ಕೇಜ್ರಿವಾಲ್ ವಿರುದ್ಧದ ಅಬಕಾರಿ ನೀತಿ ಪ್ರಕರಣ ವಿಚಾರಣೆ ನಡೆಸಲಿರುವ ನ್ಯಾ. ಮನೋಜ್ ಜೈನ್ ಯಾರು?

Date:

ಸಾಕಷ್ಟು ವಿವಾದಗಳ ಬಳಿಕ ದೆಹಲಿ ಅಬಕಾರಿ ನೀತಿ ಪ್ರಕರಣದಿಂದ ಆರೋಪಿಗಳ ಖುಲಾಸೆ ಸಂಬಂಧಿತ ವಿಚಾರಣೆಯಿಂದ ಕೊನೆಗೂ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಹಿಂದೆ ಸರಿದಿದ್ದಾರೆ. ಇದಾದ ಬಳಿಕ ಈಗ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಮನೋಜ್ ಜೈನ್ ಅವರು ವಿಚಾರಣೆ ನಡೆಸಲಿದ್ದಾರೆ.

- Advertisement -

ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಇತರ ಆರೋಪಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿ ವಿಚಾರಣೆ ಇದಾಗಿದೆ. ಇನ್ನು ಈ ಪ್ರಕರಣದಲ್ಲಿ ಪ್ರತ್ಯೇಕವಾಗಿ ಕ್ರಿಮಿನಲ್ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ರವೀಂದರ್ ದುಡೇಜಾ ಅವರ ವಿಭಾಗೀಯ ಪೀಠಕ್ಕೆ ವಹಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ‘ಆರ್‌ಎಸ್‌ಎಸ್‌-ಬಿಜೆಪಿ ನಂಟು, ನ್ಯಾಯ ಸಿಗುವ ನಂಬಿಕೆ ಇಲ್ಲ’: ನ್ಯಾಯಮೂರ್ತಿಗಳ ಬದಲಾವಣೆಗೆ ಕೇಜ್ರಿವಾಲ್ ಪಟ್ಟು

ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ವಿಚಾರಣೆ ಕೈಗೆತ್ತಿಕೊಂಡ ಆರಂಭದಲ್ಲಿಯೇ ತಮ್ಮ ಪರವಾಗಿ ತಾವೇ ವಾದ ಆರಂಭಿಸಿದ ಕೇಜ್ರಿವಾಲ್, “ನೀವು ಆರ್‌ಎಸ್‌ಎಸ್ ಮತ್ತು ಬಿಜೆಪಿಯೊಂದಿಗೆ ನೇರ ಸಂಬಂಧ ಹೊಂದಿರುವ ‘ಅಧಿವಕ್ತ ಪರಿಷದ್’ ಕಾರ್ಯಕ್ರಮಗಳಲ್ಲಿ ನಾಲ್ಕು ಬಾರಿ ಭಾಗವಹಿಸಿದ್ದೀರಿ. ಹೀಗಾಗಿ ಈ ನ್ಯಾಯಾಲಯದಲ್ಲಿ ನನಗೆ ಸರಿಯಾದ ನ್ಯಾಯ ಸಿಗುವ ನಂಬಿಕೆ ಇಲ್ಲ” ಎಂದು ನೇರವಾಗಿ ಹೇಳಿದ್ದರು. ಆದರೆ ಆರಂಭದಲ್ಲಿ ನ್ಯಾ. ಸ್ವರ್ಣ ಕಾಂತ ವಿಚಾರಣೆಯಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದರು. ಆದರೆ ಸಾಕಷ್ಟು ವಿವಾದಗಳ ಬಳಿಕ ಗುರುವಾರ ವಿಚಾರಣೆಯಿಂದ ಹಿಂದೆ ಸರಿದರು. ಇದೀಗ ನ್ಯಾಯಮೂರ್ತಿ ಮನೋಜ್ ಜೈನ್ ವಿಚಾರಣೆ ಮುನ್ನಡೆಸಲಿದ್ದಾರೆ.

ನ್ಯಾಯಮೂರ್ತಿ ಮನೋಜ್ ಜೈನ್ ಯಾರು?

1964 ಡಿಸೆಂಬರ್ 28ರಂದು ಜನಿಸಿದ ನ್ಯಾಯಮೂರ್ತಿ ಮನೋಜ್ ಜೈನ್ ಅವರು, ಹರಿಯಾಣದ ರೋಹ್ಟಕ್‌ನಲ್ಲಿರುವ ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಿಂದ ಪದವಿ ಪಡೆದರು. 1986ರಲ್ಲಿ ಚಂಡೀಗಢದ ಪಂಜಾಬ್ ವಿಶ್ವವಿದ್ಯಾಲಯದಿಂದ ಅತ್ಯುನ್ನತ ಶ್ರೇಣಿಯೊಂದಿಗೆ ಎಲ್‌ಎಲ್‌ಬಿ ಪದವಿ ಪಡೆದರು.

1992ರಲ್ಲಿ, ಅವರು ದೆಹಲಿ ನ್ಯಾಯಾಂಗ ಸೇವೆಗೆ ಸೇರಿದರು. 2003ರಲ್ಲಿ ದೆಹಲಿ ಉನ್ನತ ನ್ಯಾಯಾಂಗ ಸೇವೆಗೆ ಬಡ್ತಿ ಪಡೆದರು. ಸಿವಿಲ್, ಕ್ರಿಮಿನಲ್ ಮತ್ತು ಕುಟುಂಬ ಕಾನೂನು ಇವರ ವ್ಯಾಪ್ತಿಯಾಗಿದೆ. ಕೆನಡಾದ ಹ್ಯಾಲಿಫ್ಯಾಕ್ಸ್‌ನಲ್ಲಿರುವ ಕಾಮನ್‌ವೆಲ್ತ್ ಜುಡಿಷಿಯಲ್ ಎಜುಕೇಶನ್ ಇನ್‌ಸ್ಟಿಟ್ಯೂಟ್‌ನ (Commonwealth Judicial Education Institute) ಫೆಲೋ ಕೂಡ ಆಗಿದ್ದಾರೆ.

ಬಡ್ತಿ ಪಡೆಯುವ ಮೊದಲು ದೆಹಲಿ ನ್ಯಾಯಾಂಗ ಅಕಾಡೆಮಿಯಲ್ಲಿ ನಿರ್ದೇಶಕರಾಗಿ (ಶೈಕ್ಷಣಿಕ) ಮತ್ತು ದೆಹಲಿ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಆಗಿ ಸೇವೆ ಸಲ್ಲಿಸಿದ್ದರು. ದೆಹಲಿ ಹೈಕೋರ್ಟ್‌ನ ಅಧಿಕೃತ ಪುಟದ ವರದಿಗಳ ಪ್ರಕಾರ, 2023ರ ಮೇ 1ರಂದು ದೆಹಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾದರು. 2024ರ ಜುಲೈ 22ರಂದು ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಪ್ರಮಾನ ವಚನ ಸ್ವೀಕರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...