ಪಶ್ಚಿಮ ಬಂಗಾಳ | 1.69 ಕೋಟಿ ಜಾತಿ ಪ್ರಮಾಣಪತ್ರಗಳ ಮರು ಪರಿಶೀಲನೆಗೆ BJP ಸರ್ಕಾರ ಆದೇಶ

Date:

ಪಶ್ಚಿಮ ಬಂಗಾಳದಲ್ಲಿ 2011ರಿಂದ ಈವರೆಗೆ ವಿತರಿಸಲಾಗಿರುವ ಎಲ್ಲ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ಜಾತಿ ಪ್ರಮಾಣಪತ್ರಗಳನ್ನು ಸಮಗ್ರವಾಗಿ ಮರುಪರಿಶೀಲನೆ ನಡೆಸಲು ಅಲ್ಲಿನ ಬಿಜೆಪಿ ಸರ್ಕಾರ ಆದೇಶಿಸಿದೆ.

- Advertisement -

ಕಳೆದ 14 ವರ್ಷಗಳ ಅವಧಿಯಲ್ಲಿ ವಿತರಿಸಲಾದ ಈ ದಾಖಲೆಗಳ ಸತ್ಯಾಸತ್ಯತೆ ಮತ್ತು ಸಿಂಧುತ್ವದ ಬಗ್ಗೆ ಹಲವು ಗಂಭೀರ ಪ್ರಶ್ನೆಗಳು ಹಾಗೂ ನಕಲಿ ದಾಖಲೆಗಳ ಸೃಷ್ಟಿಯ ಆರೋಪಗಳು ಕೇಳಿಬಂದಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಹಿಂದಿನ ಟಿಎಂಸಿ ಸರ್ಕಾರದ ಆಡಳಿತಾವಧಿಯಲ್ಲಿ ಜಾತಿ ಪ್ರಮಾಣಪತ್ರಗಳ ವಿತರಣೆಯಲ್ಲಿ ಬೃಹತ್ ಪ್ರಮಾಣದ ಅಕ್ರಮಗಳು ಮತ್ತು ಭ್ರಷ್ಟಾಚಾರ ನಡೆದಿವೆ ಎಂದೂ ಬಿಜೆಪಿ ಆರೋಪಿಸಿದೆ. ಇದೇ ವಾದದ ಮೇಲೆ ದಲಿತರು, ಹಿಂದುಳಿದವರನ್ನು ಸರ್ಕಾರಿ ಸೌಲಭ್ಯಗಳಿಂದ ವಂಚಿಸಲು ಮುಂದಾಗಿದೆ. ಎಸ್‌ಐಆರ್‌ನ ಮುಂದುವರಿಕೆಯಾಗಿ ಜನರ ಹಕ್ಕುಗಳನ್ನು ಕಸಿದುಕೊಳ್ಳುವ ಮತ್ತೊಂದು ಕುಕೃತ್ಯ ಎಸಗುತ್ತಿದೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸರ್ಕಾರದ ಅಂಕಿ-ಅಂಶಗಳ ಪ್ರಕಾರ, ಈ ನಿರ್ದಿಷ್ಟ ಅವಧಿಯಲ್ಲಿ ರಾಜ್ಯಾದ್ಯಂತ ಸುಮಾರು 1.69 ಕೋಟಿ ಜಾತಿ ಪ್ರಮಾಣಪತ್ರಗಳನ್ನು ವಿತರಿಸಲಾಗಿದೆ. ಇವುಗಳಲ್ಲಿ ಹೆಚ್ಚಿನ ಪ್ರಮಾಣಪತ್ರಗಳನ್ನು ಸರ್ಕಾರದ ಜನಸಂಪರ್ಕ ಕಾರ್ಯಕ್ರಮವಾದ ‘ದುಆರೆ ಸರ್ಕಾರ್’ (ಬಾಗಿಲಿಗೆ ಸರ್ಕಾರ) ಶಿಬಿರಗಳ ಮೂಲಕ ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗಿತ್ತು.

ಸರ್ಕಾರದ ಕ್ರಮದ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಬುಡಕಟ್ಟು ಅಭಿವೃದ್ಧಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕ್ಷುದಿರಾಮ್ ತುಡು. “ಹಿಂದಿನ ಸರ್ಕಾರದ ಅವಧಿಯಲ್ಲಿ ಗಣನೀಯ ಸಂಖ್ಯೆಯಲ್ಲಿ ನಕಲಿ ಮತ್ತು ನಿಯಮಬಾಹಿರ ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಪ್ರಮಾಣಪತ್ರಗಳನ್ನು ಸೃಷ್ಟಿಸಲಾಗಿದೆ. ಅರ್ಹರಲ್ಲದ ಅನೇಕ ವ್ಯಕ್ತಿಗಳು ಈ ನಕಲಿ ಪ್ರಮಾಣಪತ್ರಗಳನ್ನು ಬಳಸಿಕೊಂಡು ಸರ್ಕಾರಿ ಸೌಲಭ್ಯಗಳು, ಸಬ್ಸಿಡಿಗಳು ಹಾಗೂ ಮೀಸಲಾತಿಗಳ ಪ್ರಯೋಜನಗಳನ್ನು ಅಕ್ರಮವಾಗಿ ಪಡೆದುಕೊಂಡಿದ್ದಾರೆ. ಅಲ್ಲದೆ, ಇಂತಹ ನಕಲಿ ಪ್ರಮಾಣಪತ್ರಗಳನ್ನು ಪರಿಶೀಲಿಸದೆ ಬೇಜವಾಬ್ದಾರಿಯಿಂದ ವಿತರಿಸಿದ ಮತ್ತು ಅದಕ್ಕೆ ಸಮ್ಮತಿ ಸೂಚಿಸಿದ ಉನ್ನತ ಅಧಿಕಾರಿಗಳ ವಿರುದ್ಧವೂ ಸರ್ಕಾರ ಮುಂಬರುವ ದಿನಗಳಲ್ಲಿ ಅತ್ಯಂತ ಕಠಿಣ ಕಾನೂನು ಕ್ರಮ ಜರುಗಿಸಲಿದೆ” ಎಂದು ಹೇಳಿದ್ದಾರೆ.

ಸರ್ಕಾರದ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ಗೊಂದಲ ಉಂಟಾಗಿದೆ. ಗೊಂದಲದ ನಡುವೆಯೇ, ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಎಲ್ಲ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಮರುಪರಿಶೀಲನಾ ಪ್ರಕ್ರಿಯೆಯನ್ನು ಜಿಲ್ಲಾ ಮಟ್ಟದಲ್ಲಿ ಆರಂಭಿಸುವಂತೆ ನಿರ್ದೇಶನ ನೀಡಿದೆ.

ಈ ಲೇಖನ ಓದಿದ್ದೀರಾ?: ಕನ್ನಡಿಗರೇ ಎಚ್ಚರ: ಎಸ್‌ಐಆರ್‌ – ಮತಪಟ್ಟಿ ಪರಿಶೀಲನೆಯಲ್ಲ, ಪೌರತ್ವ ಪರೀಕ್ಷೆ!

“ಸಬ್-ಡಿವಿಜನಲ್ ಅಧಿಕಾರಿಗಳು (SDO) ಮತ್ತು ಜಿಲ್ಲಾ ಮಟ್ಟದ ಉನ್ನತ ಅಧಿಕಾರಿಗಳ ತಂಡವು ಪ್ರತಿಯೊಂದು ಪ್ರಮಾಣಪತ್ರದ ಮೂಲ ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕು. ತನಿಖೆಯ ವೇಳೆ ಯಾವುದೇ ಪ್ರಮಾಣಪತ್ರವನ್ನು ಸುಳ್ಳು ಮಾಹಿತಿ, ನಕಲಿ ದಾಖಲೆ ಅಥವಾ ಕಾನೂನುಬಾಹಿರ ಆಡಳಿತಾತ್ಮಕ ಪ್ರಕ್ರಿಯೆಗಳ ಮೂಲಕ ಪಡೆಯಲಾಗಿದೆ ಎಂಬುದು ಸಾಬೀತಾದರೆ, ಅಂತಹ ಎಲ್ಲ ಪ್ರಮಾಣಪತ್ರಗಳನ್ನು ಕಾನೂನಿನ ಅಡಿಯಲ್ಲಿ ತಕ್ಷಣವೇ ರದ್ದುಗೊಳಿಸಬೇಕು” ಎಂದು ಸರ್ಕಾರ ತಿಳಿಸಿದೆ.

ವಿಶೇಷವಾಗಿ, ಇತ್ತೀಚೆಗೆ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಯಾವ ಮತದಾರರನ್ನು ಮತಪಟ್ಟಿಯಿಂದ ಹೊರಹಾಕಲಾಗಿದೆಯೋ, ಅಂತಹವರನ್ನು ಈ ಪರಿಶೀಲನೆಯು ಗುರಿಯಾಗಿಸಿಕೊಂಡಿದೆ. ಮತದಾರರ ಪಟ್ಟಿಯಿಂದ ಹೊರಬಿದ್ದಿರುವ ವ್ಯಕ್ತಿಗಳ ಜಾತಿ ಪ್ರಮಾಣಪತ್ರಗಳು ಸೇರಿದಂತೆ ಅವರ ಕುಟುಂಬದ ಆಶ್ರಿತರು ಹೊಂದಿರುವ ಎಲ್ಲ ಸಾಮಾಜಿಕ ದಾಖಲೆಗಳನ್ನು ಅಧಿಕಾರಿಗಳು ಕೂಲಂಕಷವಾಗಿ ಮರುಪರಿಶೀಲಿಸಲಿದ್ದು, ಅಕ್ರಮ ಪತ್ತೆಯಾದರೆ ಅವುಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...