ವಿದ್ಯಾರ್ಥಿಗಳ ಮೇಲೆ ‘ಪೆಲೆಟ್ ಗನ್’ ಬಳಕೆಗೆ ಅನುಮತಿ ಕೊಟ್ಟವರು ಯಾರು?: ಅಮಿತ್ ಶಾಗೆ ರಾಹುಲ್ ಗಾಂಧಿ ಪತ್ರ

Date:

ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಕ್ರೂರ ದಾಳಿಗೆ ಹೊಣೆಗಾರಿಕೆ ನಿಗದಿ ಮಾಡಬೇಕು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬರೆದಿದ್ದಾರೆ.

- Advertisement -

ಜುಲೈ 20ರಂದು ಸಂಸತ್ ಚಲೋ ಮೆರವಣಿಗೆ ನಡೆಸುತ್ತಿದ್ದ ವಿದ್ಯಾರ್ಥಿ-ಯುವಜನರ ಮೇಲೆ ಮಾರಕ ‘ಪೆಲೆಟ್ ಗನ್‌’ಗಳನ್ನು ಬಳಸಿ ದಾಳಿ ಮಾಡಿರುವುದು ಅತ್ಯಂತ ಆಘಾತಕಾರಿ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. “19 ವರ್ಷದ ವಿದ್ಯಾರ್ಥಿಯೊಬ್ಬ ತೀವ್ರ ನೋವಿನಿಂದ ಬಳಲುತ್ತಿದ್ದು, ಪೆಲೆಟ್ ಗನ್ ಗುಂಡು ತಗಲಿದ ಪರಿಣಾಮ ಆತ ಕಣ್ಣಿನ ದೃಷ್ಟಿ ಕಳೆದುಕೊಳ್ಳುವ ಹಂತದಲ್ಲಿದ್ದಾನೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಪ್ರಜಾಪ್ರಭುತ್ವದ ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ದೆಹಲಿಯಲ್ಲಿ ನಿಯೋಜನೆಗೊಂಡಿರುವ ಭದ್ರತಾ ಪಡೆಗಳು ನಿಮ್ಮ (ಅಮಿತ್ ಶಾ) ಜವಾಬ್ದಾರಿಗೇ ಬರುತ್ತವೆ, ಆದ್ದರಿಂದ ನಾನು ನಿಮ್ಮನ್ನು ಕೇಳುತ್ತಿದ್ದೇನೆ: 1. ಗೃಹ ಸಚಿವರಾಗಿ, ವಿದ್ಯಾರ್ಥಿಗಳ ವಿರುದ್ಧ ಪೆಲೆಟ್ ಗನ್‌ಗಳು ಸೇರಿದಂತೆ ಮಾರಕ ಬಲಪ್ರಯೋಗಕ್ಕೆ ನೀವು ಅನುಮತಿ ನೀಡಿದ್ದೀರಾ? ನೀಡದಿದ್ದರೆ, ಅನುಮತಿ ನೀಡಿದವರು ಯಾರು? 2. ಪ್ರತಿಭಟನಾಕಾರರ ಮೇಲೆ ಲಾಠಿ ಬೀಸುತ್ತಿರುವ ಸಾಮಾನ್ಯ ಉಡುಪಿನ ವ್ಯಕ್ತಿಗಳು ಪೊಲೀಸ್ ಸಿಬ್ಬಂದಿಯೋ ಅಥವಾ ಸ್ವಯಂಸೇವಕರೋ? ಅವರನ್ನು ನಿಯೋಜಿಸಲು ಅಧಿಕಾರ ನೀಡಿದವರು ಯಾರು” ಎಂದು ರಾಹುಲ್ ಗಾಂಧಿ ಪತ್ರದಲ್ಲಿ ಪ್ರಶ್ನಿಸಿದ್ದಾರೆ.

“ಸಂಭಾಷಣೆ ಮತ್ತು ಮಾತುಕತೆಯ ಮೂಲಕ ಪ್ರತಿಭಟನಾಕಾರರ ಕುಂದುಕೊರತೆಗಳನ್ನು ಪರಿಹರಿಸುವುದು ಮತ್ತು ಅವರನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಯಾವುದೇ ಪ್ರಜಾಪ್ರಭುತ್ವದಲ್ಲಿ ಶಾಂತಿಯುತ ಪ್ರತಿಭಟನೆ ಅತ್ಯಂತ ಮುಖ್ಯವಾದದ್ದು. ಇಂತಹ ಕಠೋರ ಹಿಂಸಾಚಾರವು ಪ್ರಜಾಸತ್ತಾತ್ಮಕ ನಿಯಮಗಳನ್ನು ಧ್ವಂಸಗೊಳಿಸಿದ್ದು, ಇಡೀ ದೇಶವನ್ನು ಆಕ್ರೋಶಗೊಳಿಸಿದೆ. ದೇಶದ ಭವಿಷ್ಯವಾಗಿರುವ ಯುವಜನರು ಮತ್ತು ವಿದ್ಯಾರ್ಥಿಗಳು ಉತ್ತರ ಮತ್ತು ಹೊಣೆಗಾರಿಕೆಯನ್ನು ಕೇಳುತ್ತಿದ್ದಾರೆ. ಅವರ ಧ್ವನಿಯನ್ನು ಆಲಿಸಲೇಬೇಕು” ಎಂದು ರಾಹುಲ್‌ ಗಾಂಧಿ ಪತ್ರದಲ್ಲಿ ಬರೆದಿದ್ದಾರೆ.

ಇದಕ್ಕೂ ಮುನ್ನ, ಶನಿವಾರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಯುವಕನೊಬ್ಬನ ವಿಡಿಯೋವನ್ನು ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ,”ಸಾಹಿಲ್ ಕೈಯಲ್ಲಿ ತ್ರಿವರ್ಣ ಧ್ವಜ ಹಿಡಿದು, ಕೇವಲ ಪಾರದರ್ಶಕ ಪರೀಕ್ಷೆ ಮತ್ತು ತನ್ನ ಕಠಿಣ ಶ್ರಮಕ್ಕೆ ತಕ್ಕ ಫಲವನ್ನು ಮಾತ್ರ ಕೇಳುತ್ತಿದ್ದರು. ಆದರೆ, ಪೊಲೀಸರು ಬಂದೂಕು ಎತ್ತಿ ಪೆಲೆಟ್ ಹಾರಿಸಿ ಆತನನ್ನು ತೀವ್ರವಾಗಿ ಗಾಯಗೊಳಿಸಿದ್ದಾರೆ. ಇದು ಬ್ರಿಟಿಷರ ದೌರ್ಜನ್ಯವಲ್ಲ, ಸ್ವತಂತ್ರ ಭಾರತದಲ್ಲಿ ಮೋದಿ ಸರ್ಕಾರದ ಕ್ರೌರ್ಯ. ಇಲ್ಲಿ ಹಕ್ಕುಗಳನ್ನು ಕೇಳುವ ನಿರಪರಾಧಿ ವಿದ್ಯಾರ್ಥಿಗಳಿಗೆ ನ್ಯಾಯದ ಬದಲು ಪೆಲೆಟ್ ಗುಂಡುಗಳ ಹೊಡೆತಗಳು ಸಿಗುತ್ತಿವೆ,” ಎಂದು ಪೋಸ್ಟ್ ಮಾಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ ಕರೆಘಂಟೆಯೇ?

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ...

ಬೀದರ್‌ | ನ.1ರಂದು ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ

ಬೀದರ್‌ ತಾಲ್ಲೂಕಿನ ಅತಿವಾಳ ಸಮೀಪ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು...

ಬೀದರ್‌ | ವಾಲ್ಮೀಕಿ ರಾಮಾಯಣ ಮಾನವ ಸಂಬಂಧಗಳ ಮೌಲ್ಯ ಸಾರುತ್ತದೆ: ನಾ.ಗೀತಾಚಾರ್ಯ

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ಮಾನವ ಸಂಬಂಧಗಳ ಮಹತ್ವ, ಕುಟುಂಬದ ಜವಾಬ್ದಾರಿ,...