ಲೋಕಸಭಾ ಚುನಾವಣೆಗೂ ಮುನ್ನ ಮಣಿಪುರಕ್ಕೆ ಭೇಟಿ ನೀಡಲು ಪ್ರಧಾನಿಗೆ ನಾಗರಿಕ ಸಂಘಟನೆಗಳ ಆಗ್ರಹ

Date:

ಮಣಿಪುರದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಲ್ಲಿನ ನಾಗರಿಕ ಸಂಘ ಸಂಸ್ಥೆಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದವು.

- Advertisement -

ಈ ಸಂದರ್ಭದಲ್ಲಿ ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರಕ್ಕೆ ಲೋಕಸಭಾ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲು ಸಂಸತ್ತಿನಲ್ಲಿ ಕಾಂಗ್ರೆಸ್ ಒತ್ತಾಯಿಸುವಂತೆ ಸಂಘಟನೆಗಳು ಒತ್ತಾಯಿಸಿದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಯುವಕರು, ನಾಗರಿಕ ಸಂಘಸಂಸ್ಥೆಯ ಸದಸ್ಯರು ಹಾಗೂ ಸಮುದಾಯ ಸಂಘಟನೆಗಳು ರಾಹುಲ್‌ ಗಾಂಧಿಯವರನ್ನು ಭೇಟಿ ಮಾಡಿ ಕಳೆದ ಎಂಟು ತಿಂಗಳಿಂದ ಭೇಟಿ ಮಾಡದ ಪ್ರಧಾನಿಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದರು ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾದ ಜೈರಾಮ್ ರಮೇಶ್ ತಿಳಿಸಿದರು.

ಜೀವ ಮತ್ತು ಆಸ್ತಿಪಾಸ್ತಿ ನಾಶವಾಗಿರುವ ಈ ಸಂದರ್ಭದಲ್ಲಿ ನಮಗೆ ರಾಜ್ಯದಲ್ಲಿ ಸೂಕ್ಷ್ಮ, ಜವಾಬ್ದಾರಿಯುತ ಹಾಗೂ ಪಾರದರ್ಶಕ ಸರ್ಕಾರದ ಅಗತ್ಯವಿದೆ ಎಂದು ಸಂಘಟನೆಗಳು ರಾಹುಲ್‌ ಅವರಿಗೆ ತಿಳಿಸಿವೆ ಎಂದು ಜೈರಾಮ್‌ ರಮೇಶ್ ಹೇಳಿದರು.

ಈ ಮೊದಲು ಮಣಿಪುರಕ್ಕೆ ಭೇಟಿ ನೀಡುವಾಗ ಇಲ್ಲಿನ ಸಂಘ ಸಂಸ್ಥೆಗಳನ್ನು ಭೇಟಿಯಾಗುತ್ತಿದ್ದೆವು. ಆದರೆ ಈಗ ಅವರೊಂದಿಗೆ ಸಭೆ ನಡೆಸಿದ್ದೇವೆ. ಎಲ್ಲರೂ ಶಾಂತಿಗಾಗಿ ಬೇಡಿಕೆಯಿಡುತ್ತಿದ್ದಾರೆ. ಇಬ್ಬರು ರಾಜ್ಯ ಸಚಿವರು ನಾಪತ್ತೆಯಾಗಿದ್ದು, ಕೇವಲ ಆನ್‌ಲೈನ್‌ ಮೂಲಕ ಮಾತ್ರ ವ್ಯವಹರಿಸುತ್ತಿದ್ದಾರೆ. ಪ್ರಧಾನಿ ಕೂಡ ಮುಖ್ಯಮಂತ್ರಿ ಎನ್‌ ಬಿರೇನ್‌ ಸಿಂಗ್‌ ಅವರನ್ನು ಭೇಟಿ ಮಾಡದೆ ಕೇವಲ ಆನ್‌ಲೈನ್‌ನಲ್ಲಿ ಮಾತ್ರ ಸ್ವಾಗತಿಸುತ್ತಿದ್ದಾರೆ ಎಂದು ಜೈರಾಮ್ ರಮೇಶ್ ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

ಇಲ್ಲಿನ ಸಂಸದರು ಅಥವಾ ಮಣಿಪುರದ ಸಚಿವರು ಮೋದಿ ಅವರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ. ಇತ್ತೀಚಿಗೆ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಮಿಜೋರಾಂಗೆ ಪ್ರಚಾರ ಕೈಗೊಂಡಿದ ಸಂದರ್ಭದಲ್ಲಿ ಪಕ್ಕದ ಹಿಂಸಾಪೀಡಿತ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ ಎಂದು ಜೈರಾಮ್ ರಮೇಶ್ ಆಕ್ರೋಶ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ ಅವರು ಮಣಿಪುರದ ಭಾರತ್ ಜೋಡೋ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಬಿಹಾರ ಮೂಲದ ಕಿರಾಣಿ ಅಂಗಡಿಯವರು ಹಾಗೂ ಟ್ರಕ್‌ ಚಾಲಕರನ್ನು ಭೇಟಿ ಮಾಡಿ ಅವರ ಕಷ್ಟಸುಖಗಳನ್ನು ಆಲಿಸಿದರು.

ಕಾಂಗ್ರೆಸ್ ನಾಯಕ ಕನ್ನಯ್ಯ ಕುಮಾರ್ ಮಾತನಾಡಿ, ಮೇ ತಿಂಗಳಲ್ಲಿ ಮಣಿಪುರದ ಮುಖ್ಯಮಂತ್ರಿಗೆ ಹುಟ್ಟುಹಬ್ಬದ ಶುಭಾಶಯವನ್ನು ಕೋರುವುದನ್ನು ಹೊರತುಪಡಿಸಿ ಪ್ರಧಾನಿ ಇಲ್ಲಿಯವರೆಗೂ ಎಂದಿಗೂ ಮಣಿಪುರದ ಹೆಸರನ್ನು ಬಳಸಲಿಲ್ಲ. ಪ್ರಧಾನಿ ಎರಡು ಚುನಾವಣೆಗಳನ್ನು ಗೆದ್ದಿದ್ದಾರೆ. ಅವರ ಬಳಿ ವಿಮಾನವಿದೆ, ಕಾರುಗಳಿವೆ, ಎಸ್‌ಪಿಜಿ ಕಮಾಂಡೋಗಳಿದ್ದಾರೆ. ಆದರೆ ಮಣಿಪುರಕ್ಕೆ ಮಾತ್ರ ಭೇಟಿ ನೀಡಿಲ್ಲ ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...