ಬಿಜೆಪಿ ನಾಯಕ ಹಾಗೂ ಕಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ವಿರುದ್ಧ ಪ್ರತಿಭಟನಾ ಸ್ಥಳದಲ್ಲಿ ವಜಾಗೊಳಿಸಿದ ಶಾಲಾ ನೌಕರರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಎಫ್‌ಐಆರ್‌ನಲ್ಲಿ ಭಾರತೀಯ ಯುವ ಮೋರ್ಚಾ (ಬಿಜೆವೈಎಂ) ನಾಯಕ ಪ್ರಶಾಂತ ದಾಸ್ ಹೆಸರು ಕೂಡ ಇದೆ. ಕಲ್ಕತ್ತಾ ಹೈಕೋರ್ಟ್ ತೀರ್ಪಿನ ನಂತರ ಕೆಲಸ ಕಳೆದುಕೊಂಡ ಕೆಲವು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ದೂರಿನ ನಂತರ ಗಂಗೋಪಾಧ್ಯಾಯ ಮತ್ತು ದಾಸ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಕೊಲೆ ಯತ್ನ ಮತ್ತು ಇತರ ಅಪರಾಧಗಳನ್ನು ದಾಖಲಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ
ವರದಿಯ ಪ್ರಕಾರ, ಮೇ 4 ರಂದು ಗಂಗೋಪಾಧ್ಯಾಯ ಅವರು ಪಕ್ಷದ ಸಹೋದ್ಯೋಗಿ ಸುವೇಂದು ಅಧಿಕಾರಿಯೊಂದಿಗೆ ತಾಮ್ಲುಕ್ ಲೋಕಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಮೊದಲು ರ್ಯಾಲಿಯನ್ನು ನಡೆಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ರ್ಯಾಲಿಯಲ್ಲಿ, ಕೆಲವು ಬಿಜೆಪಿ ಬೆಂಬಲಿಗರು ಕೆಲಸ ಕಳೆದುಕೊಂಡ ಪ್ರಾಥಮಿಕ ಶಿಕ್ಷಕರ ಮೇಲೆ ಪ್ರತಿಭಟನಾ ಸ್ಥಳದಲ್ಲಿ ಹಲ್ಲೆ ನಡೆಸಿದ್ದಾರೆ. ಘಟನೆಯ ನಂತರ, ಶಿಕ್ಷಕರು ನ್ಯಾಯಮೂರ್ತಿ ಗಂಗೋಪಾಧ್ಯಾಯ ಮತ್ತು ದಾಸ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
