ಸೋನಿಯಾ ಗಾಂಧಿ ಆತ್ಮಕಥನದಲ್ಲಿ ಹೇಳಹೊರಟಿದ್ದ ಚೀನಾ ಆಕ್ರಮಣದ ವಿಚಾರ ಏನು?

Date:

​ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಮುಂಬರುವ ಆತ್ಮಕಥನ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ (Belonging: A Journey of Love) ಭಾರತದಲ್ಲಿ ಪ್ರಕಟಣೆಗೊಳ್ಳುವ ಮುನ್ನವೇ ತೀವ್ರ ವಿವಾದ ಸೃಷ್ಟಿಸಿದೆ. ಪೆಂಗ್ವಿನ್ ರ್ಯಾಂಡಮ್ ಹೌಸ್ ಇಂಡಿಯಾ (PRHI) ಮತ್ತು ಲೇಖಕಿಯ ನಡುವಿನ ಭಿನ್ನಾಭಿಪ್ರಾಯಕ್ಕೆ ಕಾರಣವಾದ ಪ್ರಮುಖ ಉಲ್ಲೇಖಗಳಲ್ಲಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ನಡೆದಿರುವ ‘ಚೀನಾ ಗಡಿ ಅತಿಕ್ರಮಣ’ದ ವಿಚಾರವೂ ಒಂದಾಗಿದೆ ಎಂದು ತಿಳಿದುಬಂದಿದೆ.

- Advertisement -

ಹಸ್ತಪ್ರತಿಯಲ್ಲಿ ಚೀನಾ ಸೇನೆಯು ಭಾರತೀಯ ಗಡಿಯೊಳಗೆ ನಡೆಸಿರುವ ನುಸುಳುವಿಕೆ ಹಾಗೂ ಗಡಿಯಲ್ಲಿನ ಬಿಕ್ಕಟ್ಟಿನ ಬಗ್ಗೆ ಸೋನಿಯಾ ಗಾಂಧಿ ಸವಿವರವಾಗಿ ಚರ್ಚಿಸಿದ್ದಾರೆ. ಸಂಸತ್ತಿನಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಎತ್ತುತ್ತಿರುವ ಗಡಿ ಭದ್ರತಾ ಲೋಪಗಳನ್ನೇ ಈ ಕೃತಿಯಲ್ಲಿ ದೃಢವಾಗಿ ಮಂಡಿಸಲಾಗಿದೆ. ಇದು ಕೇವಲ ಊಹಾಪೋಹಗಳಲ್ಲ, ಬದಲಾಗಿ ಉನ್ನತ ನಾಯಕಿಯಾಗಿ ತಾವು ಕಂಡ ವಾಸ್ತವದ ಮೌಲ್ಯಮಾಪನ ಎಂದು ಸೋನಿಯಾ ಪ್ರತಿಪಾದಿಸಿದ್ದಾರೆ. ಹೀಗಾಗಿ, ಚೀನಾ ವಿಚಾರದ ಸತ್ಯಾಂಶವನ್ನು ಮರೆಮಾಚುವ ಯಾವುದೇ ಸಂಪಾದಕೀಯ ಬದಲಾವಣೆಗಳಿಗೆ ಒಳಪಡಲು ಅವರು ಕಟ್ಟುನಿಟ್ಟಾಗಿ ನಿರಾಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

​ಚೀನಾ ಗಡಿ ಅತಿಕ್ರಮಣದ ವಿಚಾರ ಮಾತ್ರವಲ್ಲದೆ, ಪ್ರಧಾನಿ ಮೋದಿ ಅವರ ಆಡಳಿತ ವೈಖರಿ, ಕೇಂದ್ರ ಸರ್ಕಾರದ ನೀತಿಗಳು ಹಾಗೂ ಭಾರತದ ಸಾಮಾಜಿಕ ರಚನೆಯ ಮೇಲೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಬೀರಿದ ಪ್ರಭಾವದ ಬಗ್ಗೆಯೂ ಕೃತಿಯಲ್ಲಿ ನೇರವಾದ ವಿಶ್ಲೇಷಣೆಗಳಿವೆ. ಈ ಸೂಕ್ಷ್ಮ ವಿಚಾರಗಳಿಗೆ ಸಂಬಂಧಿಸಿದ ಕೆಲವು ಸಾಲುಗಳನ್ನು ಕೈಬಿಡುವಂತೆ ಪೆಂಗ್ವಿನ್ ಇಂಡಿಯಾ ಸೂಚಿಸಿತ್ತು, ಆದರೆ ಲೇಖಕಿ ಇದಕ್ಕೆ ಸಮ್ಮತಿಸಲಿಲ್ಲ ಎನ್ನಲಾಗಿದೆ.

​ಈ ಬೆಳವಣಿಗೆಯ ಕುರಿತು ಸ್ಪಷ್ಟನೆ ನೀಡಿರುವ ಪೆಂಗ್ವಿನ್ ಇಂಡಿಯಾ, “ಲೇಖಕರು ಬದಲಾವಣೆಗಳಿಗೆ ಒಪ್ಪದ ಕಾರಣ ನಾವು ಕೃತಿಯನ್ನು ಪ್ರಕಟಿಸುತ್ತಿಲ್ಲ ಎಂಬುದು ಸತ್ಯಕ್ಕೆ ದೂರವಾದದ್ದು. ವಾಸ್ತವಾಂಶ ಪರಿಶೀಲಿಸುವುದು ಮತ್ತು ಲೇಖಕರಿಗೆ ಸೂಕ್ತ ಸಲಹೆ ನೀಡುವುದು ಪ್ರಕಾಶನ ಪ್ರಕ್ರಿಯೆಯ ಸಾಮಾನ್ಯ ಭಾಗವಷ್ಟೇ” ಎಂದಿದೆ. ಇದೇ ವರ್ಷದ ಆರಂಭದಲ್ಲಿ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥನದ ಪ್ರಕಟಣೆಯಿಂದಲೂ ಸಂಸ್ಥೆ ಹಿಂದೆ ಸರಿದಿದ್ದನ್ನು ಇಲ್ಲಿ ಸ್ಮರಿಸಬಹುದು.

​ಪ್ರಕಾಶಕರ ಈ ನಡೆಯನ್ನು ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಅವರು, “ಚೀನಾ ಅತಿಕ್ರಮಣ ಮತ್ತು ಸರ್ಕಾರದ ವೈಫಲ್ಯಗಳ ವಾಸ್ತವವನ್ನು ತಿರುಚಲು ಪ್ರಕಾಶಕರ ಮೇಲೆ ಸರ್ಕಾರದ ಒತ್ತಡವಿದೆಯೇ? ಇದು ಪ್ರಜಾಪ್ರಭುತ್ವದ ಕೊಲೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ” ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ಈ ಪ್ರಕಟಣಾ ವಿವಾದಗಳ ನಡುವೆಯೇ, ಅಮೆರಿಕದ ಪ್ರತಿಷ್ಠಿತ ‘ಆಲ್ಫ್ರೆಡ್ ಎ. ಕ್ನಾಫ್’ (Knopf) ಪ್ರಕಾಶನವು ನವೆಂಬರ್ 10ರಂದು ಈ ಕೃತಿಯನ್ನು ಜಾಗತಿಕವಾಗಿ ಬಿಡುಗಡೆ ಮಾಡಲಿದೆ. ಈಗಾಗಲೇ ಅಮೆಜಾನ್‌ನಲ್ಲಿ ಇದರ ಇ-ಬುಕ್ ಆವೃತ್ತಿಯು ಮುಂಗಡ ಕಾಯ್ದಿರಿಸುವಿಕೆಗೆ ಲಭ್ಯವಿದ್ದು, ಇದರ ಬೆಲೆ ರೂ. 2,615 ನಿಗದಿಪಡಿಸಲಾಗಿದೆ. 1984ರಲ್ಲಿ ನಡೆದ ಇಂದಿರಾ ಗಾಂಧಿ ಹತ್ಯೆ ಹಾಗೂ 1991ರ ರಾಜೀವ್ ಗಾಂಧಿ ಹತ್ಯೆಯ ನೋವಿನ ಪ್ರಸಂಗಗಳನ್ನು ಈ ಕೃತಿಯಲ್ಲಿ ವಿವರಿಸಲಾಗಿದೆ. ಅಲ್ಲದೆ, ಸೋನಿಯಾ ಗಾಂಧಿ ಅವರ ರಾಜಕೀಯ ಪ್ರವೇಶ ಮತ್ತು 2004ರಲ್ಲಿ ಅವರು ಪ್ರಧಾನಿ ಹುದ್ದೆ ನಿರಾಕರಿಸಿದ ರೋಚಕ ಘಟನೆಗಳನ್ನೂ ಇದು ಒಳಗೊಂಡಿದೆ. ಜಾಗತಿಕ ಮಟ್ಟದಲ್ಲಿ ಬಿಡುಗಡೆಗೆ ಸಿದ್ಧವಾಗಿರುವ ಈ ಆತ್ಮಕಥನವು, ಭಾರತದಲ್ಲಿ ಯಾವ ಪ್ರಕಾಶನ ಸಂಸ್ಥೆಯ ಮೂಲಕ ಹೊರಬರಲಿದೆ ಎಂಬುದು ಸದ್ಯದ ಬಹುದೊಡ್ಡ ಕುತೂಹಲವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...