ಪೌರತ್ವ ನಿಮ್ಮ ಕಾರ್ಯವ್ಯಾಪ್ತಿಯಲ್ಲ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಚಾಟಿ

Date:

ಮುಂಬರುವ ವಿಧಾನಸಭೆ ಚುನಾವಣೆಗೆ ಮೊದಲು ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಹಲವಾರು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಾರಂಭಿಸಿದೆ.

- Advertisement -

ಚುನಾವಣಾ ಆಯೋಗದ ಕ್ರಮವನ್ನು ಟೀಕಿಸಿರುವ ಸುಪ್ರೀಂ ಕೋರ್ಟ್, ಮತದಾರ ಪಟ್ಟಿಗಳ ವಿಶೇಷ ಪರಿಷ್ಕರಣೆಯ ಸಮಯದಲ್ಲಿ ನೀವು ಪೌರತ್ವದ ವಿಷಯವನ್ನು ಏಕೆ ತೆಗೆದುಕೊಂಡಿದ್ದೀರಿ, ಅದು ಗೃಹ ಸಚಿವಾಲಯದ ಅಡಿಯಲ್ಲಿ ಬರುತ್ತದೆಯೇ ಹೊರತು ಚುನಾವಣಾ ಆಯೋಗದ ಅಡಿಯಲ್ಲಲ್ಲ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸ್ವೀಕೃತ ದಾಖಲೆಗಳ ಪಟ್ಟಿಯಿಂದ ಆಧಾರ್ ಕಾರ್ಡ್‌ಗಳನ್ನು ಹೊರಗಿಡುವ ಬಗ್ಗೆ ಕೂಡ ಸುಪ್ರೀಂ ಕೋರ್ಟ್ ಪೀಠ ಕಳವಳ ವ್ಯಕ್ತಪಡಿಸಿದೆ. ದೇಶದ ನಾಗರಿಕರ ಗುರುತಿನ ಪುರಾವೆಯಾಗಿ ಆಧಾರ್ ಅನ್ನು ದೇಶಾದ್ಯಂತ ಬಳಸಲಾಗುತ್ತಿರುವುದರಿಂದ ಅದನ್ನು ಏಕೆ ಪರಿಗಣಿಸಲಾಗಿಲ್ಲ ಎಂಬುದರ ಕುರಿತು ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ನ್ಯಾಯಾಲಯವು ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಆದಾಗ್ಯೂ, ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (ಸ್ಪೆಷಲ್‌ ಇಂಟೆನ್ಸಿವ್‌ ರಿವಿಜನ್‌) ಮಾಡುವುದನ್ನು ಮುಂದುವರಿಸಲು ಅವಕಾಶ ನೀಡಿರುವ ಸುಪ್ರೀಂ ಕೋರ್ಟ್‌, “ಪರಿಷ್ಕರಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗವು ನ್ಯಾಯದ ಹಿತದೃಷ್ಟಿಯಿಂದ ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಮತದಾರರ ಗುರುತಿನ ಚೀಟಿ ಮುಂತಾದ ದಾಖಲೆಗಳನ್ನು ಪರಿಗಣಿಸಬೇಕು” ಎಂದು ಸೂಚಿಸಿದೆ.

ಇದನ್ನು ಓದಿದ್ದೀರಾ? ಲಾರಾ ಮೇಲಿನ ಗೌರವದಿಂದ 400ರ ಗಡಿ ಸಮೀಪಿಸಲಿಲ್ಲ; 367 ರನ್‌ ಸಿಡಿಸಿದ ವಿಯಾನ್ ಮುಲ್ಡರ್ ಮಾತು

ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಹಲವು ವಿರೋಧ ಪಕ್ಷದ ಸಂಸದರು ಸೇರಿದಂತೆ 10ಕ್ಕೂ ಹೆಚ್ಚು ಅರ್ಜಿಗಳು ಚುನಾವಣಾ ಆಯೋಗದ ಆದೇಶವನ್ನು ರದ್ದುಗೊಳಿಸಲು ಒತ್ತಾಯಿಸಿವೆ. ಈ ಪ್ರಕ್ರಿಯೆಯನ್ನು ಪ್ರಶ್ನಿಸುವ ಅರ್ಜಿಗಳಿಗೆ ಪ್ರಾಥಮಿಕ ಆಕ್ಷೇಪಣೆಗಳಿವೆ, ಪರಿಷ್ಕರಣೆಯನ್ನು ಸಂವಿಧಾನಕ್ಕೆ ಅನುಗುಣವಾಗಿ ನಡೆಸಲಾಗುತ್ತಿದೆ ಎಂದು ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ಮುಂದೆ ಪ್ರತಿಪಾದಿಸಿದೆ.

ಕೊನೆಯ ಬಾರಿಗೆ ಇಂತಹ ಸಮಗ್ರ ಪರಿಷ್ಕರಣೆ ನಡೆಸಿದ್ದು, 2003 ರಲ್ಲಿ. ಪ್ರಸ್ತುತ ನವೀಕರಣವು ಸಕಾಲಿಕ ಮತ್ತು ಅಗತ್ಯವಾಗಿದೆ ಎಂದು ಚುನಾವಣಾ ಆಯೋಗ ಒತ್ತಿ ಹೇಳಿದೆ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂಆರ್‌ಎಲ್ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ವಿರುದ್ಧದ ತನಿಖೆಗೆ 7 ದಿನ ಸುಪ್ರೀಂ ತಡೆ

ಕೊಚ್ಚಿನ್ ಮಿನರಲ್ಸ್ ಅಂಡ್ ರುಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಮತ್ತು ಎಕ್ಸಾಲಾಜಿಕ್ ಕಂಪನಿ...

ದೆಹಲಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಹಿಂಪಡೆದ ಸಿಜೆಪಿ ನಾಯಕರು

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ...

ಜೆಎನ್‌ಯು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ: ಅಮಾನತು ಆದೇಶ ವಾಪಸ್, 17 ದಿನಗಳ ಪ್ರತಿಭಟನೆ ಅಂತ್ಯ

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಸಂಘದ (ಜೆಎನ್‌ಯುಎಸ್‌ಯು) ಪದಾಧಿಕಾರಿಗಳ ಮೇಲಿದ್ದ...