ಲೋಕಸಭೆ ಚುನಾವಣೆಗಳು ಆರಂಭವಾಗಲು ಕೆಲವು ದಿನಗಳು ಬಾಕಿ ಇರುವಾಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಏಕೆ ಬಂಧಿಸಿದ್ದೀರಿ ಎಂದು ಸುಪ್ರೀಂ ಕೋರ್ಟ್ ಇಂದು ಜಾರಿ ನಿರ್ದೇಶನಾಲಯವನ್ನು ತರಾಟೆಗೆ ತೆಗೆದುಕೊಂಡಿತು.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.
ಪ್ರಕರಣವನ್ನು ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತ ಅವರಿದ್ದ ಪೀಠವು ಈ ಸಮಯದಲ್ಲಿಯೇ ಏಕೆ ಬಂಧಿಸಲಾಗಿದೆ ಎಂಬ ಕಾರಣ ವಿವರಿಸುವಂತೆ ಪ್ರಶ್ನಿಸಿತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ಧೃತರಾಷ್ಟ್ರ ಸಿಂಡ್ರೋಮ್ ಮತ್ತು ಮೋದಿ ವಾಷಿಂಗ್ ಮಷೀನ್
ಪ್ರಕರಣದಲ್ಲಿ ನ್ಯಾಯಾಂಗ ವಿಚಾರಣೆಗೆ ತೆರಳದೆ ಅಪರಾಧ ವಿಚಾರಣೆಗಳನ್ನು ಕೈಗೆತ್ತಿಕೊಂಡಿರುವುದನ್ನು ತಿಳಿಸುವಂತೆ ಜಾರಿ ನಿರ್ದೇಶನಾಲಯವನ್ನು ಪ್ರಶ್ನಿಸಿತು.
“ಪ್ರಕರಣದಲ್ಲಿ ಇಲ್ಲಿಯವರೆಗೂ ಕ್ರಮ ಕೈಗೊಂಡಿರುವ ಬಗ್ಗೆ ದಾಖಲೆಯನ್ನು ಸಲ್ಲಿಸಿಲ್ಲ. ಇದು ಕೈಕೊಂಡಿದ್ದರೆ ಕೇಜ್ರಿವಾಲ್ ಅವರು ಹೇಗೆ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ತೋರಿಸುವಂತೆ” ಜಾರಿ ನಿರ್ದೇಶನಾಲಯ ಪರ ಹಾಜರಿದ್ದ ಸಹಾಯಕ ಸಾಲಿಟರ್ ಜನರಲ್ ಅವರಿಗೆ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಪ್ರಶ್ನಿಸಿದರು.
“ಸ್ವಾತಂತ್ರವು ತುಂಬಾ ಮುಖ್ಯವಾದದು. ಅದನ್ನು ನೀವು ನಿರಾಕರಿಸಲು ಸಾಧ್ಯವಿಲ್ಲ. ಬಂಧನಕ್ಕೆ ಸಂಬಂಧಿಸಿದಂತೆ ಪ್ರಮುಖ ಪ್ರಶ್ನೆ ಏನೆಂದರೆ ಲೋಕಸಭಾ ಚುನಾವಣೆಗಳು ಕೆಲವು ದಿನ ಇರುವ ಮುನ್ನವೇ ಬಂಧಿಸಿರುವುದರಿಂದ ಹೆಚ್ಚು ಪ್ರಾಮುಖ್ಯ ಪಡೆದುಕೊಂಡಿದೆ” ಎಂದು ಸುಪ್ರೀಂ ಕೋರ್ಟ್ ಪೀಠ ತಿಳಿಸಿತು.