ಪಶ್ಚಿಮ ಬಂಗಾಳ | ಫಾಲ್ಟಾ ಮರುಚುನಾವಣೆ: ವಿಚಿತ್ರ, ಅಚ್ಚರಿಯ ಫಲಿತಾಂಶ!

Date:

ಪಶ್ಚಿಮ ಬಂಗಾಳದ ಫಾಲ್ಟಾ ವಿಧಾನಸಭಾ ಕ್ಷೇತ್ರದ ಮರುಚುನಾವಣೆಯ ಫಲಿತಾಂಶ ಭಾನುವಾರ ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ದೇಬಾಂಗ್ಶು ಪಾಂಡಾ 1,09,021 ಮತಗಳ ಬೃಹತ್ ಅಂತರದಿಂದ ಐತಿಹಾಸಿಕ ಜಯ ಸಾಧಿಸಿದ್ದಾರೆ. ರಾಜಕೀಯ ವಲಯದಲ್ಲೇ ಅತ್ಯಂತ ವಿಚಿತ್ರ, ಅಚ್ಚರಿಯ ಫಲಿತಾಂಶ ಇದಾಗಿದೆ. ಅದಕ್ಕೆ ಮುಖ್ಯ ಕಾರಣ ಟಿಎಂಸಿ ಭದ್ರಕೋಟೆಯಾಗಿದ್ದ ಈ ಕ್ಷೇತ್ರದಲ್ಲಿ ಟಿಎಂಸಿಯೇ ತೀವ್ರ ಹಿನ್ನಡೆ ಅನುಭವಿಸಿರುವುದು.

- Advertisement -

ತೃಣಮೂಲ ಕಾಂಗ್ರೆಸ್‌ನ ಪ್ರಭಾವಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ‘ಡೈಮಂಡ್ ಹಾರ್ಬರ್’ ಲೋಕಸಭಾ ವ್ಯಾಪ್ತಿಗೆ ಬರುವ ಈ ಕ್ಷೇತ್ರವು ಟಿಎಂಸಿಯ ಭದ್ರಕೋಟೆಯಾಗಿತ್ತು. ಆದರೆ ಈ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ ಜಹಾಂಗೀರ್ ಖಾನ್ ಕೇವಲ 7,783 ಮತಗಳನ್ನು ಪಡೆದು ನಾಲ್ಕನೇ ಸ್ಥಾನದಲ್ಲಿರುವುದು ಅಚ್ಚರಿ ಮೂಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | ಫಾಲ್ತಾದಲ್ಲಿ 1.09 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಬಿಜೆಪಿ ಗೆಲುವು

ಪಶ್ಚಿಮ ಬಂಗಾಳದಲ್ಲಿ ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆದಿದೆ. ಏಪ್ರಿಲ್ 23ರಂದು ಮೊದಲ ಹಂತ, ಏಪ್ರಿಲ್ 29ರಂದು ಎರಡನೇ ಹಂತದ ಮತದಾನ ನಡೆದಿದೆ. ಎರಡನೇ ಹಂತದಲ್ಲಿ ಫಾಲ್ಟಾ ಕ್ಷೇತ್ರದಲ್ಲಿಯೂ ಮತದಾನ ನಡೆದಿದೆ. ಆದರೆ ಚುನಾವಣೆಯ ಸಂದರ್ಭದಲ್ಲಿ ಈ ಕ್ಷೇತ್ರದಲ್ಲಿ ವ್ಯಾಪಕ ಅಕ್ರಮಗಳು ನಡೆದ ಆರೋಪಗಳು ಕೇಳಿಬಂದಿದ್ದವು.

ಇವಿಎಂ ಯಂತ್ರಗಳ ಮೇಲೆ ಬಿಜೆಪಿ ಚಿಹ್ನೆಗೆ ಟೇಪ್ ಅಂಟಿಸಿದ್ದು ಹಾಗೂ ಮತದಾರರಿಗೆ ಬೆದರಿಕೆ ಹಾಕಿದ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಹಳೆಯ ಮತದಾನ ರದ್ದುಪಡಿಸಿ, ಮೇ 21ರಂದು ಕ್ಷೇತ್ರದ ಎಲ್ಲ 285 ಮತಗಟ್ಟೆಗಳಲ್ಲೂ ಕಠಿಣ ಭದ್ರತೆಯೊಂದಿಗೆ ಮರುಮತದಾನ ನಡೆಸಿತ್ತು. ಅದರ ಫಲಿತಾಂಶವು ಮೇ 24ರಂದು ಹೊರಬಿದ್ದಿದೆ.

ಇನ್ನು ಮರುಮತದಾನಕ್ಕೆ ಕೆಲವೇ ದಿನಗಳು ಇರುವಾಗ ಈ ಕ್ಷೇತ್ರದಲ್ಲಿ ಹೈಡ್ರಾಮಾ ನಡೆದಿದೆ. ಟಿಎಂಸಿ ಅಭ್ಯರ್ಥಿ ಜಹಾಂಗೀರ್ ಖಾನ್ ಚುನಾವಣಾ ಕಣದಿಂದ ನಿಗೂಢವಾಗಿ ಹಿಂದೆ ಸರಿದಿದ್ದರು. ಮುಖ್ಯಮಂತ್ರಿ ಸುವೇಂದು ಅಧಿಕಾರಿ ಫಾಲ್ಟಾ ಪ್ರದೇಶದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡುವುದಾಗಿ ಭರವಸೆ ನೀಡಿರುವ ಕಾರಣ ತಾನು ಈ ಚುನಾವಣೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿಕೊಂಡಿದ್ದರು. ಆದರೆ ಟಿಎಂಸಿ ಇದು ಪಕ್ಷದ ನಿರ್ಧಾರವಲ್ಲ, ಖಾನ್‌ನ ವೈಯಕ್ತಿಕ ನಿರ್ಧಾರ ಎಂದು ಸ್ಪಷ್ಟಪಡಿಸಿತ್ತು.

ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ | ಮುಸ್ಲಿಮರೇ ಅಧಿಕವಾಗಿರುವ ಬೂತ್‌ನ 97% ಮತಗಳು ಬಿಜೆಪಿ ಪಾಲು!

ಆದರೆ ನಾಮಪತ್ರ ಹಿಂಪಡೆಯುವ ಅವಧಿ ಮುಗಿದಿದ್ದರಿಂದ ಖಾನ್ ಅಧಿಕೃತವಾಗಿ ಹಿಂದೆ ಕಣದಿಂದ ಸರಿಯುವಂತಿರಲಿಲ್ಲ. ಮರು ಮತದಾನದ ಸಮಯದಲ್ಲಿ ಕ್ಷೇತ್ರದಲ್ಲಿ ಖಾನ್ ನೇತೃತ್ವದಲ್ಲಿ ಟಿಎಂಸಿ ಪ್ರಚಾರವೂ ಅಷ್ಟಾಗಿ ಕಂಡುಬಂದಿರಲಿಲ್ಲ. ಖಾನ್ ಕೂಡಾ ಕಂಡು ಬಂದಿರಲಿಲ್ಲ. ಮತದಾನದ ದಿನದಂದು, ಅವರ ಮನೆಯೂ ಬಂದ್ ಆಗಿತ್ತು. ಇವಿಎಂ ಬ್ಯಾಲೆಟ್‌ನಲ್ಲಿ ಖಾನ್ ಹೆಸರಿತ್ತು. ಆದರೆ ಟಿಎಂಸಿ ಭದ್ರಕೋಟೆಯಲ್ಲಿ ಟಿಎಂಸಿ ಅಭ್ಯರ್ಥಿ ಖಾನ್‌ಗೆ ಸಿಕ್ಕಿದ್ದು ಅತ್ಯಲ್ಪ ಮತ.

ಈ ವಿಚಿತ್ರ ರಾಜಕೀಯ ಪರಿಸ್ಥಿತಿಯಲ್ಲಿ ಸಿಪಿಐ(ಎಂ) ಅಭ್ಯರ್ಥಿ ಶಂಭುನಾಥ್ ಕುರ್ಮಿ 40,645 ಮತಗಳನ್ನು ಪಡೆದು ಎರಡನೇ ಸ್ಥಾನ ಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಅಬ್ದುರ್ ರಝಾಕ್ ಮೊಲ್ಲಾ 10,000ಕ್ಕೂ ಹೆಚ್ಚು ಮತಗಳನ್ನು ಮೂರನೇ ಸ್ಥಾನ ಪಡೆದಿದ್ದಾರೆ. ಟಿಎಂಸಿಯ ಜಹಾಂಗೀರ್ ಖಾನ್ ಕೇವಲ 7,783 ಮತಗಳನ್ನು ಪಡೆದು ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಸಿಪಿಐಎಂ ಸುಮಾರು 34 ವರ್ಷಗಳ ಕಾಲ ಆಡಳಿತ ನಡೆಸಿತ್ತು. ಆದರೆ 2011ರಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಟಿಎಂಸಿ ಅಧಿಕಾರಕ್ಕೆ ಏರಿತು. ಅದಾದ ಬಳಿಕ ಸಿಪಿಐಎಂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆದಿತ್ತು, ಹಿಂಸಾಚಾರ ನಡೆದಿತ್ತು. ಸಿಪಿಐಎಂ ಮೂರನೇ-ನಾಲ್ಕನೇ ಸ್ಥಾನಕ್ಕೆ ಇಳಿದಿತ್ತು. ಇದೀಗ ಟಿಎಂಸಿ ನಾಲ್ಕನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಸಿಪಿಐಎಂ ಈ ಕ್ಷೇತ್ರದಲ್ಲಿ ಎರಡನೇ ಸ್ಥಾನದಲ್ಲಿದೆ ಎಂಬುದು ವಿಶೇಷ.

ಈ ಸಂದರ್ಭದಲ್ಲೇ ಇದೇ ಪಶ್ಚಿಮ ಬಂಗಾಳದಲ್ಲಿ ಹೊರಬಿದ್ದ ಮತ್ತೊಂದು ವಿಚಿತ್ರ ಮತ್ತು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿರುವ ಫಲಿತಾಂಶದತ್ತ ನಾವು ಮುಖ ಮಾಡಬೇಕಿದೆ. ಸುಮಾರು 20 ಕ್ಷೇತ್ರಗಳಲ್ಲಿ ಐದು ಸಾವಿರಕ್ಕಿಂತ ಕಡಿಮೆ ಮತಗಳ ಅಂತರದಲ್ಲಿ ಬಿಜೆಪಿ ಪೈಪೋಟಿ ನಡೆಸಿದೆ. ಆದರೆ ರಾಜರ್ಹತ್ ನ್ಯೂ ಟೌನ್ ಕ್ಷೇತ್ರದ ಚುನಾವಣೆಯಲ್ಲಿ ಮುಸ್ಲಿಮರೇ ಅಧಿಕವಾಗಿರುವ ಬೂತ್‌ನಲ್ಲಿ ಬಿಜೆಪಿಯೇ ಶೇ.97ರಷ್ಟು ಮತಗಳನ್ನು ಪಡೆದಿರುವುದು ಸದ್ಯ ಚರ್ಚೆಗೆ ಗ್ರಾಸವಾಗಿದೆ.

ತೀವ್ರ ಪೈಪೋಟಿ ಬಳಿಕ ಬಿಜೆಪಿಯ ಪಿಯೂಷ್ ಕನೋಡಿಯಾ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ತಪಶ್ ಚಟರ್ಜಿ ವಿರುದ್ಧ 316 ಮತಗಳ ಅತಿ ಕಡಿಮೆ ಅಂತರದಿಂದ ಗೆದ್ದಿದ್ದಾರೆ. ಒಟ್ಟಾರೆಯಾಗಿ, ಬಿಜೆಪಿ 207 ಸ್ಥಾನಗಳನ್ನು ಗೆದ್ದಿತು. ರಾಜರ್ಹತ್‌ನಲ್ಲಿ ಬಿಜೆಪಿ ಗೆದ್ದಿರುವುದು ಆಶ್ಚರ್ಯ ಹುಟ್ಟಿಸಿದೆ. ಯಾಕೆಂದರೆ ಅದು ಮುಸ್ಲಿಮರೇ ಅಧಿಕವಾಗಿರುವ ಬೂತ್. ಬಿಜೆಪಿ ಮತಗಳ್ಳತನ ಮಾಡಿದೆ ಎಂಬ ಆರೋಪಗಳೂ ಕೇಳಿಬರುತ್ತಿವೆ. ಈ ವಿಚಿತ್ರ ಫಲಿತಾಂಶಗಳು ಚುನಾವಣಾ ಅಕ್ರಮದತ್ತವೂ ಬೆರಳು ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...

ಕ್ಯಾನ್ಸರ್ ರೋಗಿಗಳಿಗೆ ಗುಡ್‌ನ್ಯೂಸ್‌; ದುಬಾರಿ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆ?

ದೇಶದಲ್ಲಿ ದುಬಾರಿಯಾಗಿರುವ ಕೆಲವು ಕ್ಯಾನ್ಸರ್ ಔಷಧಗಳ ಬೆಲೆ ಶೀಘ್ರದಲ್ಲೇ ಭಾರಿ ಪ್ರಮಾಣದಲ್ಲಿ...