ಪಶ್ಚಿಮ ಬಂಗಾಳ SIR: ಸಕಾಲದಲ್ಲಿ ಪೂರ್ಣಗೊಳಿಸಲು ಜಾರ್ಖಂಡ್, ಒಡಿಶಾ ನ್ಯಾಯಾಧೀಶರ ನಿಯೋಜನೆಗೆ ಸುಪ್ರೀಂ ಅಸ್ತು

Date:

ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಿಂದ (ಎಸ್ಐಆರ್) ಉದ್ಭವಿಸಿರುವ ಸುಮಾರು 80 ಲಕ್ಷ ಹಕ್ಕು ಕೋರಿಕೆಗಳು ಮತ್ತು ಆಕ್ಷೇಪಣೆಗಳ ಇತ್ಯರ್ಥಕ್ಕಾಗಿ ಸಿವಿಲ್ ನ್ಯಾಯಾಧೀಶರನ್ನು ನಿಯೋಜಿಸಲು ಹಾಗೂ ನೆರೆಯ ಜಾರ್ಖಂಡ್ ಮತ್ತು ಒಡಿಶಾಗಳಿಂದ ನ್ಯಾಯಾಂಗ ಅಧಿಕಾರಿಗಳ ಸೇವೆಯನ್ನು ಕೋರಲು ಕೋಲ್ಕತಾ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಮಂಗಳವಾರ ಅನುಮತಿಯನ್ನು ನೀಡಿದೆ.

- Advertisement -

ಪ್ರಸ್ತುತ ಎಸ್ಐಆರ್ ಪರಿಶೀಲನೆಗಾಗಿ ನಿಯೋಜಿಸಲಾಗಿರುವ 250 ಜಿಲ್ಲಾ ನ್ಯಾಯಾಧೀಶರಿಗೆ ಹಕ್ಕು ಕೋರಿಕೆಗಳು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥಗೊಳಿಸಲು ಸುಮಾರು 80 ದಿನಗಳು ಬೇಕಾಗುತ್ತವೆ ಎಂದು ತಿಳಿಸಿ ಕೋಲ್ಕತಾ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಬರೆದಿರುವ ಪತ್ರವನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ನೇತೃತ್ವದ ಪೀಠವು ಗಮನಕ್ಕೆ ತೆಗೆದುಕೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪ್ರಕ್ರಿಯೆಯನ್ನು ಚುರುಕುಗೊಳಿಸಲು ಸಿವಿಲ್ ನ್ಯಾಯಾಧೀಶರ ನಿಯೋಜನೆಗೆ ಅನುಮತಿಯನ್ನು ನೀಡಿದ ಪೀಠವು, ಸಮಾನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ಸೇವೆಯನ್ನು ಕೋರಿ ಜಾರ್ಖಂಡ್ ಮತ್ತು ಒಡಿಶಾ ಹೈಕೋರ್ಟ್‌ಗಳ ಮುಖ್ಯ ನ್ಯಾಯಾಧೀಶರನ್ನು ಸಂಪರ್ಕಿಸುವಂತೆ ಕೋಲ್ಕತಾ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಸೂಚಿಸಿತು.

ಇದನ್ನು ಓದಿದ್ದೀರಾ? ಶೋಯೆಬ್ ಖಾನ್ | ಬಿಹಾರದ ಕುಗ್ರಾಮದಿಂದ ಯುಎಇ ವಿಶ್ವಕಪ್ ತಂಡದವರೆಗೆ ರೋಚಕ ಪಯಣ

ನೆರೆಯ ರಾಜ್ಯಗಳಿಂದ ನ್ಯಾಯಾಂಗ ಅಧಿಕಾರಿಗಳ ನಿಯೋಜನೆಯ ವೆಚ್ಚವನ್ನು ಭರಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದ ಪೀಠವು, ಕೋಲ್ಕತಾ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರ ಮನವಿಯನ್ನು ಪರಿಗಣಿಸುವಂತೆ ಜಾರ್ಖಂಡ್ ಮತ್ತು ಒಡಿಶಾ ಹೈಕೋರ್ಟ್‌ಗಳಿಗೆ ಸೂಚಿಸಿತು.

ನ್ಯಾಯಾಂಗ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳನ್ನು ಸಕಾಲದಲ್ಲಿ ಸಲ್ಲಿಸುವುದು ಚುನಾವಣಾ ನೋಂದಣಾಧಿಕಾರಿಗಳು/ಸಹಾಯಕ ನೋಂದಣಾಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಪೀಠವು ತಿಳಿಸಿತು.

ಎಸ್ಐಆರ್ ನಂತರದ ಅಂತಿಮ ಮತದಾರರ ಪಟ್ಟಿಯನ್ನು ಫೆ.28ರಂದು ಪ್ರಕಟಿಸಲು ಚು.ಆಯೋಗಕ್ಕೆ ಅನುಮತಿ ನೀಡಿದ ಸರ್ವೋಚ್ಚ ನ್ಯಾಯಾಲಯವು, ‘ತಾರ್ಕಿಕ ವ್ಯತ್ಯಾಸಗಳ’ ಪರಿಶೀಲನೆಯು ಅಷ್ಟರೊಳಗೆ ಪೂರ್ಣಗೊಂಡಿರದಿದ್ದರೆ ಪ್ರಕ್ರಿಯೆಯು ಪೂರ್ಣಗೊಳ್ಳುತ್ತಿದ್ದಂತೆ ಪೂರಕ ಪಟ್ಟಿಗಳನ್ನು ಹೊರಡಿಸಬಹುದು ಎಂದು ತಿಳಿಸಿತು.

ಪಶ್ಚಿಮ ಬಂಗಾಳದಲ್ಲಿ ವಿವಾದಾತ್ಮಕ ಎಸ್ಐಆರ್ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯವು ಕೈಗೆತ್ತಿಕೊಂಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...