ಪಶ್ಚಿಮ ಬಂಗಾಳ: ಭೀಕರ ಬೆಂಕಿ ಅವಘಡ; ಸಾವಿನ ಸಂಖ್ಯೆ 11ಕ್ಕೆ ಏರಿಕೆ

Date:

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ನಜೀರಾಬಾದ್‌ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

- Advertisement -

ನಜೀರಾಬಾದ್‌ನ ಗೋದಾಮಿನಲ್ಲಿ ಮಂಗಳವಾರ ರಾತ್ರಿ ಬೆಂಕಿ ಹೊತ್ತಿಕೊಂಡು ದುರ್ಘಟನೆ ಸಂಭವಿಸಿದೆ. ಸುಟ್ಟುಹೋದ ಗೋದಾಮಿನಿಂದ ಈವರೆಗೆ 11 ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ, ಮೂವರು ಕಾಣೆಯಾಗಿದ್ದು, ಅವರ ಪತ್ತೆಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಮೃತದೇಹಗಳು ಬಹುತೇಕ ಸುಟ್ಟುಹೋಗಿದ್ದು, ಅವರ ಗುರುತು ಪತ್ತೆಗಾಗಿ ಡಿಎನ್‌ಎ ಪರೀಕ್ಷೆ ನಡೆಸಲು ಅಧಿಕಾರಿಗಳಿಗೆ ಬರುಯಿಪುರ ಪೊಲೀಸ್ ಜಿಲ್ಲಾ ಎಸ್‌ಪಿ ಸುಭೇಂದ್ರ ಕುಮಾರ್ ಸೂಚಿಸಿದ್ದಾರೆ. ಡಿಎನ್‌ಎ ಪರೀಕ್ಷೆಗಾಗಿ ಅಧಿಕಾರಿಗಳು ನ್ಯಾಯಾಲಯದ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಗೋದಾಮಿನ ಮಾಲೀಕ, ಡೆಕೋರೇಟರ್ ಸಂಸ್ಥೆಯ ಮುಖ್ಯಸ್ಥ ಗಂಗಾಧರ್ ದಾಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವಘಡಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.

ಬಂಗಾಳದ ಮಮತಾ ಸರ್ಕಾರವು ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...