ಅಣ್ಣಾಮಲೈ ರಾಜೀನಾಮೆಯಿಂದ ನಷ್ಟ ಇಲ್ಲ ಅಂತಿದ್ರೆ ನಾಯಕನ ಮನವೊಲಿಸಲು ಬಿಜೆಪಿ ಒದ್ದಾಡಿದ್ದೇಕೆ?

Date:

ಯಾವುದೇ ನಷ್ಟವಿಲ್ಲ ಎಂದು ಬಿಜೆಪಿ ಹೇಳಿದರೂ ತಮಿಳುನಾಡಿನಲ್ಲಿ ನೆಲೆಯೂರಲು ಹೆಣಗಾಡುತ್ತಿರುವ ಬಿಜೆಪಿಗೆ ಅಣ್ಣಾಮಲೈ ನಿರ್ಗಮನ ದೊಡ್ಡ ಹಿನ್ನಡೆ ಎಂಬುದು ಸತ್ಯ. ಇದೇ ಕಾರಣಕ್ಕೆ ಅಣ್ಣಾಮಲೈ ಮನವೊಲಿಸಲು ಬಿಜೆಪಿ ಸತತ ಪ್ರಯತ್ನ ಮಾಡಿದ್ದು.

- Advertisement -

ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಮತ್ತು ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಜೂನ್ 5ರಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆಯು ತಮಿಳುನಾಡಿನಲ್ಲಿ ಬಿಜೆಪಿ ಬೆಳವಣಿಗೆಗೆ ಏಟು ನೀಡಿದೆ ಎಂದು ಹಲವು ರಾಜಕೀಯ ವಿಮರ್ಶಕರು ಹೇಳಿದ್ದಾರೆ. ಇವೆಲ್ಲವುದರ ನಡುವೆ ಅಣ್ಣಾಮಲೈ ನಿರ್ಗಮನದಿಂದ ನಮಗೆ ಯಾವುದೇ ತೊಂದರೆ ಇಲ್ಲ, ನಮ್ಮದು ವಿಶ್ವದಲ್ಲೇ ಅತಿ ದೊಡ್ಡ ಪಕ್ಷ ಎಂದು ಬಿಜೆಪಿ ಹೇಳಿಕೊಂಡಿದೆ. ಅಣ್ಣಾಮಲೈ ರಾಜೀನಾಮೆಯಿಂದ ಬಿಜೆಪಿಗೆ ಯಾವುದೇ ನಷ್ಟ ಇಲ್ಲ ಆಗಲ್ಲ ಅಂತಿದ್ರೆ ನಾಯಕನ ಮನವೊಲಿಸಲು ಬಿಜೆಪಿ ಅಷ್ಟೊಂದು ಪ್ರಯತ್ನ ಪಟ್ಟಿದ್ದೇಕೆ, ಒದ್ದಾಡಿದ್ದೇಕೆ ಎಂಬ ಪ್ರಶ್ನೆ ಹುಟ್ಟುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಅಣ್ಣಾಮಲೈ 2026ರ ತಮಿಳುನಾಡು ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ಮತ್ತು ಎಐಎಡಿಎಂಕೆ ನಡುವೆ ನಡೆದ ಸೀಟು ಹಂಚಿಕೆ ಮಾತುಕತೆ ಮತ್ತು ಮೈತ್ರಿ ನಿರ್ಧಾರದ ಬಗ್ಗೆ ಅಸಮಾಧಾನ ಹೊಂದಿದ್ದರು. ರಾಜ್ಯ ಬಿಜೆಪಿ ಘಟಕದಲ್ಲಿ ತಮ್ಮ ಸೇವೆಗಳನ್ನು ಸರಿಯಾಗಿ ಬಳಸಿಕೊಳ್ಳದೆ ತಮ್ಮನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂಬ ಬೇಸರವೂ ಅವರಿಗಿತ್ತು. ಸಿದ್ಧಾಂತ ಹಾಗೂ ಕಾರ್ಯವೈಖರಿಯ ವಿಷಯಗಳಲ್ಲಿ ಭಿನ್ನಾಭಿಪ್ರಾಯವೂ ಇತ್ತು. ಹಾಗಾಗಿ ಅಣ್ಣಾಮಲೈ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

Advertisements

ಇದನ್ನು ಓದಿದ್ದೀರಾ? ಅಣ್ಣಾಮಲೈ ರಾಜೀನಾಮೆಗೆ ಬಿಜೆಪಿ ವರಿಷ್ಠರ ತಡೆ

ಇನ್ನು ಅಣ್ಣಾಮಲೈ ರಾಜೀನಾಮೆ ನೀಡುತ್ತಾರೆ ಎಂದು ತಿಳಿದ ತಕ್ಷಣ ಬಿಜೆಪಿ ಕೇಂದ್ರ ನಾಯಕತ್ವವು ಅಣ್ಣಾಮಲೈ ಅವರ ರಾಜೀನಾಮೆಯನ್ನು ತಡೆಯಲು, ಅವರನ್ನು ಬಿಜೆಪಿಯಲ್ಲೇ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನವನ್ನೂ ಮಾಡಿತ್ತು. ದ್ರಾವಿಡ ರಾಜಕಾರಣದ ಭದ್ರಕೋಟೆಯಾದ ತಮಿಳುನಾಡಿನಲ್ಲಿ ಬಿಜೆಪಿಯನ್ನು ಮುನ್ನಡೆಸಿದ್ದ ಅಣ್ಣಾಮಲೈ ನಿರ್ಗಮನವು ಬಿಜೆಪಿ ದೊಡ್ಡ ಹಿನ್ನಡೆಯಾಗುತ್ತದೆ ಎಂಬ ಕಾರಣದಿಂದಾಗಿಯೇ ಹೈಕಮಾಂಡ್ ಅಣ್ಣಾಮಲೈ ಜತೆ ಹಲವು ಸುತ್ತಿನ ಸಂಧಾನ ಯತ್ನಗಳು ನಡೆದಿದ್ದವು. ಆದರೆ ಯಾವುದೇ ಮಾತುಕತೆಯಿಂದ ಮನ ಬದಲಾಯಿಸಿಕೊಳ್ಳದ ಅಣ್ಣಾಮಲೈ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಅಷ್ಟು ಮಾತ್ರವಲ್ಲದೆ ಹೊಸ ರಾಜಕೀಯ ಪಕ್ಷದ ಘೋಷಣೆಯನ್ನೂ ಮಾಡಿದ್ದಾರೆ. ತಮ್ಮ ಹೊಸ ಆಂದೋಲನಕ್ಕೆ “ನಾವು ಜನರು” (We the People) ಎಂದು ಹೆಸರಿಟ್ಟಿದ್ದಾರೆ. ಈ ಎಲ್ಲ ಬೆಳವಣಿಗೆ ನಡುವೆ ಆತಂರಿಕ ಕಲಹ ಮತ್ತು ವೈಫಲ್ಯವನ್ನು ಮುಚ್ಚಿಡುವ ಯತ್ನದಲ್ಲಿದೆ ಬಿಜೆಪಿ.

ಕಳೆದ ಕೆಲವು ವರ್ಷಗಳಲ್ಲಿ ತಮಿಳುನಾಡಿನಲ್ಲಿ ಬಿಜೆಪಿಗೆ ಒಂದು ಆಕ್ರಮಣಕಾರಿ ಮತ್ತು ಸಕ್ರಿಯ ಗುರುತು ತಂದುಕೊಟ್ಟವರು ಅಣ್ಣಾಮಲೈ. ದ್ರಾವಿಡ ರಾಜಕಾರಣದ ಭದ್ರಕೋಟೆಯಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳಿಗೆ ಪ್ರಬಲ ಪೈಪೋಟಿ ನೀಡಬಲ್ಲ ನಾಯಕನಾಗಿ ಅವರು ಹೊರಹೊಮ್ಮಿದ್ದರು. ತಕ್ಷಣವೇ ಅವರ ನಿರ್ಗಮನವಾದರೆ, ತಮಿಳುನಾಡಿನಲ್ಲಿ ಪಕ್ಷ ಕಟ್ಟಿದ ಶ್ರಮ ವ್ಯರ್ಥವಾಗಬಹುದು ಮತ್ತು ನಾಯಕತ್ವದ ಶೂನ್ಯತೆ ಸೃಷ್ಟಿಯಾಗಬಹುದು ಎಂಬ ಆತಂಕ ಹೈಕಮಾಂಡ್‌ಗೆ ಇದೆ.

ಇದನ್ನು ಓದಿದ್ದೀರಾ? ಬಿಜೆಪಿ ತೊರೆದ ಅಣ್ಣಾಮಲೈ; ‘ನಮಗೂ ನಿಮಗೂ ಹೊಂದುವುದಿಲ್ಲ’ – ರಾಜೀನಾಮೆ ಪತ್ರದಲ್ಲಿ ಏನಿದೆ?

ಇಂದು ತಮಿಳುನಾಡಿನಲ್ಲಿ ಜೋಸೆಫ್ ವಿಜಯ್ ಅವರ ಟಿವಿಕೆ ಹೆಚ್ಚು ಸದ್ದು ಮಾಡುತ್ತಿದ್ದರೂ ಅಣ್ಣಾಮಲೈ ಒಂದು ಕಾಲದಲ್ಲಿ ತಮಿಳುನಾಡಿನಲ್ಲಿ ತಮ್ಮ ಮಾಜಿ ಐಪಿಎಸ್ ಅಧಿಕಾರಿಯ ಇಮೇಜ್ ಮತ್ತು ಭ್ರಷ್ಟಾಚಾರದ ವಿರುದ್ಧದ ಆಕ್ರಮಣಕಾರಿ ಭಾಷಣಗಳ ಮೂಲಕ ಯುವ ಪೀಳಿಗೆಯನ್ನು ಕೊಂಚ ಸೆಳೆದವರು. ಅವರು ಬಿಜೆಪಿಯನ್ನು ತೊರೆದಾಗ ಅವರೊಂದಿಗೆ ಬಿಜೆಪಿಗೆ ತಮಿಳುನಾಡಿನಲ್ಲಿರುವ ಕೊಂಚ ಮತದಾರರೂ ಪಕ್ಷದಿಂದ ದೂರವಾಗಬಹುದು ಎಂಬ ಭೀತಿಯೂ ಬಿಜೆಪಿಗಿದೆ.

ಅಷ್ಟಕ್ಕೂ ಓರ್ವ ಪ್ರಭಾವಿ ನಾಯಕ ಪಕ್ಷ ತೊರೆಯುವುದೆಂದರೆ ಆ ಪಕ್ಷದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಈ ವೈಫಲ್ಯವನ್ನು ಮುಚ್ಚಿಹಾಕುವ ಪ್ರಯತ್ನದಲ್ಲಿ ಈಗ ಬಿಜೆಪಿಯಿದೆ. ವಿರೋಧ ಪಕ್ಷಗಳಿಗೆ ಈ ವೈಫಲ್ಯವೇ ದೊಡ್ಡ ಅಸ್ತ್ರ ಆಗಬಹುದು ಎಂಬ ಆತಂಕದಲ್ಲಿ ಹೇಳಿಕೆಗಳನ್ನು ನೀಡಲು ಆರಂಭಿಸಿದೆ. ಅದಕ್ಕಾಗಿಯೇ, “ಪಕ್ಷದಲ್ಲಿ ಎಲ್ಲವೂ ಸರಿಯಾಗಿದೆ” ಎಂದು ಹೇಳಿಕೊಳ್ಳುತ್ತಿದೆ. ಯಾವುದೇ ನಷ್ಟವಿಲ್ಲ ಎಂದು ಬಿಜೆಪಿ ಹೇಳಿದರೂ ತಮಿಳುನಾಡಿನಲ್ಲಿ ನೆಲೆಯೂರಲು ಹೆಣಗಾಡುತ್ತಿರುವ ಬಿಜೆಪಿಗೆ ಅಣ್ಣಾಮಲೈ ನಿರ್ಗಮನ ದೊಡ್ಡ ಹಿನ್ನಡೆ ಎಂಬುದು ಸತ್ಯ. ಇದೇ ಕಾರಣಕ್ಕೆ ಅಣ್ಣಾಮಲೈ ಮನವೊಲಿಸಲು ಬಿಜೆಪಿ ಸತತ ಪ್ರಯತ್ನ ಮಾಡಿದ್ದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...