ಏನು ಉಡುಪು ಧರಿಸಬೇಕೆನ್ನುವುದು ನಿಮ್ಮ ನಿರ್ಧಾರ: ಹಿಜಾಬ್ ಪರ ರಾಹುಲ್ ಮಾತು

Date:

ಹಿಜಾಬ್ ಒಳಗೊಂಡಂತೆ ಮಹಿಳೆಯರ ಆಯ್ಕೆಯ ಉಡುಪುಗಳನ್ನು ಗೌರವಿಸಬೇಕು ಹಾಗೂ ವ್ಯಕ್ತಿ ಧರಿಸುವ ಉಡುಪುನ ಬಗ್ಗೆ ಯಾರೂ ನಿರ್ದೆಶಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -

ಉತ್ತರ ಪ್ರದೇಶದ ಭಾರತ್ ಜೋಡೋ ನ್ಯಾಯ ಯಾತ್ರೆ ಸಂದರ್ಭದಲ್ಲಿ ಅಲಿಘಡ ಮುಸ್ಲಿಂ ವಿವಿಯ ಮಹಿಳಾ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸಂವಾದದ ಸಂದರ್ಭದಲ್ಲಿ ಇತ್ತಿಚಿಗೆ ಕರ್ನಾಟಕದಲ್ಲಿ ಉಂಟಾದ ಹಿಜಾಬ್‌ ವಿವಾದದ ಬಗ್ಗೆ ಪ್ರಶ್ನಿಸಿದ ವಿದ್ಯಾರ್ಥಿನಿ, ನೀವು ಒಂದು ವೇಳೆ ಪ್ರಧಾನಿಯಾಗಿದ್ದರೆ ನಿಮ್ಮ ಅಭಿಪ್ರಾಯವೇನು ಎಂದು ಕೇಳಿದರು.

“ಮಹಿಳೆ ಏನು ಬೇಕೊ ಅದನ್ನು ಧರಿಸುವುದು ಅವರ ಆಯ್ಕೆ. ಅವರಿಗೆ ಅನುಮತಿಸಬೇಕು. ಇದು ನನ್ನ ಅಭಿಪ್ರಾಯ. ನೀವು ಏನು ಧರಿಸುತ್ತೀರೋ ಅದು ನಿಮ್ಮ ಜವಾಬ್ದಾರಿ. ನೀವು ಏನು ಧರಿಸುತ್ತೀರೋ ಅದು ನಿಮ್ಮ ನಿರ್ಧಾರ. ನೀವು ಏನು ಧರಿಸುತ್ತೀರೋ ಎಂಬುದನ್ನು ಬೇರೆಯವರು ನಿರ್ಧರಿಸುತ್ತಾರೆ ಎಂಬುದನ್ನು ನಾನು ಭಾವಿಸುವುದಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸದ ಸಂಸದರು, ಉತ್ತರಿಸದ ಪ್ರಧಾನಿ ಮತ್ತು ದಿಕ್ಕೆಟ್ಟ ದೇಶ

ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಪರೀಕ್ಷೆಗಳು ನಡೆಯುವ ಸಂದರ್ಭದಲ್ಲಿ ಹಿಜಾಬ್‌ ಧರಿಸಿ ಶಾಲೆಗೆ ಹೋಗಲು ಕರ್ನಾಟಕ ಸರ್ಕಾರ ಅನುಮತಿಸಿತ್ತು. ರಾಜ್ಯ ಸರ್ಕಾರ ನೀಡಿದ ಅನುಮತಿಯು 2022ರಲ್ಲಿ ಉಂಟಾದ ಹಿಜಾಬ್‌ ವಿವಾದದ ಬಗ್ಗೆ ಮತ್ತೆ ಚರ್ಚೆಗೆ ಆಸ್ಪದ ನೀಡಿತ್ತು.

2022ರ ಜನವರಿಯಲ್ಲಿ ಕರ್ನಾಟಕದ ಉಡುಪಿಯ ಪಿಯುಸಿ ಕಾಲೇಜಿನಲ್ಲಿ ಹಿಜಾಬ್‌ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಕಾಲೇಜಿನ ಏಕರೂಪ ನೀತಿಯ ಉಲ್ಲಂಘನೆಯಂದು ಕಾಲೇಜಿಗೆ ಒಳಗೆ ಬರಲು ಅನುಮತಿಸಿರಲಿಲ್ಲ. ಈ ಘಟನೆಯು ಪರ ಹಾಗೂ ವಿರೋಧದ ಬೃಹತ್ ಪ್ರತಿಭಟನೆಗೆ ಪ್ರಚೋದಿಸಿತ್ತು.

ಅಂದಿನ ಬಿಜೆಪಿ ನೇತೃತ್ವದ ಕರ್ನಾಟಕ ಸರ್ಕಾರ ಕೂಡ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿ ಆದೇಶ ಹೊರಡಿಸಿತ್ತು. ರಾಜ್ಯ ಹೈಕೋರ್ಟ್ ನಿಷೇಧವನ್ನು ಎತ್ತಿ ಹಿಡಿದಿದ್ದರೆ, ಸುಪ್ರೀಂ ಕೋರ್ಟ್ ಎರಡು ರೀತಿಯ ಭಿನ್ನ ತೀರ್ಪು ನೀಡಿತ್ತು. ಒಬ್ಬರು ನ್ಯಾಯಾಧೀಶರು ಪರವಾಗಿ ತೀರ್ಪು ನೀಡಿದರೆ, ಮತ್ತೊಬ್ಬರು ವಿರೋಧ ವ್ಯಕ್ತಪಡಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...