ಪಶ್ಚಿಮ ಬಂಗಾಳ | ದುರ್ಗಾ ಪೂಜೆ ನಡುವೆಯೂ ಆಮರಣಾಂತ ಉಪವಾಸ ಮುಂದುವರಿಸಿದ ವೈದ್ಯರು

Date:

ಆರ್‌ಜಿ ಕರ್ ಆಸ್ಪತ್ರೆಯಲ್ಲಿ ತಮ್ಮ ಸಹೋದ್ಯೋಗಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯವನ್ನು ಒತ್ತಾಯಿಸಿ ಕಿರಿಯ ವೈದ್ಯರು ಆಮರಣಾಂತ ಉಪವಾಸವನ್ನು ನಡೆಸುತ್ತಿದ್ದಾರೆ. ಪಶ್ಚಿಮ ಬಂಗಾಳದಾದ್ಯಂತ ದುರ್ಗಾಪೂಜೆ ಹಬ್ಬದ ನಡುವೆಯೂ ಗುರುವಾರ ಐದನೇ ದಿನವೂ ಆಮರಣಾಂತ ಉಪವಾಸವನ್ನು ವೈದ್ಯರು ಮುಂದುವರೆಸಿದರು.

- Advertisement -

ವೈದ್ಯೆ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕೆ ಒತ್ತಾಯಿಸಿ ಮತ್ತು ತಮ್ಮ ಕೆಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಹಲವು ದಿನಗಳಿಂದ ವೈದ್ಯರು ಪ್ರತಿಭಟನಾ ಧರಣಿಯನ್ನು ನಡೆಸುತ್ತಿದ್ದಾರೆ. ಶನಿವಾರ ಸಂಜೆಯಿಂದ ಕೋಲ್ಕತ್ತಾದ ಹೃದಯಭಾಗದಲ್ಲಿರುವ ಧರ್ಮತಾಲಾದ ಡೋರಿನಾ ಕ್ರಾಸಿಂಗ್‌ನಲ್ಲಿ ಆಮರಣಾಂತ ಉಪವಾಸವನ್ನು ಪ್ರಾರಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಈ ನಡುವೆ ರಾಜ್ಯ ಸರ್ಕಾರ ಬುಧವಾರ ಸಂಜೆ ಪ್ರತಿಭಟನಾಕಾರರ ಜೊತೆ ಸಭೆ ನಡೆಸಿದ್ದು, ಮಾತುಕತೆ ವಿಫಲವಾಗಿದೆ. ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ. “ರಾಜ್ಯವು ಮೌಖಿಕ ಭರವಸೆ ನೀಡಿದೆಯೇ ಹೊರತು ಲಿಖಿತವಾಗಿ ಭರವಸೆಯನ್ನು ನೀಡಿಲ್ಲ” ಎಂದು ಪ್ರತಿಭಟನಾ ನಿರತ ವೈದ್ಯರು ಆರೋಪಿಸಿದ್ದರು.

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

“ನಮ್ಮ ಸ್ನೇಹಿತರು ನಾಲ್ಕು ದಿನಗಳಿಂದ ಆಹಾರವಿಲ್ಲದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ದುರ್ಗಾ ಪೂಜೆ ನಂತರ ಅಕ್ಟೋಬರ್ ಮೂರನೇ ವಾರದಲ್ಲಿ ನಮ್ಮ ಬೇಡಿಕೆಗಳ ಬಗ್ಗೆ ಗಮನಹರಿಸುವುದಾಗಿ ಸರ್ಕಾರ ಹೇಳಿದೆ. ಸರ್ಕಾರದ ಅಂತಹ ಅಸೂಕ್ಷ್ಮತೆಯನ್ನು ನಾವು ನಿರೀಕ್ಷಿಸಿರಲಿಲ್ಲ” ಎಂದು ಪಶ್ಚಿಮ ಬಂಗಾಳದ ಕಿರಿಯ ವೈದ್ಯರ ದೇಬಾಶಿಶ್ ಹಲ್ಡರ್ ಹೇಳಿದ್ದಾರೆ.

ಇನ್ನು ಬುಧವಾರ ದುರ್ಗಾಪೂಜೆ ನಡೆಯುತ್ತಿದ್ದ ಕೆಲವು ಪ್ರದೇಶಗಳಲ್ಲಿ ವೈದ್ಯರು ಕರಪತ್ರಗಳನ್ನು ಹಂಚಿದ್ದು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನು ಪ್ರತಿಭಟನಾನಿರತ ಕಿರಿಯ ವೈದ್ಯರು ಟೀಕಿಸಿದ್ದಾರೆ.

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ ವೈದ್ಯರ ಮುಷ್ಕರ ಅಂತ್ಯ; ಐದರಲ್ಲಿ ಮೂರು ಬೇಡಿಕೆ ಈಡೇರಿಸಲು ಸಿಎಂ ಸಮ್ಮತಿ

ಭ್ರಷ್ಟಾಚಾರದ ವಿರುದ್ಧ ಕ್ರಮಕೈಗೊಳ್ಳಲು ಅಸಮರ್ಥರಾದ ಆರೋಗ್ಯ ಕಾರ್ಯದರ್ಶಿ ಎನ್.ಎಸ್.ನಿಗಂ ಅವರನ್ನು ತಕ್ಷಣವೇ ವಜಾಗೊಳಿಸಬೇಕು ಎಂಬುದು ಕಿರಿಯ ವೈದ್ಯರ ಆಗ್ರಹವಾಗಿದೆ.

ಜೊತೆಗೆ ರಾಜ್ಯದ ಎಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಹಾಸಿಗೆ ಖಾಲಿ ಇರುವ ಕಡೆಯಲ್ಲೂ ಸಿಸಿಟಿವಿ ಅನುಷ್ಠಾನ, ಆನ್‌-ಕಾಲ್ ರೂಂ ಮತ್ತು ವಾಶ್‌ರೂಮ್‌ಗಳಲ್ಲಿಯೂ ಮಹಿಳೆಯರಿಗೆ ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ಕಿರಿಯ ವೈದ್ಯರ ಆಗ್ರಹವಾಗಿದೆ. ಹಾಗೆಯೇ ಉದ್ಯೋಗ ಸ್ಥಳದಲ್ಲಿ ಕಾರ್ಯಪಡೆಗಳ ರಚನೆಯೂ ಕೂಡಾ ಅವರ ಬೇಡಿಕೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಲ್ವಾರ್ ಎಳೆಯುವುದು, ಎದೆ ಒತ್ತುವುದು ಅತ್ಯಾಚಾರ ಯತ್ನವಲ್ಲ: ಪಾಟ್ನಾ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಆಕ್ಷೇಪ

ಮಹಿಳೆಯ ಸಲ್ವಾರ್ ಎಳೆಯುವುದು, ಎದೆ ಒತ್ತುವುದು ಅತ್ಯಾಚಾರ ಪ್ರಯತ್ನವಲ್ಲ ಎಂದು ಪಾಟ್ನಾ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಭಾತರ ಮತ್ತು ನೇಪಾಳದಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತವು ಇಂದು ಸಂಜೆ ತಡವಾಗಿ ಉತ್ತರ...

ಮತ ಕಳವು ದೇಶದ್ರೋಹದ ಕೃತ್ಯ: ಎಕ್ಸ್‌ಪ್ರೆಸ್ ವರದಿ ಬೆನ್ನಲ್ಲೇ ಇಸಿ, ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಚುನಾವಣಾ ಆಯೋಗದ (ಇಸಿಐ) ಆಂತರಿಕ ನಿರ್ಧಾರಗಳ ಕುರಿತು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’...

ಸಿಇಸಿ ಗ್ಯಾನೇಶ್ ಕುಮಾರ್ ‘ಏಕವ್ಯಕ್ತಿ ಸರ್ವಾಧಿಕಾರಿ’: ಮುಖ್ಯ ಚುನಾವಣೆ ಆಯುಕ್ತರ ವಜಾಕ್ಕೆ ವಿಪಕ್ಷಗಳ ಆಗ್ರಹ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಭಾರತೀಯ...