ಜಗದೀಪ್ ಅನುಕರಣೆ ವಿವಾದ : ರಾಹುಲ್ ಮಾಡಿದ್ದರಲ್ಲಿ ತಪ್ಪೇನಿದೆ ಎಂದ ಕಪಿಲ್ ಸಿಬಲ್

Date:

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಅನುಕರಣೆ ಮಾಡಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ವಿವಾದಕ್ಕೆ ಸಂಬಂಧಿಸಿದಂತೆ  ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪರ ಬ್ಯಾಟಿಂಗ್ ಮಾಡಿದ್ದಾರೆ.

- Advertisement -

“ಈ ವಿಡಿಯೋ ಮಾಡಿದ್ದರಲ್ಲಿ ತಪ್ಪೇನಿದೆ? ರಾಹುಲ್ ಅವರು ಘಟನೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ವಿಡಿಯೋವನ್ನು ಬಳಸಿಕೊಂಡಿಲ್ಲ. ಮಿಮಿಕ್ರಿ ಮಾಡುವವರು ಈ ಬಗ್ಗೆ ಯೋಚಿಸಬೇಕಿತ್ತು. ಇದು ರಾಜಕೀಯ ವಿಷಯವಲ್ಲ, ಏಕೆಂದರೆ ಸಾಂವಿಧಾನಿಕ ಹುದ್ದೆಗಳನ್ನು ಯಾವ ಮಟ್ಟಕ್ಕೆ ಅವಮಾನಿಸಲಾಗುತ್ತಿದೆ ಎಂಬುದು ಆತಂಕಕಾರಿಯಾದ ವಿಷಯವಾಗಿದೆ” ಎಂದು ಕಪಿಲ್ ಸಿಬಲ್ ತಮ್ಮ ಮಾಜಿ ಪಕ್ಷದ ನಾಯಕರನ್ನು ಸಮರ್ಥಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಘಟನೆಯಿಂದ ಅಸಮಾಧಾನಗೊಂಡಿದ್ದ ಜಗದೀಪ್ ಧನಕರ್, ತಮ್ಮ ಉಪ ರಾಷ್ಟ್ರಪತಿ ಹುದ್ದೆಯನ್ನು ಅವಮಾನಿಸಿದ ವಿಪಕ್ಷಗಳ ನಾಯಕರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು. ಇದು ತಮ್ಮನ್ನು ಮಾತ್ರವಲ್ಲ ತಮ್ಮ ಜಾಟ್‌ ಸಮುದಾಯ ಹಾಗೂ ತಮ್ಮಂತೆ ರೈತ ಸಮುದಾಯದಿಂದ ಬಂದವರಿಗೆ ಅವಮಾನ ಮಾಡಲಾಗುತ್ತಿದೆ ಎಂದಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

ಚಳಿಗಾಲದ ಅಧಿವೇಶನದಲ್ಲಿ ಅಶಿಸ್ತಿನ ವರ್ತನೆಯಿಂದ ಅಮಾನತ್ತಾದ ವಿಪಕ್ಷಗಳ ಸಂಸದರು ಸಂಸತ್ತಿನ ದ್ವಾರದ ಮುಂದೆ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಅನುಕರಣೆ ಮಾಡಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದರು.

ಕಲ್ಯಾಣ್ ಬ್ಯಾನರ್ಜಿ ಮತ್ತೆ ಸಮರ್ಥನೆ

ತಾವು ಮಿಮಿಕ್ರಿ ಮಾಡಿರುವುದನ್ನು ಮತ್ತೆ ಸಮರ್ಥನೆ ಮಾಡಿಕೊಂಡಿರುವ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ, “ಅನುಕರಣೆಯು ಕಲಾ ರೂಪವಾಗಿದ್ದು, ಇದನ್ನು ಸಾವಿರ ಬಾರಿಯೂ ಬೇಕಾದರೆ ಮಾಡುತ್ತೇನೆ. ಇದು ನನ್ನ ಮೂಲಭೂತ ಹಕ್ಕು. ನಾನು ಮಿಮಿಕ್ರಿಯನ್ನು ಮಾಡುತ್ತಲೇ ಇರುತ್ತೇನೆ. ಸಾವಿರಾರು ಬಾರಿಯು ಬೇಕಾದರೂ ಮಾಡುತ್ತೇನೆ. ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುವ ಎಲ್ಲ ಮೂಲಭೂತ ಹಕ್ಕುಗಳು ನನಗಿವೆ. ನನ್ನನ್ನು ಜೈಲಿಗೆ ತಳ್ಳಿದರೂ ನಾನು ಹಿಂದೆ ಸರಿಯುವುದಿಲ್ಲ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...