ಚುನಾವಣಾ ಬಾಂಡ್ ಅಂಕಿಅಂಶ ಸೂಕ್ತ ಸಮಯಕ್ಕೆ ಬಹಿರಂಗ: ಮುಖ್ಯ ಚುನಾವಣಾ ಆಯುಕ್ತ

Date:

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿರುವ ರಾಜಕೀಯ ಪಕ್ಷಗಳ ಚುನಾವಣಾ ಬಾಂಡ್‌ಗಳ ಅಂಕಿಅಂಶವನ್ನು ಸೂಕ್ತ ಸಮಯಕ್ಕೆ ಬಹಿರಂಗಪಡಿಸುವುದಾಗಿ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

- Advertisement -

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್, “ ನಾನು ಅಂಕಿಅಂಶಗಳನ್ನು ಪರಿಶೀಲಿಸಿ ಸೂಕ್ತ ಸಮಯಕ್ಕೆ ಬಹಿರಂಗ ಪಡಿಸುತ್ತೇನೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಸ್ಟೇಟ್‌ ಬ್ಯಾಂಕ್ ಇಂಡಿಯಾವು ಚುನಾವಣಾ ಬಾಂಡ್‌ಗಳನ್ನು ಚುನಾವಣಾ ಆಯೋಗಕ್ಕೆ ಮಾ.12 ರಂದು ಸಲ್ಲಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರ ಗಮನ ಬೇರೆಡೆಗೆ ಸೆಳೆಯಲು ‘ಸಿಎಎ’ ಮುಂದೆ ಮಾಡಿದ ‘ಮೋಶಾ’

“ಚುನಾವಣಾ ಆಯೋಗವು ಪಾರದರ್ಶಕತೆಯ ಪರವಾಗಿದೆ. ನಾವು ಪಾರದರ್ಶಕತೆಯ ಪರವಾಗಿದ್ದೇವೆ ಎಂದು ಕೋರ್ಟ್‌ಗೆ ತಿಳಿಸಿದ್ದೇವೆ. ಆಯೋಗವು ಚುನಾವಣಾ ಪ್ರಕ್ರಿಯೆಯ ಮೇಲೆ ಏನು ಮಾಡಬೇಕು ಎಲ್ಲವನ್ನು ಕೈಗೊಳ್ಳುತ್ತದೆ. ಸಾರ್ವಜನಿಕರಿಗೆ ಹಾಗೂ ಮತದಾರರಿಗೆ ಎಲ್ಲವನ್ನು ಬಹಿರಂಗಗೊಳಿಸಲಾಗುವುದು. ಆಯೋಗವು ಸದಾ ಪಾರದರ್ಶಕತೆಯ ಪರವಾಗಿರುತ್ತದೆ.ಚುನಾವಣಾ ಬಾಂಡ್‌ಗಳ ವಿಚಾರದಲ್ಲೂ ಕೂಡ ನಾವು ಇದಕ್ಕೆ ಬದ್ಧರಾಗಿರುತ್ತೇನೆ” ಎಂದು ರಾಜೀವ್‌ ಕುಮಾರ್‌ ಹೇಳಿದರು.

ಎಸ್‌ಬಿಐ ಮುಖ್ಯಸ್ಥರು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೆಲವು ಗಂಟೆಗಳ ನಂತರ ರಾಜೀವ್‌ ಕುಮಾರ್ ಹೇಳಿಕೆ ನೀಡಿದ್ದಾರೆ. ಬಾಂಡ್‌ಗಳ ಅಂಕಿಅಂಶಗಳು ಏಪ್ರಿಲ್‌ 12 2019ರಿಂದ ಫೆ.15, 2024ರವರೆಗೆ ಒಳಗೊಂಡಿದೆ.

ಏ.1, 2019ರಿಂದ ಫೆ.15, 2024ರವರೆಗೆ ಒಟ್ಟು 22,217 ಬಾಂಡ್‌ಗಳನ್ನು ಒಳಗೊಂಡಿದೆ ಎಂದು ಎಸ್‌ಬಿಐ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...