ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್‌ನಲ್ಲಿರುವ ಬರ್ಗರ್ ಕಿಂಗ್ ಔಟ್‌ಲೆಟ್‌ನಲ್ಲಿ ಮಂಗಳವಾರ ತಡರಾತ್ರಿ ಮೂವರು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಓರ್ವ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದ್ದು, ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೆ ಬ್ಲಾಕ್ ಪ್ರದೇಶದಲ್ಲಿರುವ ಜೆ ಬ್ಲಾಕ್ ಪ್ರದೇಶದಲ್ಲಿ ದುಷ್ಕರ್ಮಿಗಳು ಹಲವು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ವೈದ್ಯರು ಆತ ಮೃತಪಟ್ಟಿರುವುದಾಗಿ ಘೋಷಿಸಿದರು. ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಪಶ್ಚಿಮ ಬಂಗಾಳ| ಟಿಎಂಸಿ ನಾಯಕನ ಮೇಲೆ ಗುಂಡಿನ ದಾಳಿ
ಮೃತ ವ್ಯಕ್ತಿಯ ಜೊತೆ ಮತ್ತೋರ್ವ ವ್ಯಕ್ತಿ ಕೂಡಾ ಇದ್ದರು. ಆದರೆ ಗುಂಡಿನ ದಾಳಿ ಪ್ರಾರಂಭವಾದಾಗ ಆ ವ್ಯಕ್ತಿ ಓಡಿ ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
#WATCH | Delhi: DCP West Vichitra Veer says, “Rajouri Garden PS received a call at around 9.45 pm that an incident of firing took place at a Burger King outlet. The officials immediately reached the spot. As per the preliminary information, more than 10 rounds were fired. One… https://t.co/y0CFN9aqQp pic.twitter.com/UZD4RF11mf
— ANI (@ANI) June 18, 2024
ಘಟನಾ ಸ್ಥಳಕ್ಕೆ ತೆರಳಿ ಪೊಲೀಸರು ಹಾಗೂ ಪೊಲೀಸ್ ಕ್ರೈಂ ತಂಡ ಪರಿಶೀಲನೆ ನಡೆಸಿದೆ. ಮಾಹಿತಿ ಸಂಗ್ರಹಿಸಲು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆರೋಪಿಯನ್ನು ಗುರುತಿಸಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.