶಾಸ್ತ್ರ ಮತ್ತು ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಪೂನಂ ಗ್ವಾಲಿಯರ್‌ನ ಜಿವಾಜಿ ವಿಶ್ವವಿದ್ಯಾಲಯದಿಂದ ಬಿ.ಇಡಿ ಪದವಿ ಪಡೆದುಕೊಂಡಿದ್ದಾರೆ. 2018ರ ಯುಪಿಎಸ್‌ಸಿ ಸಿಆರ್‌ಪಿಎಫ್‌ ಪರೀಕ್ಷೆಯಲ್ಲಿ 81ನೇ ರ‍್ಯಾಂಕ್‌ ವಿಜೇತರಾಗಿದ್ದರು. ಬಿಹಾರ ಸೇರಿ ಹಲವು ಕಡೆ ಪೂನಂ ಗುಪ್ತಾ ಕರ್ತವ್ಯ ನಿರ್ವಹಿಸಿದ್ದರು.

ಸಾಮಾಜಿಕ ಮಾಧ್ಯಮದಲ್ಲಿ ತಮ್ಮದೇ ಅಭಿಮಾನಿ ಬಳಗ ಹೊಂದಿರುವ ಪೂನಂ, ಆಗಾಗ ಮಹಿಳಾ ಸಬಲೀಕರಣದ ಸಂದೇಶಗಳನ್ನು ಪೋಸ್ಟ್‌ ಮಾಡುತ್ತಾ ಸಾರ್ವಜನಿಕರನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತಿದ್ದಾರೆ.

image 40 4
image 40 3
https://www.instagram.com/p/CsxCmzzPpUE/?utm_source=ig_embed&ig_rid=dc2c17a4-a862-41c5-8a85-3b0d0864792b
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X