ಪಶ್ಚಿಮ ಬಂಗಾಳ ಚುನಾವಣೆ: ಮತದಾನಕ್ಕೆ ಕೇವಲ ನಾಲ್ಕು ದಿನ ಬಾಕಿ ಇರುವಾಗ 7 ಲಕ್ಷ ಹೊಸ ಮತದಾರರ ಸೇರ್ಪಡೆ

Date:

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದೆ. ಮೊದಲ ಹಂತದ ಮತದಾನಕ್ಕೆ ಕೇವಲ ನಾಲ್ಕು ದಿನಗಳಷ್ಟೇ ಬಾಕಿ ಇರುವಾಗ ಆಯೋಗವು ಸುಮಾರು 7 ಲಕ್ಷ ಹೊಸ ಮತದಾರರನ್ನು ಪಟ್ಟಿಗೆ ಸೇರಿಸಿದೆ. ಆದರೆ ಈ ಹೆಚ್ಚುವರಿ ಮತದಾರರ ವಯಸ್ಸು ಅಥವಾ ಲಿಂಗ ವಿಂಗಡಣೆಯ ವಿವರವಾದ ಮಾಹಿತಿಯನ್ನು ಆಯೋಗ ಬಹಿರಂಗಪಡಿಸಿಲ್ಲ.

- Advertisement -

ಈ ಹೊಸ ಮತದಾರರ ಪೈಕಿ 3.22 ಲಕ್ಷ ಜನರು ಮೊದಲ ಹಂತದಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದರೆ, ಉಳಿದ 3.88 ಲಕ್ಷ ಜನರು ಎರಡನೇ ಹಂತದ ಮತದಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಸದ್ಯಕ್ಕೆ ಒಟ್ಟು ಅಂಕಿಅಂಶಗಳನ್ನು ಮಾತ್ರ ಮಾನದಂಡಗಳಿಗೆ ಅನುಗುಣವಾಗಿ ಬಿಡುಗಡೆ ಮಾಡಲಾಗಿದ್ದು, ವಿವರವಾದ ಮಾಹಿತಿಯನ್ನು ಅಗತ್ಯ ಬಿದ್ದಾಗ ನಂತರ ಹಂಚಿಕೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.

WhatsApp Image 2026 04 19 at 3.46.44 PM

ಪಟ್ಟಿಯಲ್ಲಿ ಹೆಸರು ಸೇರಿಸಲು ಬಂದಿದ್ದ ಫಾರ್ಮ್‌-6 ಅರ್ಜಿಗಳ ಸಂಖ್ಯೆ ಹಾಗೂ ಅದರಲ್ಲಿ ತಿರಸ್ಕೃತಗೊಂಡ ಅರ್ಜಿಗಳ ವಿವರವನ್ನೂ ಸದ್ಯಕ್ಕೆ ಗೌಪ್ಯವಾಗಿಡಲಾಗಿದೆ. ಈ ಹೊಸ ಸೇರ್ಪಡೆಯೊಂದಿಗೆ ಪಶ್ಚಿಮ ಬಂಗಾಳದ ಒಟ್ಟು ಮತದಾರರ ಸಂಖ್ಯೆ 6,82,51,008ಕ್ಕೆ ಏರಿಕೆಯಾಗಿದ್ದು, ನ್ಯಾಯಮಂಡಳಿಯ ಇತರ ಆದೇಶಗಳನ್ನು ಅನುಸರಿಸಿ ಈ ಸಂಖ್ಯೆಯಲ್ಲಿ ಇನ್ನೂ ಸ್ವಲ್ಪ ಹೆಚ್ಚಳವಾಗುವ ಸಾಧ್ಯತೆ ಇದೆ.

ಮತ್ತೊಂದೆಡೆ, ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಅಗರ್ವಾಲ್, ಶನಿವಾರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದ್ದಾರೆ. ಏಪ್ರಿಲ್ 23ರಂದು ನಡೆಯಲಿರುವ ಮೊದಲ ಹಂತದ ಮತದಾನದ ವೇಳೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಯಾವುದೇ ಲೋಪವಾದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಅವರನ್ನು ಅಮಾನತುಗೊಳಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಈ ಹಿಂದೆ ನಡೆದ ಚುನಾವಣೆಗಳಲ್ಲಿನ ಹಿಂಸಾಚಾರದಲ್ಲಿ ಭಾಗಿಯಾದ ಹಳೆಯ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ ಅಗರ್ವಾಲ್, ಅಂತಹ ವ್ಯಕ್ತಿಗಳನ್ನು ತಕ್ಷಣವೇ ಗುರುತಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ SIR | 27 ಲಕ್ಷ ಮತದಾರರು ಚುನಾವಣೆಯಿಂದ ಹೊರಕ್ಕೆ: ಶಿಫಾರಸ್ಸಿನ ಸುತ್ತ ಚರ್ಚೆ

ಏ.23ರ ಮೊದಲ ಹಂತದ ಮತದಾನವು ಒಟ್ಟು 152 ವಿಧಾನಸಭಾ ಕ್ಷೇತ್ರಗಳಲ್ಲಿ ಜರುಗಲಿದ್ದು, ರಾಜ್ಯದ ಬಹುತೇಕ ಪ್ರಮುಖ ಜಿಲ್ಲೆಗಳನ್ನು ಇದು ಒಳಗೊಳ್ಳಲಿದೆ. ಕೂಚ್‌ಬೆಹಾರ್, ಅಲಿಪುರ್ದೂರ್, ಜಲಪೈಗುರಿ, ಡಾರ್ಜಿಲಿಂಗ್, ಉತ್ತರ ಮತ್ತು ದಕ್ಷಿಣ ದಿನಾಜ್‌ಪುರ, ಮಾಲ್ಡಾ, ಮುರ್ಷಿದಾಬಾದ್, ಪುರುಲಿಯಾ, ಬಂಕುರಾ, ಜಾರ್ಗ್ರಾಮ್, ಪಶ್ಚಿಮ ಮೇದಿನಿಪುರ, ಪಶ್ಚಿಮ ಬರ್ಧಮಾನ್ ಹಾಗೂ ಬಿರ್ಭಮ್ ಜಿಲ್ಲೆಗಳ ಜೊತೆಗೆ ನಾಡಿಯಾ ಜಿಲ್ಲೆಯ ಕೆಲವು ಭಾಗಗಳಲ್ಲಿ ಮತದಾನ ನಡೆಯಲಿದೆ.

ಆಯೋಗವು ನೀಡಿರುವ ಈ ಭದ್ರತಾ ಸೂಚನೆಗಳು ಮತ್ತು ಹೊಸ ಮತದಾರರ ಸೇರ್ಪಡೆಯು ಮುಂಬರುವ ಚುನಾವಣಾ ಫಲಿತಾಂಶದ ಮೇಲೆ ಯಾವ ರೀತಿಯ ಪ್ರಭಾವ ಬೀರಲಿದೆ ಎಂಬುದು ಸದ್ಯ ಭಾರೀ ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ ಸಂಸದರ ಧ್ವನಿ ಕ್ಷೀಣ!

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು...

ಏನಿದು ʼಮಶೀನ್‌ ರೀಡಬಲ್‌ʼ ಮತದಾರರ ಪಟ್ಟಿ? ಅದನ್ನು ಹಂಚಿಕೊಳ್ಳದೆ ಯಾಕೆ ಪ್ರತಿಪಕ್ಷಗಳ ವಂಚಿಸಿತ್ತು ಮೋಶಾ ಸರ್ಕಾರ?

17 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಚುನಾವಣಾ...

ರಾಜ್ಯದ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ತುರ್ತು ಮಧ್ಯಪ್ರವೇಶಿಸಲು ಪ್ರಧಾನಿಗೆ ಸಿಎಂ ಡಿ ಕೆ ಶಿವಕುಮಾರ್ ಮನವಿ

ಸದ್ಯದಲ್ಲೇ ಕಬ್ಬು ಅರೆಯುವ ಋತು ಆರಂಭವಾಗಲಿದ್ದು, ಕರ್ನಾಟಕದ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ...