ಮುಸ್ಲಿಮರಿಗೆ ಒಬಿಸಿ ಮೀಸಲಾತಿ ರದ್ದು, ಮದರಸಾಗಳಲ್ಲಿ ವಂದೇಮಾತರಂ ಕಡ್ಡಾಯ: ಸುವೇಂದು ಸರ್ಕಾರದ ಆದೇಶ

Date:

ಈ ಹಿಂದೆ ವಿಪಕ್ಷ ನಾಯಕರಾಗಿದ್ದ ಸಂದರ್ಭದಲ್ಲಿ ನಿರಂತರವಾಗಿ ಮುಸ್ಲಿಂ ದ್ವೇಷದ ಹೇಳಿಕೆಗಳನ್ನು ನೀಡುತ್ತಾ ಬಂದಿರುವ ಸುವೇಂದು ಅಧಿಕಾರಿ ಈಗ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ. ಅಧಿಕಾರಕ್ಕೆ ಏರುತ್ತಿದ್ದಂತೆ ಒಂದಾದ ಮೇಲೆ ಒಂದರಂತೆ ಅಲ್ಪಸಂಖ್ಯಾತ ಅದರಲ್ಲೂ ನೇರವಾಗಿ ಮುಸ್ಲಿಂ ವಿರೋಧಿ ಕ್ರಮಗಳನ್ನು, ಆದೇಶಗಳನ್ನು ಹೊರಡಿಸಲು ಶುರು ಮಾಡಿದ್ದಾರೆ. ಮುಸ್ಲಿಮರಿಗೆ ಒಬಿಸಿ ಮೀಸಲಾತಿ ರದ್ದು ಮಾಡಿದ್ದು, ಮದರಸಾಗಳಲ್ಲಿ ವಂದೇಮಾತರಂ ಹಾಡುವುದು ಕಡ್ಡಾಯಗೊಳಿಸಿದ್ದಾರೆ.

- Advertisement -

ಪಶ್ಚಿಮ ಬಂಗಾಳದ ಸಿಎಂ ಸುವೇಂದು ಅಧಿಕಾರಿ ನೇತೃತ್ವದ ನೂತನ ಸರ್ಕಾರವು ಹಿಂದಿನ ಮಮತಾ ಬ್ಯಾನರ್ಜಿ ಸರ್ಕಾರದ ಅವಧಿಯಲ್ಲಿ ಸೇರಿಸಲಾಗಿದ್ದ ಮುಸ್ಲಿಂ ಸಮುದಾಯಗಳ ಒಬಿಸಿ ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಇದರಿಂದಾಗಿ ರಾಜ್ಯದಲ್ಲಿದ್ದ ಒಟ್ಟು ಒಬಿಸಿ ಮೀಸಲಾತಿ ಪ್ರಮಾಣವು ಶೇಕಡ 17 ರಿಂದ ಶೇಕಡಾ 7ಕ್ಕೆ ಕುಸಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ʼವಂದೇ ಮಾತರಂ’ವಿವಾದ; ಪರಿವಾರ- ಪ್ರಧಾನಿ ಪೋಣಿಸಿದ ಸುಳ್ಳುಗಳ ಬೊಂತೆ

ಮುಸ್ಲಿಮರಿಗೆ ಒಬಿಸಿ ಮೀಸಲಾತಿ ತೆಗೆದುಹಾಕಬೇಕೆಂದು ಕೋಲ್ಕತ್ತಾ ಹೈಕೋರ್ಟ್‌ನಲ್ಲಿ ಅಮಲ್ ಚಂದ್ರ ದಾಸ್, ನೀಲಮಾಧಬ್ ಕರ್ಮಾಕರ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳನ್ನು ವಿಚಾರಣೆ ನಡೆಸಿದ ಹೈಕೋರ್ಟ್ 2024ರ ಮೇ 22ರಂದು ಮುಸ್ಲಿಂ ಸಮುದಾಯಗಳಿಗೆ ನೀಡಲಾಗಿದ್ದ ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸಿ ತೀರ್ಪು ನೀಡಿತ್ತು.

2010ರ ನಂತರ ಮಮತಾ ಬ್ಯಾನರ್ಜಿ ಸರ್ಕಾರವು ಸೂಕ್ತ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸದೇ ಕೇವಲ ಧರ್ಮದ ಆಧಾರದ ಮೇಲೆ 77 ಸಮುದಾಯಗಳನ್ನು ಒಬಿಸಿ ಮೀಸಲಾತಿ ನೀಡಿರುವುದು ಸರಿಯಲ್ಲ ಎಂದು ಹೇಳಿತ್ತು. ಈ ತೀರ್ಪನ್ನು ಪ್ರಶ್ನಿಸಿ ಟಿಎಂಸಿ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಆದರೆ ಅಧಿಕಾರ ಪಡೆದ ಹತ್ತು ದಿನದಲ್ಲೇ ಸುವೇಂದು ಅಧಿಕಾರಿ ಸರ್ಕಾರವು ಆ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಿಂದ ಅಧಿಕೃತವಾಗಿ ಹಿಂಪಡೆದಿದೆ. ಹಾಗೆಯೇ ಈ ಹಿಂದಿನ ಹೈಕೋರ್ಟ್ ತೀರ್ಪು ಯಥಾವತ್ತಾಗಿ ಜಾರಿಗೊಳಿಸಿದೆ. 2010ರ ನಂತರ ವಿತರಿಸಲಾದ ಲಕ್ಷಾಂತರ ಮುಸ್ಲಿಂ ಒಬಿಸಿ ಪ್ರಮಾಣಪತ್ರಗಳು ಈಗ ರದ್ದಾಗಿವೆ. ಈ ಪರಿಷ್ಕೃತ ನೀತಿಯು ರಾಜ್ಯದ ಸರ್ಕಾರಿ ಉದ್ಯೋಗ ನೇಮಕಾತಿ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳ ಪ್ರವೇಶ ಪ್ರಕ್ರಿಯೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬಂದಿದೆ.

ಮದರಸಾಗಳಲ್ಲಿ ವಂದೇಮಾತರಂ ಹಾಡುವುದು ಕಡ್ಡಾಯ

ಮುಸ್ಲಿಮರಿಗೆ ಒಬಿಸಿ ಮೀಸಲಾತಿಯನ್ನು ಹೈಕೋರ್ಟ್ ತೀರ್ಪು ಜಾರಿ ಎಂಬಂತೆ ಬಿಂಬಿಸಿದರೂ, ಮದರಸಾಗಳಲ್ಲಿ ವಿವಾದಿತ ವಂದೇಮಾತರಂ ಹಾಡುವುದು ಕಡ್ಡಾಯಗೊಳಿಸುವುದರ ವಿರುದ್ಧ ಸದ್ಯ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಂಕಿಮ್ ಚಂದ್ರ ಚಟರ್ಜಿ ಅವರು ಬರೆದ ‘ವಂದೇ ಮಾತರಂ’ನ ಕೆಲವು ಚರಣಗಳು ದುರ್ಗಾ ಮತ್ತು ಲಕ್ಷ್ಮಿ ದೇವತೆಯರ ಗುಣಗಾನವನ್ನು ಹೊಂದಿದೆ.

ಇದನ್ನು ಓದಿದ್ದೀರಾ? ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ ಹಾಡುವುದು ಕಡ್ಡಾಯ: ಕೇಂದ್ರ ಆದೇಶ

ಆದರೆ ಭಾರತ ಬಹುಸಂಸ್ಕೃತಿಯ ದೇಶ. ಒಂದೇ ಧರ್ಮದ ದೇವತೆಗಳ ಹೆಸರಿರುವ ಹಾಡುಗಳನ್ನು ಸರ್ಕಾರಿ ಕಚೇರಿ, ಶಾಲೆಗಳಲ್ಲಿ ಹಾಡುವುದು ಎಲ್ಲ ಧರ್ಮದವರಿಗೂ ಇದು ಒಪ್ಪಿಗೆಯಾಗುವುದಿಲ್ಲ. ಈ ಕಾರಣದಿಂದಾಗಿ ವಂದೇ ಮಾತರಂ ತೀವ್ರ ವಿವಾದದಲ್ಲೇ ಸಿಲುಕಿದೆ. 1937ರಲ್ಲೇ ಕಾಂಗ್ರೆಸ್ ಧಾರ್ಮಿಕ ಸಾಲುಗಳನ್ನು ಕೈಬಿಟ್ಟು, ಕೇವಲ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ನಿರ್ಧರಿಸಿತ್ತು.

ಆದರೆ ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಸರ್ಕಾರಿ ಕಾರ್ಯಕ್ರಮಗಳಲ್ಲಿ, ಶಾಲೆಗಳಲ್ಲಿ ಗೀತೆಯ ಎಲ್ಲ 6 ಚರಣಗಳನ್ನು ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈಗ ಅಲ್ಪಸಂಖ್ಯಾತ ವಿದ್ಯಾ ಸಂಸ್ಥೆಯಾದ ಮದರಸಾದಲ್ಲಿ ‘ವಂದೇ ಮಾತರಂ’ ಗೀತೆಯನ್ನು ಹಾಡುವುದನ್ನು ಕಡ್ಡಾಯಗೊಳಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ. ಈ ಮೂಲಕ ಅಲ್ಪಸಂಖ್ಯಾತ ವಿರೋಧಿ ಕ್ರಮಗಳನ್ನು ಒಂದೊಂದಾಗಿಯೇ ಶುರು ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...