ಗರಿಷ್ಠ 40 ಡಿಗ್ರಿ ತಾಪಮಾನ; ಪಶ್ಚಿಮ ಬಂಗಾಳ ಶಾಲಾ ಕಾಲೇಜುಗಳಿಗೆ ವಾರದ ರಜೆ ಘೋಷಣೆ

Date:

  • ಪಶ್ಚಿಮ ಬಂಗಾಳ ರಾಜ್ಯದಲ್ಲಿ ಗರಿಷ್ಠ 40 ಡಿಗ್ರಿ ತಾಪಮಾನ
  • ಸಂಜೆಯವರೆಗೂ ಹೊರಗೆ ಬರದಂತೆ ಆರೆಂಜ್‌ ಅಲರ್ಟ್‌

ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಗರಿಷ್ಠ 40 ಡಿಗ್ರಿ ತಾಪಮಾನ ದಾಖಲಾಗಿದೆ.

- Advertisement -

ರಾಜ್ಯದಲ್ಲಿ ಏಪ್ರಿಲ್‌ 17ರಿಂದ ವಾರದ ಮಟ್ಟಿಗೆ ಎಲ್ಲ ಶಾಲಾ ಕಾಲೇಜುಗಳಿಗೆ ಸರ್ಕಾರ ಭಾನುವಾರ (ಏಪ್ರಿಲ್ 16) ರಜೆ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗರಿಷ್ಠ 40 ಡಿಗ್ರಿ ತಾಪಮಾನ ದಾಖಲಾಗಿ ಶಾಖದ ಅಲೆಗಳ ತೀವ್ರತೆ ಹೆಚ್ಚಾಗಿರುವುದರಿಂದ ಮುಂದಿನ ಆದೇಶದವರೆಗೂ ರಜೆ ಮುಂದುವರಿಯಲಿದೆ ಎಂದು ಬಂಗಾಳ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಶಾಖದ ಅಲೆಗಳ ಪರಿಣಾಮ ಏಪ್ರಿಲ್‌ 19ರವರೆಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಮುಂದುವರಿಯಲಿದೆ.

ಕೋಲ್ಕತ್ತದಲ್ಲಿ ಭಾನುವಾರ (ಏಪ್ರಿಲ್‌ 16) ಕನಿಷ್ಠ 29.6 ಡಿಗ್ರಿ ಸೆಲ್ಸಿಯಸ್‌ ಮತ್ತು ಗರಿಷ್ಠ 39.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

“ಈಗಿರುವ ಶಾಖದ ಅಲೆಗಳ ಪರಿಸ್ಥಿತಿ ಪರಿಗಣಿಸಿ ಏಪ್ರಿಲ್ 17ರಿಂದ ಅನ್ವಯವಾಗುವಂತೆ ವಾರದ ಮಟ್ಟಿಗೆ ರಾಜ್ಯದಲ್ಲಿರುವ ಎಲ್ಲ ಸ್ವಾಯತ್ತ, ರಾಜ್ಯ, ಕೇಂದ್ರ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲು ಸರ್ಕಾರ ನಿರ್ಧರಿಸಲಾಗಿದೆ. ಮುಂದಿನ ಆದೇಶದವರೆಗೆ ಇದು ಜಾರಿಯಲ್ಲಿರುತ್ತದೆ. ಡಾರ್ಜಲಿಂಗ್‌ ಮತ್ತು ಕಾಲೀಮ್‌ಜಂಗ್‌ ಜಿಲ್ಲೆಗಳ ಬೆಟ್ಟ ಪ್ರದೇಶದಲ್ಲಿರುವ ಶಾಲಾ ಕಾಲೇಜುಗಳಿಗೆ ಇದು ಅನ್ವಯವಾಗುವುದಿಲ್ಲ” ಎಂದು ಬಂಗಾಳ ಸರ್ಕಾರ ಹೊರಡಿಸಿದ ಅಧಿಸೂಚನೆ ಹೇಳಿದೆ.

“ಶಾಲೆಗಳು ಪುನರಾರಂಭ ಆಗುವವರೆಗೂ ಬೋಧಕ ಮತ್ತು ಬೋಧಕೇತರ ವರ್ಗದವರಿಗೂ ರಜೆ ಇರಲಿದೆ” ಎಂದು ಆದೇಶ ಹೇಳಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ ಶಿಕ್ಷಣ ಸಂಸ್ಥೆಗಳ ಮುಚ್ಚುವ ಬಗ್ಗೆ ನಿರ್ಧರಿಸಿದ್ದರು.

“ಪ್ರಸ್ತುತ ಸ್ಥಿತಿಯಲ್ಲಿ ಜನರು ಶಾಖದ ಅಲೆಗಳ ಬಗ್ಗೆ ಹೆಚ್ಚು ನಿಗಾವಹಿಸಬೇಕಿದೆ. ಬಿಸಿಲಿನ ತಾಪ ಹೆಚ್ಚಿರುವ ಮಧ್ಯಾಹ್ನದಿಂದ ಸಂಜೆ 4 ಗಂಟೆಗಳವರೆಗೂ ಜನರು ಮನೆಯಿಂದ ಹೊರಗೆ ಬರುವುದನ್ನು ತಪ್ಪಿಸಬೇಕು” ಎಂದು ಅವರು ಹೇಳಿದರು.

ರಾಜ್ಯದಲ್ಲಿ ಆರೆಂಜ್‌ ಅಲರ್ಟ್

ಪಶ್ಚಿಮ ಬಂಗಾಳ ರಾಜ್ಯದಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ (ಏಪ್ರಿಲ್ 17) ಆರೆಂಜ್ ಅಲರ್ಟ್ ಘೋಷಿಸಿದೆ.

ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಬಿಹಾರ, ಸಿಕ್ಕಿಂ, ಒಡಿಶಾ ಮತ್ತು ಆಂಧ್ರ ಪ್ರದೇಶದ ಕರಾವಳಿ ಭಾಗದಲ್ಲಿ ಐಎಂಡಿ ಶಾಖದ ಅಲೆಗಳ ಎಚ್ಚರಿಕೆ ನೀಡಿದೆ.

“ದೇಶದ ವಾಯುವ್ಯ ಭಾಗದ ರಾಜ್ಯಗಳಲ್ಲಿ ತಾಪಮಾನ ಹೆಚ್ಚಳದ ಹಿನ್ನೆಲೆ ಇನ್ನು ಎರಡು ದಿನ ಶಾಖದ ಅಲೆಗಳ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ” ಎಂದು ಐಎಂಡಿ ಅಧಿಕಾರಿ ನರೇಶ್ ಕುಮಾರ್ ಹೇಳಿದರು.

“ಭಾರತದ ವಾಯುವ್ಯ ಮತ್ತು ಪೂರ್ವ ಭಾಗ ಹಾಗೂ ಮಧ್ಯಪ್ರದೇಶದಲ್ಲಿ ಗರಿಷ್ಠ 40 ರಿಂದ 42 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ” ಎಂದು ಐಎಂಡಿ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ ಸರ್ಕಾರ ಸಮಾರಂಭದಲ್ಲಿ ಬಿಸಿಲಿನ ಝಳಕ್ಕೆ 11 ಮಂದಿ ಸಾವು

“ಪಶ್ಚಿಮ ಬಂಗಾಳ ಸೇರಿದಂತೆ ಪೂರ್ವ ಭಾರತದಲ್ಲಿ ಇನ್ನು ನಾಲ್ಕು ದಿನ ಶಾಖದ ಅಲೆಗಳ ಸ್ಥಿತಿ ಇರಲಿದೆ. ಅದಕ್ಕಾಗಿ ರಾಜ್ಯದಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ” ಎಂದು ಐಎಂಡಿ ತಿಳಿಸಿದೆ.

ಬಿಹಾರದ ಬಹುತೇಕ ಜಿಲ್ಲೆಗಳು ಗರಿಷ್ಠ ತಾಪಮಾನಕ್ಕೆ ಸಾಕ್ಷಿಯಾಗಲಿವೆ. ಏಪ್ರಿಲ್ 19 ಮತ್ತು 20 ತಾಪಮಾನ ಗರಿಷ್ಠ 42-44 ಹೆಚ್ಚಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...