ಪಶ್ಚಿಮ ಬಂಗಾಳ ಪಂಚಾಯತ್‌ ಚುನಾವಣೆ : ಹಿಂಸಾಚಾರಕ್ಕೆ 12 ಮಂದಿ ಬಲಿ

Date:

Advertisements

ಪಶ್ಚಿಮ ಬಂಗಾಳದಲ್ಲಿ ಪಂಚಾಯಿತಿ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವಿನ ಕಿತ್ತಾಟಗಳು ಹಿಂಸೆಗೆ ತಿರುಗಿದ್ದು, ಒಬ್ಬ ಅಧಿಕಾರಿ ಸೇರಿ ಒಟ್ಟು 12 ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮುರ್ಶಿದಾಬಾದ್‌ ಜಿಲ್ಲೆಯ ರೇಜಿನಗರ್‌, ತುಫಾನ್‌ಗಂಜ್‌, ಖರ್‌ಗ್ರಾಮ್‌ನಲ್ಲಿ ಮತದಾನ ಪ್ರಕ್ರಿಯೆ ಶುರುವಾಗುವ ಮುನ್ನವೇ ಐವರು ಟಿಎಂಸಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ದೋಮ್‌ಕೋಲ್‌ ಎಂಬಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.

“ಶುಕ್ರವಾರ ತಡರಾತ್ರಿಯಿಂದ ಬಿಜೆಪಿ ಮತ್ತು ಸಿಪಿಐಎಂ ಪಕ್ಷಗಳ ಕಾರ್ಯಕರ್ತರೇ ಈ ಹಿಂಸಾಚಾರ ನಡೆಸುತ್ತಿದ್ದಾರೆ. ನಮ್ಮ ಕಾರ್ಯಕರ್ತರನ್ನು ಹತ್ಯೆಗೈದು ಮತಗಟ್ಟೆಗಳನ್ನು ಧ್ವಂಸ ಮಾಡಿದ್ದಾರೆ. ಬ್ಯಾಲೆಟ್‌ ಪೇಪರ್‌ಗಳನ್ನು ಸುಟ್ಟು ಹಾಕಲಾಗಿದೆ. ಭದ್ರತಾ ಸಿಬ್ಬಂದಿ ಮತಗಟ್ಟೆಗಳಿಗೆ ಅಗತ್ಯ ಭದ್ರತೆ ಒದಗಿಸುವಲ್ಲಿ ವಿಫಲರಾಗಿದ್ದಾರೆ” ಎಂದು ಆಡಳಿತಾರೂಢ ಟಿಎಂಸಿ ಆರೋಪಿಸಿದೆ.

Advertisements

ಕೂಚ್‌ ಬೆಹಾರ್‌ ಜಿಲ್ಲೆಯ ಫಲಿಮಾರಿ ಗ್ರಾಮ ಪಂಚಾಯಿತಿಯಲ್ಲಿ ಮತಗಟ್ಟೆ ಪ್ರವೇಶಿಸಲು ಯತ್ನಿಸಿದ ಬಿಜೆಪಿಯ ಬೂತ್‌ ಏಜೆಂಟ್‌ ಮಾಧವ್‌ ಬಿಸ್ವಾಸ್‌ ಎಂಬುವವರನ್ನು ಟಿಎಂಸಿ ಕಾರ್ಯಕರ್ತರು ತಡೆದಿದ್ದಾರೆ. ಇದರಿಂದ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಇದೇ ಸಂದರ್ಭದಲ್ಲಿ ಮಾಧವ್‌ ಬಿಸ್ವಾಸ್‌ ಅವರನ್ನು ಥಳಿಸಿ ಕೊಲೆ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಓರ್ವ ಸಿಪಿಐಎಂ ಬೆಂಬಲಿಗನನ್ನು ಕೂಡ ಹತ್ಯೆ ಮಾಡಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಮೂರು ಹಂತಗಳಲ್ಲಿ ಪಂಚಾಯಿತಿ ಚುನಾವಣೆ ನಡೆಯುತ್ತಿದೆ. 73, 887 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ನಾನಾ ಪಕ್ಷಗಳ 2.06 ಲಕ್ಷ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣಾ ದಿನಾಂಕ ಘೋಷಣೆಯಾದ ದಿನದಿಂದ ರಾಜ್ಯದಲ್ಲಿ ನಡೆದ ರಾಜಕೀಯ ಪ್ರೇರಿತ ಹಿಂಸಾಚಾರಕ್ಕೆ ಈವರೆಗೆ 23 ಜನ ಬಲಿಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಚುನಾವಣೆಗಳು ಮತಪತ್ರಗಳ ಮೂಲಕ ನಡೆಯಬೇಕೇ ಹೊರತು ಬುಲೆಟ್‌ಗಳಿಂದ ಅಲ್ಲ ಎಂದು ಪಂಚಾಯತ್ ಚುನಾವಣೆ ವೇಳೆ ನಡೆಯುತ್ತಿರುವ ಹಿಂಸಾಚಾರಗಳ ಕುರಿತು ಪಶ್ಚಿಮ ಬಂಗಾಳ ರಾಜ್ಯಪಾಲ ಸಿ ವಿ ಆನಂದ್ ಬೋಸ್ ಹೇಳಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ನಡುವೆ ಬಿಜೆಪಿ ಕಾರ್ಯಕರ್ತರು ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X