ಪ್ಯಾನ್ 2.0 | ಏನಿದು, ಯಾರು ಅರ್ಜಿ ಸಲ್ಲಿಸಬೇಕು? ಸಂಪೂರ್ಣ ವಿವರ

Date:

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿತಯು (ಸಿಸಿಇಎ) ನವೆಂಬರ್ 25ರಂದು ಪ್ಯಾನ್ 2.0 ಅನ್ನು ಅನುಮೋದಿಸಿದೆ. ತೆರಿಗೆದಾರರಿಗೆ ಆಗುವ ಅನುಕೂಲವನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ಯಾನ್/ ಟ್ಯಾನ್ ವ್ಯವಸ್ಥೆಯನ್ನು ಕೂಲಂಕಷವಾಗಿ ಪರಿಶೀಲಿಸುವ ಗುರಿಯನ್ನು ಈ ಯೋಜನೆ ಹೊಂದಿದೆ. ಇದಕ್ಕೆ ಸರ್ಕಾರವು 1,435 ಕೋಟಿ ರೂಪಾಯಿ ನಿಗದಿಪಡಿಸಿದೆ ಎಂದು ತಿಳಿಸಿದೆ.

- Advertisement -

ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, “ಪಾನ್ ಕಾರ್ಡ್ ನಮ್ಮ ಜೀವನದ ಭಾಗವಾಗಿದ್ದು, ಮಧ್ಯಮ ವರ್ಗ ಮತ್ತು ಸಣ್ಣ ಉದ್ಯಮಗಳಿಗೆ ಮುಖ್ಯವಾಗಿದೆ. ಈ ಕಾರ್ಡ್ ಅನ್ನು ಈಗ ಅಪ್‌ಗ್ರೇಡ್ ಮಾಡಲಾಗಿದೆ. ಇಂದು ಪ್ಯಾನ್ 2.0 ಅನ್ನು ಅನುಮೋದಿಸಲಾಗಿದೆ. ಪ್ರಸ್ತುತ ಅಸ್ತಿತ್ವದಲ್ಲಿರುವ ಪ್ಯಾನ್ ವ್ಯವಸ್ಥೆಯನ್ನು ಅಪ್‌ಡೇಟ್ ಮಾಡಲಾಗುವುದು ಮತ್ತು ಡಿಜಿಟಲ್‌ಗೆ ವರ್ಗಾಯಿಸಲಾಗುವುದು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಆಧಾರ್‌ – ಪ್ಯಾನ್ ಜೋಡಣೆಗೆ ದುಬಾರಿ ಶುಲ್ಕ; ನಿರ್ಮಲಾ ಸೀತಾರಾಮನ್ ಸಮರ್ಥನೆ

ಏನಿದು ಪ್ಯಾನ್ 2.0?

ಪ್ಯಾನ್ 2.0 ಎಂಬುದು ಶಾಶ್ವತ ಖಾತೆ ಸಂಖ್ಯೆ (ಪ್ಯಾನ್) ವ್ಯವಸ್ಥೆಯ ಅಪ್‌ಗ್ರೇಡ್ ಆಗಿದೆ. ತೆರಿಗೆದಾರರಿಗೆ ತಡೆರಹಿತ, ಡಿಜಿಟಲ್ ಸೇವೆ ನೀಡುವ ಗುರಿಯನ್ನು ಹೊಂದಿದೆ. ಪ್ಯಾನ್ ಕಾರ್ಡ್ ಅನ್ನು ಡಿಜಿಟಲೀಕರಣಗೊಳಿಸುವ, ಕಾಗದರಹಿತ ವ್ಯವಸ್ಥೆಗೆ ಒಗ್ಗಿಸಿಕೊಳ್ಳುವ ಯೋಜನೆ ಇದಾಗಿದೆ. ಇದು ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಯಕ್ರಮದ ಭಾಗ ಎಂದು ಸರ್ಕಾರ ಹೇಳಿಕೊಂಡಿದೆ. ಡೇಟಾ ರಕ್ಷಣೆಗೆ ಸೈಬರ್ ಸುರಕ್ಷತೆಯೂ ಇದೆ ಎಂದು ಹೇಳಿಕೊಂಡಿದೆ.

ಜನರು ಪ್ಯಾನ್ ಬದಲಾಯಿಸಬೇಕೆ?

ಪ್ಯಾನ್ 2.0 ಬಂದ ಕಾರಣ ಜನರು ತಮ್ಮ ಪ್ಯಾನ್ ಬದಲಾಯಿಸಿಕೊಳ್ಳಬೇಕಾಗಿಲ್ಲ. ಮುಂಬರುವ ಪ್ಯಾನ್ 2.0 ಅನ್ನು ಪ್ರಸ್ತುತ ಪ್ಯಾನ್ ವ್ಯವಸ್ಥೆಗೆ ಅಪ್‌ಗ್ರೇಡ್‌ ಆಗಿ ಪರಿಚಯಿಸಲಾಗುತ್ತಿದೆ ಅಷ್ಟೆ. ಹೊಸ ಕಾರ್ಡ್‌ನಲ್ಲಿ ಸ್ಕ್ಯಾನಿಂಗ್‌ಗಾಗಿ ಕ್ಯೂಆರ್‌ ಕೋಡ್ ಕೂಡಾ ಹೊಂದಿರುತ್ತದೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ. ನೀವು ನಿಮ್ಮ ಪ್ಯಾನ್ ಕಾರ್ಡ್ ಅಪ್‌ಗ್ರೇಡ್ ಮಾಡಲು ಬಯಸಿದರೆ ಯಾವುದೇ ಶುಲ್ಕವಿಲ್ಲದೆ ಅಪ್‌ಗ್ರೇಡ್ ಮಾಡಬಹುದು ಎಂದು ಸರ್ಕಾರ ಹೇಳಿದೆ. ಹೊಸದಾಗಿ ಪ್ಯಾನ್ ಕಾರ್ಡ್ ಮಾಡಿಸುವವರು ಈ ನೂತನ ಅಪ್‌ಗ್ರೇಡ್ ಮಾದರಿ ಪ್ಯಾನ್ 2.0 ಪಡೆಯುತ್ತಾರೆ.

ಕೇಂದ್ರ ಸರ್ಕಾರವು ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಹೀಗೆ ಹಲವು ದಾಖಲೆಗಳ ಅಪ್‌ಡೇಟ್ ವಿಷಯವಾಗಿ ಈಗಾಗಲೇ ವಿಪಕ್ಷಗಳ ತರಾಟೆಗೆ ಗುರಿಯಾಗಿದೆ. ಪ್ಯಾನ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡದವರು ಲಿಂಕ್ ಮಾಡಿಸಿಕೊಳ್ಳಬೇಕಾದರೆ ಕಳೆದ ವರ್ಷದಿಂದ ಒಂದು ಸಾವಿರ ರೂಪಾಯಿ ದಂಡ ತೆರಬೇಕಾಗಿದೆ. ಈಗ ಪ್ಯಾನ್ 2.0 ಹೆಸರಲ್ಲಿ ಪ್ಯಾನ್ ಅಪ್‌ಗ್ರೇಡ್ ಎಂದು ಹೇಳಿ ತೆರಿಗೆದಾರರನ್ನು ಇಕ್ಕಟ್ಟಿಗೆ ಸಿಲುಕಿಸದಿರಲಿ ಎಂಬುದು ನೆಟ್ಟಿಗರ ಅಭಿಪ್ರಾಯವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...