ಮಹಿಳಾ ರೋಗಿಯೊಬ್ಬರಿಗೆ ನಿದ್ದೆ ಬರಿಸುವ ಇಂಜೆಕ್ಷನ್ ನೀಡಿ ವೈದ್ಯರೊಬ್ಬರು ಅತ್ಯಾಚಾರವೆಸಗಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, ಪೊಲೀಸರು ವೈದ್ಯನೊಬ್ಬನನ್ನು ಮಂಗಳವಾರ ಬಂಧಿಸಿದ್ದಾರೆ. ಸಂತ್ರಸ್ತೆ ಮತ್ತು ಆಕೆಯ ಪತಿ ನೀಡಿದ ದೂರಿನ ಆಧಾರದಲ್ಲಿ ಬಂಧನವಾಗಿದೆ.
ದೂರಿನ ಪ್ರಕಾರ, ಮಹಿಳೆ ತನ್ನ ಪತಿ ಇಲ್ಲದ ಸಮಯದಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ವೈದ್ಯರನ್ನು ಭೇಟಿ ಮಾಡಿದ್ದಳು. ವೈದ್ಯರು ಈ ವೇಳೆ ಟ್ರ್ಯಾಂಕ್ವಿಲೈಸರ್ ನೀಡಿ, ಪ್ರಜ್ಞಾಹೀನಳಾಗುವಂತೆ ಮಾಡಿ ನಂತರ ಅತ್ಯಾಚಾರ ಮಾಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ಇದನ್ನು ಓದಿದ್ದೀರಾ? ಉತ್ತರಪ್ರದೇಶ: ದಲಿತ ಮಹಿಳೆಯ ಮೇಲೆ ಅತ್ಯಾಚಾರ
ಬಳಿಕ ವೈದ್ಯ ಸಸಂತ್ರಸ್ತೆಯ ಚಿತ್ರಗಳನ್ನು ತೆಗೆದು ಬ್ಲ್ಯಾಕ್‌ಮೇಲ್ ಮಾಡಿದ್ದು ತಾನು ಹೇಳಿದಂತೆ ಕೇಳದಿದ್ದರೆ ಚಿತ್ರಗಳನ್ನು ಆನ್‌ಲೈನ್‌ನಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಸಂತ್ರಸ್ತೆಯ ಮೇಲೆ ಪದೇ ಪದೇ ದೌರ್ಜನ್ಯ ಎಸಗಿರುವ ವೈದ್ಯ ಸುಮಾರು ನಾಲ್ಕು ಲಕ್ಷ ರೂಪಾಯಿ ಸುಲಿಗೆ ಮಾಡಿದ್ದಾನೆ ಎಂದು ಸಂತ್ರಸ್ತೆ ದೂರಿದ್ದಾರೆ.
ಆರಂಭದಲ್ಲಿ ಆತಂಕಕ್ಕೆ ಒಳಗಾಗಿದ್ದ ಮತ್ತು ತನ್ನ ಪತಿ ಊರಿನಲ್ಲಿ ಇಲ್ಲದ ಕಾರಣ ಆತಂಖಕ್ಕೆ ಒಳಗಾಗಿದ್ದ ಮಹಿಳೆ ಈ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ. ಆದರೆ ಪತಿ ಊರಿಗೆ ಹಿಂದಿರುಗಿದ ಬಳಿಕ ತನ್ನ ಪತಿಗೆ ಮಾಹಿತಿ ನೀಡಿ ಜೊತೆಯಾಗಿ ಬಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದಲ್ಲಿ ವೈದ್ಯನ ಬಂಧನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ವೈದ್ಯನನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆರೋಪಿಯನ್ನು ಐದು ದಿನ ಪೊಲೀಸ್ ವಶಕ್ಕೆ ನೀಡಿದ್ದಾರೆ.
