ಎಲ್‌ಪಿಜಿ ಬೆಲೆ ಏರಿಕೆ | ಬಿಜೆಪಿ ನಾಯಕರು ಈಗ ಏಕೆ ಪ್ರತಿಭಟಿಸುತ್ತಿಲ್ಲ: ಕಾಂಗ್ರೆಸ್ ಪ್ರಶ್ನೆ

Date:

ದೇಶೀಯ ಎಲ್‌ಪಿಜಿ ಬೆಲೆ ಏರಿಕೆ ವಿಚಾರದಲ್ಲಿ ಭಾನುವಾರ ಕಾಂಗ್ರೆಸ್, ಕೇಂದ್ರದ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಯುಎಪಿ ಸರ್ಕಾರವಿದ್ದಾಗ ಹಣದುಬ್ಬರ ವಿಚಾರದಲ್ಲಿ ಬೀದಿಗಳಿಯುತ್ತಿದ್ದ ಬಿಜೆಪಿ ನಾಯಕರು ಈಗ ಸಿಲಿಂಡರ್‌ ಹಿಡಿದು ಬೀದಿಗಿಳಿದು ಪ್ರತಿಭಟಿಸುವುದಿಲ್ಲ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

- Advertisement -

ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್, ಇರಾನ್ ಮೇಲೆ ದಾಳಿ ನಡೆಸಿದ ಬಳಿಕ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಾಗಿದೆ. ಇದಾದ ಬಳಿಕ ಜಾಗತಿಕವಾಗಿ ಎಲ್‌ಪಿಜಿ, ಇಂಧನಗಳ ಕೊರತೆ ಉಂಟಾಗಿದೆ. ದೇಶದಲ್ಲಿ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ಮುಗಿಯುವವರೆಗೂ ಇಂಧನ, ಅನಿಲ ಬೆಲೆಯನ್ನು ಏರಿಸದ ಕೇಂದ್ರ ಸರ್ಕಾರ, ಚುನಾವಣೆ ಮುಗಿದು ಫಲಿತಾಂಶವೂ ಹೊರಬಿದ್ದು, ಸರ್ಕಾರಗಳು ರಚನೆಯಾಗುತ್ತಿದ್ದಂತೆ ಇಂಧನ, ಅನಿಲ ದರವನ್ನು ಪದೇ ಪದೇ ಹೆಚ್ಚಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇದನ್ನು ಓದಿದ್ದೀರಾ? ಮತ್ತೆ ಬೆಲೆ ಏರಿಕೆ | ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 29 ರೂ. ಹೆಚ್ಚಳ

ಕಳೆದ ಮೂರು ತಿಂಗಳಲ್ಲಿ ಎರಡನೇ ಬಾರಿಗೆ ಗೃಹಬಳಕೆಯ ಎಲ್‌ಪಿಜಿ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. ಭಾನುವಾರ, ಪ್ರತಿ ಸಿಲಿಂಡರ್‌ ಬೆಲೆಯನ್ನು 29 ರೂ. ಹೆಚ್ಚಿಸಿದೆ. ಹಣದುಬ್ಬರದ ಹೊಡೆತದಿಂದ ನಲುಗುತ್ತಿರುವ ಗ್ರಾಹಕರ ಮೇಲೆ ಮತ್ತೆ ಬರೆ ಎಳೆದಿದೆ. ಈ ಹಿಂದೆ, ಮಾರ್ಚ್ 7 ರಂದು ಗೃಹಬಳಕೆ ಸಿಲಿಂಡರ್‌ಗಳ ಬೆಲೆಯನ್ನು 60 ರೂ. ಹೆಚ್ಚಿಸಲಾಗಿತ್ತು. ಈಗ 29 ರೂ. ಹೆಚ್ಚಿಸಲಾಗಿದೆ. ಬೆಲೆ ಏರಿಕೆಯಿಂದಾಗಿ ಬೆಂಗಳೂರಿನಲ್ಲಿ ದರವು 944.50 ರೂ.ಗೆ ಹೆಚ್ಚಳವಾಗಿದೆ.

ಈ ವಿಚಾರದಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, “ದೇಶೀಯ ಎಲ್‌ಪಿಜಿ ಬೆಲೆಗಳು ಗಗನಕ್ಕೇರುತ್ತಿರುವುದು ಸಾಮಾನ್ಯ ಜನರ ಅಡುಗೆಮನೆಗಳನ್ನೇ ಸುಟ್ಟುಹಾಕುವ ಬೆದರಿಕೆಯನ್ನು ಹಾಕುತ್ತಿದೆ! ಮೋದಿ ಸರ್ಕಾರ ಕಳೆದ ನಾಲ್ಕು ತಿಂಗಳುಗಳಲ್ಲಿ ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ₹89 ರಷ್ಟು ಹೆಚ್ಚಿಸಿದೆ” ಎಂದು ಹೇಳಿದ್ದಾರೆ. ಹಾಗೆಯೇ ಮೋದಿ ಸರ್ಕಾರ ಮೂರು ಪ್ರಶ್ನೆಗಳನ್ನು ಕೇಳಿದ್ದಾರೆ.

“ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ 41 ದೇಶಗಳಲ್ಲಿ ಇಂಧನ ಮೂಲಗಳನ್ನು ವೈವಿಧ್ಯಗೊಳಿಸುವ ಬಗ್ಗೆ ಮೋದಿ ಜಿ ಸಂಸತ್ತಿನಲ್ಲಿ ಹೇಳಿಕೆಗಳನ್ನು ನೀಡಿದ್ದರು. ಅದರ ಕತೆ ಏನಾಯಿತು? ಇಂದಿಗೂ ಗ್ರಾಮೀಣ ಪ್ರದೇಶಗಳಲ್ಲಿ ಎಲ್‌ಪಿಜಿ ಕೊರತೆ ಏಕೆ ಮುಂದುವರೆದಿದೆ” ಎಂದು ಪ್ರಶ್ನಿಸಿದ್ದಾರೆ.

“ಉಜ್ವಲ ಯೋಜನೆಯಡಿಯಲ್ಲಿ, 2025-26ರ ಅವಧಿಯಲ್ಲಿ 5.56 ಕೋಟಿ ಕುಟುಂಬಗಳಿಗೆ ಒಂದೇ ಒಂದು ಸಿಲಿಂಡರ್ ರೀಫಿಲ್ ಸಿಗಲಿಲ್ಲ (ಅಥವಾ ಒಂದೇ ಒಂದು ಸಿಕ್ಕಿದೆ). ಇವುಗಳಲ್ಲಿ, 3.30 ಕೋಟಿ ಕುಟುಂಬಗಳು ಒಂದೇ ಸಿಲಿಂಡರ್ ರೀಫಿಲ್ ಅನ್ನು ಪಡೆದಿಲ್ಲ. ಇದು ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಮುಂಚೆಯೇ ನಡೆದಿರುವುದು. ಇದು ಮೋದಿ ಸರ್ಕಾರದ ಲೂಟಿಯ ಫಲಿತಾಂಶವಲ್ಲವೇ” ಎಂದು ಕೇಳಿದ್ದಾರೆ.

“ಯುಪಿಎ ಅವಧಿಯಲ್ಲಿ ಮೋದಿ ಮತ್ತು ಬಿಜೆಪಿ ನಾಯಕರು ಹಣದುಬ್ಬರದ ಬಗ್ಗೆ ಗದ್ದಲ ಎಬ್ಬಿಸುತ್ತಿದ್ದರು. ಮೋದಿ ಸರ್ಕಾರ 12 ವರ್ಷಗಳಲ್ಲಿ ದೇಶೀಯ ಎಲ್‌ಪಿಜಿ ಬೆಲೆಯನ್ನು ₹530 ಹೆಚ್ಚಿಸಿದೆ ಎಂಬುದು ನಿಜವಲ್ಲವೇ? ಹಾಗಾದರೆ ಬಿಜೆಪಿ ನಾಯಕರು ಈಗ ಸಿಲಿಂಡರ್‌ಗಳೊಂದಿಗೆ ಬೀದಿಗಳಲ್ಲಿ ಏಕೆ ಕುಳಿತಿಲ್ಲ” ಎಂದು ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...