ಪಶ್ಚಿಮ ಬಂಗಾಳ SIR | ಅರ್ಹ ಮತದಾರರನ್ನು ಮತಪಟ್ಟಿಯಿಂದ ಹೊರಗಿಡುವುದು ಜನಾದೇಶಕ್ಕೆ ಪೆಟ್ಟು : ನ್ಯಾ. ಜೊಯ್ಮಾಲ್ಯ ಬಾಗ್ಚಿ

Date:

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿದ ಕಳವಳ ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯವಾದ ‘ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ’ಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

- Advertisement -

ಭಾರತದ ಚುನಾವಣಾ ರಾಜಕಾರಣದಲ್ಲಿ ಸೋಲು ಮತ್ತು ಗೆಲುವಿನ ಅಂತರ ಕೆಲವೊಮ್ಮೆ ತೀರಾ ಕಡಿಮೆಯಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ನಡೆಯುವ ಸಣ್ಣ ವ್ಯತ್ಯಾಸವೂ ಸಹ ಇಡೀ ಚುನಾವಣಾ ಫಲಿತಾಂಶವನ್ನೇ ಬುಡಮೇಲು ಮಾಡುವ ಶಕ್ತಿ ಹೊಂದಿರುತ್ತದೆ. ಬಂಗಾಳದ ವಿಷಯದಲ್ಲಿ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೊಯ್ಮಾಲ್ಯ ಬಾಗ್ಚಿ ಅವರಿದ್ದ ಪೀಠ ಪ್ರಸ್ತಾಪಿಸಿರುವ ಅಂಶಗಳು ಇದನ್ನೇ ಒತ್ತಿ ಹೇಳಿದೆ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ನ್ಯಾಯಮೂರ್ತಿ ಜೊಯ್ಮಾಲ್ಯ ಬಾಗ್ಚಿ ಅವರು ಮಂಡಿಸಿದ ವಾದ ಅತ್ಯಂತ ತಾರ್ಕಿಕ ಮತ್ತು ಗಂಭೀರವಾದುದು. ಒಂದು ಕ್ಷೇತ್ರದಲ್ಲಿ ಗೆಲುವಿನ ಅಂತರವು ಕೇವಲ ಶೇ. 2 ರಷ್ಟಿದ್ದಾಗ, ಅಲ್ಲಿನ ಮತದಾರರ ಪಟ್ಟಿಯಿಂದ ಸುಮಾರು ಶೇ. 15 ರಷ್ಟು ಮತದಾರರನ್ನು ಕೈಬಿಡುವುದು ಅಥವಾ ಅಳಸಿ ಹಾಕುವುದು ಆಘಾತಕಾರಿ ಸಂಗತಿ ಎಂದು ಅವರು ಹೇಳಿದರು. ಮಾತ್ರವಲ್ಲದೆ, ಒಂದು ವೇಳೆ ಅರ್ಹ ಮತದಾರರನ್ನು ವ್ಯವಸ್ಥಿತವಾಗಿ ಪಟ್ಟಿಯಿಂದ ಹೊರಗಿಟ್ಟರೆ, ಅದು ಜನಾದೇಶಕ್ಕೆ ಕೊಡಲಿ ಪೆಟ್ಟು. ಶೇ. 15 ರಷ್ಟು ಮತಗಳ ವ್ಯತ್ಯಾಸ ಯಾವುದೇ ಪ್ರಬಲ ಅಭ್ಯರ್ಥಿಯನ್ನು ಸೋಲಿಸಲು ಅಥವಾ ದುರ್ಬಲ ಅಭ್ಯರ್ಥಿಯನ್ನು ಗೆಲ್ಲಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ಪೀಠದಲ್ಲಿಯೇ ಭಿನ್ನಾಭಿಪ್ರಾಯ: ಕಾರ್ಯವಿಧಾನ Vs ನೈಜತೆ

ಈ ವಿಚಾರಣೆಯ ಸಂದರ್ಭದಲ್ಲಿ ಇಬ್ಬರು ನ್ಯಾಯಮೂರ್ತಿಗಳ ಅಭಿಪ್ರಾಯಗಳು ವಿಭಿನ್ನವಾಗಿದ್ದವು. ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು, ಕಾನೂನಿನ ತಾಂತ್ರಿಕತೆಗೆ ಆದ್ಯತೆ ನೀಡಿದರು. “ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಸಂಬಂಧಪಟ್ಟ ನ್ಯಾಯಮಂಡಳಿಗೆ ಅಪೀಲು ಹೋಗಿ” ಎನ್ನುವ ನಿಲುವನ್ನು ವ್ಯಕ್ತಪಡಿಸಿದರು. ಅಂದರೆ, ನ್ಯಾಯಾಂಗ ನೇರವಾಗಿ ಚುನಾವಣಾ ಪ್ರಕ್ರಿಯೆಯ ಆಡಳಿತಾತ್ಮಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂಬುದು ಅವರ ವಾದವಾಗಿತ್ತು.

ನ್ಯಾಯಮೂರ್ತಿ ಜೊಯ್ಮಾಲ್ಯ ಬಾಗ್ಚಿ ಅವರು ಅಂಕಿಅಂಶಗಳ ಹಿಂದಿರುವ ಅಪಾಯವನ್ನು ಒತ್ತಿ ಹೇಳಿದರು. “SIR ಪ್ರಕ್ರಿಯೆಯ ಹೆಸರಿನಲ್ಲಿ ಇಷ್ಟು ದೊಡ್ಡ ಪ್ರಮಾಣದ ಮತದಾರರನ್ನು ಕೈಬಿಟ್ಟರೆ ಪ್ರಜಾಪ್ರಭುತ್ವದ ಗತಿಯೇನು?” ಎಂದು ಪ್ರಶ್ನಿಸಿದರು. ಕೇವಲ ತಾಂತ್ರಿಕ ಕಾರಣ ನೀಡಿ ಅರ್ಜಿಯನ್ನು ವಜಾ ಮಾಡುವುದು ನ್ಯಾಯದ ದೃಷ್ಟಿಯಿಂದ ಸರಿಯಲ್ಲ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದರು.

ಪ್ರಜಾಪ್ರಭುತ್ವಕ್ಕೆ
ಎದುರಾಗುವ ದೊಡ್ಡ ಕುತ್ತು

ಇನ್ನು, ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಪಾರದರ್ಶಕವಾಗಿದೆಯೇ ಎನ್ನುವುದು ಇಲ್ಲಿನ ಮುಖ್ಯ ಪ್ರಶ್ನೆ. ಇದರಲ್ಲಿ ರಾಜಕೀಯ ಪ್ರೇರಿತ ಹಸ್ತಕ್ಷೇಪವಿದೆಯೇ? ಕೈಬಿಟ್ಟ ಮತದಾರರಿಗೆ ತಮ್ಮ ಅಹವಾಲು ಸಲ್ಲಿಸಲು ಸೂಕ್ತ ಅವಕಾಶ ನೀಡಲಾಗಿದೆಯೇ? ಎನ್ನುವ ಪ್ರಶ್ನೆಗಳನ್ನೂ ಮೂಡಿಸಿದೆ.

ಭಾರತದ ಸಂವಿಧಾನದ ವಿಧಿ 324 ರ ಅಡಿಯಲ್ಲಿ ಚುನಾವಣಾ ಆಯೋಗವು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು. ಆದರೆ, ಮತದಾರರ ಪಟ್ಟಿಯಲ್ಲಿನ ಇಂತಹ ಬೃಹತ್ ಪ್ರಮಾಣದ ವ್ಯತ್ಯಾಸಗಳು ಆಯೋಗದ ವಿಶ್ವಾಸಾರ್ಹತೆಯ ಮೇಲೆ ಪ್ರಶ್ನೆಗಳನ್ನು ಎತ್ತುತ್ತವೆ. ನ್ಯಾಯಾಲಯ ಮಧ್ಯಪ್ರವೇಶಿಸದಿದ್ದರೆ, ಚುನಾವಣಾ ಅಕ್ರಮಗಳಿಗೆ ವ್ಯವಸ್ಥಿತವಾದ ದಾರಿ ಮಾಡಿಕೊಟ್ಟಂತಾಗುತ್ತದೆ.

ಇದು ಕೇವಲ ಒಂದು ರಾಜ್ಯಕ್ಕೆ ಸೀಮಿತವಾದುದಲ್ಲ. ಇದು ಭಾರತದ ಚುನಾವಣಾ ವ್ಯವಸ್ಥೆಯಲ್ಲಿರುವ ದೋಷಗಳನ್ನು ಎತ್ತಿ ತೋರಿಸುತ್ತಿದೆ. ಗೆಲುವಿನ ಅಂತರಕ್ಕಿಂತ ಮತದಾರರ ಪಟ್ಟಿಯಿಂದ ಹೊರಬಿದ್ದವರ ಸಂಖ್ಯೆ ಹೆಚ್ಚಾದಾಗ, ಅಲ್ಲಿ ‘ಜನರ ತೀರ್ಪು’ ಎನ್ನುವುದಕ್ಕಿಂತ ‘ವ್ಯವಸ್ಥೆಯ ತೀರ್ಪು’ ಮೇಲುಗೈ ಸಾಧಿಸುತ್ತದೆ.

ನ್ಯಾಯಮೂರ್ತಿ ಬಾಗ್ಚಿ ಅವರು ಎತ್ತಿದ ಪ್ರಶ್ನೆಗಳು ಪ್ರಜಾಪ್ರಭುತ್ವದ ಜೀವಂತಿಕೆಯ ಪ್ರಶ್ನೆಗಳಾಗಿವೆ. ನ್ಯಾಯಾಂಗ ಕೇವಲ “ತಾಂತ್ರಿಕವಾಗಿ ನಮ್ಮ ವ್ಯಾಪ್ತಿಗೆ ಬರುವುದಿಲ್ಲ” ಎಂದು ಹೇಳಿ ಕೈತೊಳೆದುಕೊಳ್ಳುವುದಕ್ಕಿಂತ, ದೇಶದ ನಾಗರಿಕರ ಮೂಲಭೂತ ಹಕ್ಕಾದ ಮತದಾನದ ಹಕ್ಕನ್ನು ರಕ್ಷಿಸಲು ಧ್ವನಿ ಎತ್ತಬೇಕಾದ ಅನಿವಾರ್ಯತೆ ಇಂದು ಎದುರಾಗಿದೆ.

ಇದನ್ನೂ ಓದಿ : ಹುಟ್ಟುಹಬ್ಬ ಕುರಿತು ಅಂಬೇಡ್ಕರ್ ಹೀಗೆ ಹೇಳಿದ್ದರು

ಭಾರತದಂತಹ ಬೃಹತ್ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಂದು ಮತವೂ ನಿರ್ಣಾಯಕ. ತಾಂತ್ರಿಕ ಕಾರಣಗಳನ್ನು ನೀಡಿ ಒಂದು ನಿರ್ದಿಷ್ಟ ಸಮುದಾಯ ಅಥವಾ ಸಿದ್ಧಾಂತದ ಮತದಾರರನ್ನು ಪಟ್ಟಿಯಿಂದ ಹೊರಗಿಟ್ಟರೆ, ಅದು ಅವರ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆಯಾಗುತ್ತದೆ. ಸೋಲು-ಗೆಲುವಿನ ಅಂತರವು ಶೇ. 1-2 ರಷ್ಟಿರುವ ಕ್ಷೇತ್ರಗಳಲ್ಲಿ, ಶೇ. 10-15 ರಷ್ಟು ಮತದಾರರನ್ನು ಪಟ್ಟಿಯಿಂದ ಕೈಬಿಡುವುದು ಇಡೀ ಚುನಾವಣೆಯ ದಿಕ್ಕನ್ನೇ ಬದಲಿಸಬಹುದು. ಚುನಾವಣಾ ಆಯೋಗವು ಪಕ್ಷಪಾತವಿಲ್ಲದೆ ಕೆಲಸ ಮಾಡಬೇಕು. ಆದರೆ SIR ಪ್ರಕ್ರಿಯೆ ಆಡಳಿತಾರೂಢ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂಬ ಆರೋಪ ಕೇಳಿಬಂದಾಗ, ಮತದಾರರಲ್ಲಿ ಪ್ರಜಾಪ್ರಭುತ್ವದ ಮೇಲಿನ ನಂಬಿಕೆ ಕುಸಿಯುತ್ತದೆ.

ಒಟ್ಟಿನಲ್ಲಿ, SIR ಪ್ರಕ್ರಿಯೆಯು ಕೇವಲ ಒಂದು ಅಂಕಿಅಂಶದ ಆಟವಲ್ಲ. ಅದು ಪ್ರತಿಯೊಬ್ಬ ಪ್ರಜೆಯ ರಾಜಕೀಯ ಅಸ್ತಿತ್ವದ ಪ್ರಶ್ನೆ. ಚುನಾವಣಾ ವ್ಯವಸ್ಥೆಯು ಪಾರದರ್ಶಕವಾಗಿದ್ದಾಗ ಮಾತ್ರ ಪ್ರಜಾಪ್ರಭುತ್ವವು ಸದೃಢವಾಗಿರಲು ಸಾಧ್ಯ. ಮತದಾರರ ಪಟ್ಟಿಯ ಪರಿಷ್ಕರಣೆಯ ಹೆಸರಿನಲ್ಲಿ ಮತದಾರರನ್ನೇ ಇಲ್ಲದಂತೆ ಮಾಡುವುದು ಪ್ರಜಾಪ್ರಭುತ್ವಕ್ಕೆ ಒದಗುವ ದೊಡ್ಡ ಕುತ್ತು ಎನ್ನುವುದರಲ್ಲಿ ಅನುಮಾನವಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...