ಬೆಳಗಾವಿ ಸೊಸೆ ಸೋಫಿಯಾ ಖುರೇಶಿಯವರನ್ನು ಬೈದ ವಿಜಯ್ ಶಾ ಯಾರು?

Date:

ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಸಚಿವ ವಿಜಯ್ ಶಾ ಕರ್ನಲ್ ಸೋಫಿಯಾ ಖುರೇಶಿ ವಿರುದ್ಧ ನಿಂದನಾತ್ಮಕ ಟೀಕೆ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ನಿಂದ ತೀವ್ರ ತರಾಟೆಗೆ ಒಳಗಾಗಿದ್ದಾರೆ.

- Advertisement -

ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ವಿಜಯ್ ಶಾ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕರ್ನಲ್ ಸೋಫಿಯಾ ಖುರೇಶಿ ಭಯೋತ್ಪಾದಕರ ಸೋದರಿ ಎಂಬ ಟೀಕೆಯನ್ನು ಮಧ್ಯಪ್ರದೇಶ ಹೈಕೋರ್ಟ್ (ಸ್ವಯಂಪ್ರೇರಿತವಾಗಿ ಗಮನಿಸಿ) ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ಆದೇಶಿಸಿತ್ತು.

ಈ ಬೆಳವಣಿಗೆಯ ನಂತರ ವಿಜಯ್ ಶಾ ಕ್ಷಮೆ ಯಾಚಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ವಿಜಯ್ ಶಾ ವಿರುದ್ಧ ಆಕ್ರೋಶ ಎದ್ದಷ್ಟೇ ಪ್ರಮಾಣದಲ್ಲಿ ಅವರನ್ನು ಮೋದಿ ಅಭಿಮಾನಿಗಳು ಬೆಂಬಲಿಸಿರುವುದೂ ಉಂಟು.

ಮಧ್ಯಪ್ರದೇಶ ಹೈಕೋರ್ಟ್ ಅವರ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಮಧ್ಯಪ್ರದೇಶ ಪೊಲೀಸರ ಮೇಲೆ ಕಠಿಣ ಧೋರಣೆ ತಳೆದಿದ್ದು ತನಿಖೆಯನ್ನು ಸ್ವತಃ ಮೇಲ್ವಿಚಾರಣೆ ಮಾಡುವುದಾಗಿ ಸಾರಿದೆ.

ಸುಪ್ರೀಂ ಕೋರ್ಟ್ ಏನು ಹೇಳಿತು?

ಮಧ್ಯಪ್ರದೇಶ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟು ಗುರುವಾರ ನಿರಾಕರಿಸಿತು. ಮುಖ್ಯ “ಎಂತಹ  ಹೇಳಿಕೆ ನೀಡುತ್ತಿದ್ದೀರಿ? ಸಂವಿಧಾನಾತ್ಮಕ ಹುದ್ದೆಯಲ್ಲಿರುವ ವ್ಯಕ್ತಿಯಿಂದ ಮರ್ಯಾದೆ ಘನತೆಯನ್ನು ನಿರೀಕ್ಷಿಸಲಾಗುತ್ತದೆ. ದೇಶವು ಇಂತಹ ಗಂಭೀರ ಸ್ಥಿತಿಯನ್ನು ಎದುರಿಸುತ್ತಿರುವಾಗ ಪ್ರತಿಯೊಂದು ಪದವನ್ನು ಜವಾಬ್ದಾರಿ ಅರಿತು ಆಡಬೇಕು,” ಎಂದು ನ್ಯಾಯಮೂರ್ತಿ ಬಿ ಆರ್ ಗವಾಯಿ ಹೇಳಿದರು. ವಿಚಾರಣೆ ಶುಕ್ರವಾರ ಮುಂದುವರೆಯಲಿದೆ.

ವಿಜಯ್ ಶಾ ಯಾರು?

ವಿಜಯ್ ಶಾ ಅವರ ಪೂರ್ಣ ಹೆಸರು ಕುಂವರ್ ವಿಜಯ್ ಶಾ. ಎಂಟು ಬಾರಿ ಶಾಸಕರಾಗಿದ್ದಾರೆ. ಮೊದಲ ಸಲ 1990ರಲ್ಲಿ ಬಿಜೆಪಿ ಟಿಕೆಟ್‌ನಿಂದ ಗೆದ್ದರು. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಹರಸೂದ್ ವಿಧಾನಸಭಾ ಕ್ಷೇತ್ರ ಗೋಂಡ್ ಆದಿವಾಸಿ ಬಾಹುಳ್ಯ ಕ್ಷೇತ್ರ. 1993, 1998, 2003, 2008, 2013, 2018 ಮತ್ತು 2023 ರಲ್ಲಿ ವಿಜಯ್ ಶಾ ಇಲ್ಲಿಂದ ಗೆದ್ದಿದ್ದಾರೆ.

ವಿಜಯ್ ಶಾ ಅವರು ಗೋಂಡ್ ಆದಿವಾಸಿ ರಾಜ ಕುಟುಂಬದಿಂದ ಬಂದವರು ಮತ್ತು ಖುದ್ದು ಆದಿವಾಸಿ. ಈ ಹಿಂದೆ ಅಂದಿನ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರ ಪತ್ನಿಯ ಬಗ್ಗೆ ದ್ವಂದ್ವಾರ್ಥದ ಟೀಕೆ ಮಾಡಿ ನಾಲ್ಕು ತಿಂಗಳ ಕಾಲ ಸಚಿವ ಸ್ಥಾನ ಕಳೆದುಕೊಂಡಿದ್ದರು.

“ಒಮ್ಮೆ ಆದಿವಾಸಿ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ, ಅವರಿಗೆ ತಲಾ ಎರಡು ಟೀ-ಶರ್ಟ್‌ಗಳನ್ನು ನೀಡಬೇಕು” ಎಂಬ ಅಸಭ್ಯ ಟೀಕೆಗಾಗಿ ಆಗಲೂ ತೀವ್ರ ಟೀಕೆ ಎದುರಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...