ಪೊಲೀಸ್ ಅಧಿಕಾರಿಯಂತೆ ನಟಿಸಿ ಕೇರಳ ಪೊಲೀಸರ ಬಳಿಯೇ ಹಣ ಕೇಳಿದ ವಾಟ್ಸಾಪ್ ವಂಚಕ

Date:

ತಾನು ಪೊಲೀಸ್ ಅಧಿಕಾರಿಯಂತೆ ನಟಿಸಿ ನಕಲಿ ವಾಟ್ಸಾಪ್ ಖಾತೆಯ ಮೂಲಕ ಪೊಲೀಸರನ್ನೇ ವಂಚಿಸಲು ಯತ್ನಿಸಿದ ವಾಟ್ಸಾಪ್ ವಂಚಕ ಸಿಕ್ಕಿಬಿದ್ದಿದ್ದಾನೆ. ದಕ್ಷಿಣ ಕೇರಳ ಜಿಲ್ಲೆಯಲ್ಲಿ ಜಿಲ್ಲಾ ಪೊಲೀಸ್ ಮುಖ್ಯಸ್ಥರಂತೆ ನಟಿಸಿದ ಈ ವಂಚಕನ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಕೊಲ್ಲಂ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಕೊಲ್ಲಂ ಗ್ರಾಮೀಣ ಪೊಲೀಸರ ಹಲವಾರು ಅಧಿಕಾರಿಗಳಿಗೆ ಕಳೆದ ವಾರ +9779702927435 ಎಂಬ ವಾಟ್ಸಾಪ್ ಸಂಖ್ಯೆಯಿಂದ ಸಂದೇಶಗಳು ಬಂದಿವೆ. ಜಿಲ್ಲಾ ಪೊಲೀಸ್ ಮುಖ್ಯಸ್ಥ ವಿಶು ಪ್ರತೀಪ್ ಟಿಕೆ ಅವರ ಚಿತ್ರವನ್ನು ಪ್ರೊಫೈಲ್‌ನಲ್ಲಿ ಹೊಂದಿದ್ದ ವಾಟ್ಸಾಪ್‌ ಸಂಖ್ಯೆಯಿಂದ ಹಲವು ಪೊಲೀಸರಿಗೆ ಸಂದೇಶ ಬಂದಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಸರ್ಕಾರಿ ಅಧಿಕಾರಿ ಸೋಗಿನಲ್ಲಿ ಮದುವೆ ನೆಪದಲ್ಲಿ 50 ಮಹಿಳೆಯರಿಗೆ ವಂಚನೆ; ಆರೋಪಿ ಬಂಧನ

“ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ಮೆಸೇಜ್ ಮಾಡಿದ ವಂಚಕನು ತುರ್ತಾಗಿ 40 ಸಾವಿರ ರೂಪಾಯಿ ವರ್ಗಾವಣೆ ಮಾಡುವಂತೆ ಕೇಳಿಕೊಂಡಿದ್ದಾನೆ. ರಾಜ್ಯಾದ್ಯಂತ ವರದಿಯಾದ ಇದೇ ರೀತಿಯ ಸೈಬರ್ ವಂಚನೆಗಳ ಬಗ್ಗೆ ತಿಳಿದಿದ್ದ ಅಧಿಕಾರಿಗಳು ತಕ್ಷಣ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಯಾರೂ ಹಣ ಕಳೆದುಕೊಂಡಿಲ್ಲ” ಎಂದು ಪೊಲೀಸ್ ಅಧಿಕಾರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ವಂಚಕನು ನವದೆಹಲಿಯ ಸಾಂಗೇಟ್‌ನಲ್ಲಿರುವ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲು ಕೇಳಿಕೊಂಡಿದ್ದಾನೆ. ಸದ್ಯ ಆತನ ಇತರೆ ವಂಚನೆಗಳ ಬಗ್ಗೆ ತನಿಖೆ ನಡೆಯುತ್ತಿದೆ. ಕೇರಳದಲ್ಲಿ ಇತ್ತೀಚೆಗೆ ಇದೇ ರೀತಿಯ ಹಲವು ವಂಚನೆಗಳು ನಡೆದಿದೆ. ವಂಚಕರು ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು ಅಥವಾ ಉದ್ಯಮಿಗಳಾಗಿ ನಟಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...